Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಪೂರ್ವಕಾಲ ವೃತ್ತಾಂತ 2

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಇಸ್ರಾಯೇಲನ ಪುತ್ರರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,
2ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್. ಯೆಹೂದ ಹೆಚ್ರೋನನ ಪುತ್ರರಿಗೆ
3ಯೆಹೂದನ ಪುತ್ರರು: ಏರ್, ಓನಾನ್, ಶೇಲಹ. ಈ ಮೂವರು ಅವನಿಗೆ ಶೂನನ ಮಗಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಯೆಹೂದನ ಚೊಚ್ಚಲಮಗನಾದ ಏರನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟವನಾದ್ದರಿಂದ, ದೇವರು ಅವನನ್ನು ಮರಣಕ್ಕೆ ಒಪ್ಪಿಸಿದರು.
4ಯೆಹೂದನ ಸೊಸೆ ತಾಮಾರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಪುತ್ರರೆಲ್ಲರೂ ಐದು ಮಂದಿ.
5ಪೆರೆಚನ ಪುತ್ರರು: ಹೆಚ್ರೋನ್, ಹಾಮೂಲ್.
6ಜೆರಹನ ಪುತ್ರರು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ, ಒಟ್ಟು ಐದು ಮಂದಿ.
7ಕರ್ಮೀಯ ಪುತ್ರರು: ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲರನ್ನು ಆಪತ್ತಿಗೆ ಗುರಿಪಡಿಸಿದ ಆಕಾನನು.
8ಏತಾನನ ಮಗನು ಅಜರ್ಯನು.
9ಹೆಚ್ರೋನನಿಗೆ ಹುಟ್ಟಿದ ಪುತ್ರರು: ಯೆರಹ್ಮೇಲ್, ರಾಮ್, ಕೆಲೂಬಾಯ್. ಹೆಚ್ರೋನನ ಮಗ ರಾಮನಿಂದ
10ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು. ಅಮ್ಮೀನಾದಾಬನು ಯೆಹೂದನ ಮಕ್ಕಳಿಗೆ ನಾಯಕನಾದ ನಹಶೋನನ ತಂದೆ.
11ನಹಶೋನನು ಸಲ್ಮನನ ತಂದೆಯಾಗಿದ್ದನು, ಸಲ್ಮನ ಬೋವಜನ ತಂದೆ,
12ಬೋವಜನು ಓಬೇದನ ತಂದೆ, ಓಬೇದನು ಇಷಯನ ತಂದೆ.
13ಇಷಯನು ತನ್ನ ಚೊಚ್ಚಲ ಮಗ ಎಲೀಯಾಬನನ್ನೂ, ಎರಡನೆಯವನಾದ ಅಬೀನಾದಾಬನನ್ನೂ, ಮೂರನೆಯವನಾದ ಶಿಮ್ಮನನ್ನೂ,
14ನಾಲ್ಕನೆಯವನಾದ ನೆತನೆಯೇಲನನ್ನೂ, ಐದನೆಯವನಾದ ರದ್ದೈನನ್ನೂ,
15ಆರನೆಯವನಾದ ಓಚೆಮನನ್ನೂ, ಏಳನೆಯವನಾದ ದಾವೀದನಿಗೆ ತಂದೆಯಾಗಿದ್ದನು.
16ಅವರ ಇಬ್ಬರು ಸಹೋದರಿಯರು ಚೆರೂಯಳು, ಅಬೀಗೈಲಳು. ಚೆರೂಯಳ ಮೂವರು ಮಕ್ಕಳು ಅಬೀಷೈ, ಯೋವಾಬ್, ಅಸಾಯೇಲ್.
17ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು. ಹೆಚ್ರೋನನ ಮಗ ಕಾಲೇಬನು
18ಹೆಚ್ರೋನನ ಮಗನಾದ ಕಾಲೇಬನು ಅಜೂಬಳಿಂದಲೂ ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಇವಳ ಪುತ್ರರು: ಯೇಷೆರನು, ಶೋಬಾಬನು, ಅರ್ದೋನನು.
19ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.
20ಹೂರನು ಊರಿಯನ ತಂದೆ; ಊರಿಯನು ಬೆಚಲಯೇಲನ ತಂದೆ.
21ತರುವಾಯ ಹೆಚ್ರೋನನು ಅರವತ್ತು ವರ್ಷದವನಾಗಿರುವಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬ ಎಂಬ ಮಗನನ್ನು ಹೆತ್ತಳು.
22ಸೆಗೂಬನು ಯಾಯೀರನ ತಂದೆ, ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತು ಮೂರು ಪಟ್ಟಣಗಳು ಇದ್ದವು.
23ಇವನಿಗೆ ಗಿಲ್ಯಾದಿನ ದೇಶದಲ್ಲಿ ಅರುವತ್ತು ಪಟ್ಟಣಗಳು ಇದ್ದವು. ಇದಲ್ಲದೆ ಅವನು ಗೆಷೂರ್ಯರನ್ನೂ, ಅರಾಮ್ಯರನ್ನೂ, ಯಾಯೀರನ ಪಟ್ಟಣಗಳನ್ನೂ, ಕೆನಾತ್ ಮತ್ತು ಅದರ ಪಟ್ಟಣಗಳನ್ನೂ, ಒಟ್ಟು ಅರವತ್ತು ಪಟ್ಟಣಗಳನ್ನು ಗೆದ್ದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ವಂಶದವರಿಗೆ ಇದ್ದವು.
24ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವನ ತಂದೆಯು. ಹೆಚ್ರೋನನ ಮಗನಾದ ಯೆರಹ್ಮೇಲನು
25ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನ ಪುತ್ರರು: ಚೊಚ್ಚಲ ಮಗ ರಾಮ ಮತ್ತು ಬೂನ, ಓರೆನ, ಓಚೆಮ, ಅಹೀಯ.
26ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು. ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ.
27ಯೆರಹ್ಮೇಲನ ಚೊಚ್ಚಲಮಗನಾದ ರಾಮನ ಪುತ್ರರು: ಮಾಚ್, ಯಾಮೀನ್, ಏಕೆರ್.
28ಓನಾಮನ ಪುತ್ರರು: ಶಮ್ಮಾಯ, ಯಾದ; ಶಮ್ಮಾಯನ ಪುತ್ರರು: ನಾದಾಬನು, ಅಬಿಷೂರನು.
29ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.
30ನಾದಾಬನ ಪುತ್ರರು ಸೆಲೆದ್, ಅಪ್ಪಯಿಮ್; ಸೆಲೆದನು ಮಕ್ಕಳಿಲ್ಲದೆ ಸತ್ತನು.
31ಅಪ್ಪಯಿಮ್ ಇವನ ಪುತ್ರರು: ಇಷ್ಷೀಯು; ಇಷ್ಷೀಯನ ಮಗನು ಶೇಷಾನನು; ಶೇಷಾನನ ಮಗನು; ಅಹ್ಲಾಯಿಯನು;
32ಶಮ್ಮಾಯನ ಸಹೋದರನಾದ ಯಾದನ ಪುತ್ರರು: ಯೆತೆರನ ಮತ್ತು ಯೋನಾತಾನ್. ಯೆತೆರನು ಮಕ್ಕಳಿಲ್ಲದೆ ಸತ್ತನು;
33ಯೋನಾತಾನನ ಪುತ್ರರು: ಪೆಲೆತನು, ಜಾಜನು. ಇವರೇ ಯೆರಹ್ಮೇಲನ ವಂಶಜರು.
34ಶೇಷಾನನಿಗೆ ಪುತ್ರರಿರಲಿಲ್ಲ. ಪುತ್ರಿಯರಿದ್ದರು. ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಈಜಿಪ್ಟಿನವನಾದ ಸೇವಕನಿದ್ದನು.
35ಶೇಷಾನನು ತನ್ನ ಪುತ್ರಿಯನ್ನು ತನ್ನ ಸೇವಕ ಯರ್ಹನಿಗೆ ಮದುವೆಮಾಡಿಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು.
36ಅತ್ತೈ ನಾತಾನನ ತಂದೆ; ನಾತಾನನು ಜಾಬಾದನ ತಂದೆ.
37ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾನನು ಓಬೇದನನ್ನು ಪಡೆದನು.
38ಓಬೇದನು ಯೇಹುವನ್ನು ಪಡೆದನು; ಯೇಹುವು ಅಜರ್ಯನನ್ನು ಪಡೆದನು.
39ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು.
40ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.
41ಶಲ್ಲೂಮನು ಯೆಕಮ್ಯಾಹನ ತಂದೆ; ಯೆಕಮ್ಯಾಹನು ಎಲೀಷಾಮನ ತಂದೆ. ಕಾಲೇಬನ ಗೋತ್ರಗಳು
42ಯೆರಹ್ಮೇಲನ ಸಹೋದರನಾದ ಕಾಲೇಬನ ಪುತ್ರರು: ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಹೆಬ್ರೋನನ ತಂದೆಯಾದ ಮಾರೇಷನಿಗೆ ಮಕ್ಕಳು ಜನಿಸಿದರು.
43ಹೆಬ್ರೋನನ ಪುತ್ರರು: ಕೋರಹನು, ತಪ್ಪೂಹನು, ರೆಕೆಮನು, ಶೆಮನು.
44ಶೆಮನು ರಹಮ್ಯನ ತಂದೆ ರಹಮ್ಯನು ಯೊರ್ಕೆಯಾಮನ ತಂದೆ. ರೆಕೆಮನು ಶಮ್ಮಾಯನನ್ನು ಪಡೆದನು.
45ಶಮ್ಮಾಯಿಯ ಮಗನು ಮಾವೋನ್ಯನು; ಈ ಮಾವೋನ್ಯನು ಬೇತ್ ಚೂರನಿಗೆ ತಂದೆಯಾಗಿದ್ದನು.
46ಕಾಲೇಬನ ಉಪಪತ್ನಿಯಾದ ಏಫಾಳು ಹಾರಾನ್, ಮೋಚ, ಗಾಜೇಜ ಎಂಬುವರನ್ನು ಹೆತ್ತಳು. ಹಾರಾನನು ಗಾಜೇಜನ ತಂದೆ.
47ಯಾದೈಯ ಪುತ್ರರು: ರೆಗೆಮ್, ಯೋತಾಮ್, ಗೇಷಾನ್, ಪೆಲಟ್, ಏಫ್, ಶಾಫ್.
48ಕಾಲೇಬನ ಇನ್ನೊಬ್ಬ ಉಪಪತ್ನಿಯಾದ ಮಾಕಳು ಶೇಬರ್, ತಿರ್ಹನ ಎಂಬುವರನ್ನು ಹೆತ್ತಳು.
49ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್, ಮಕ್‌ಬೇನ ಮತ್ತು ಗಿಬೆಯ ಊರುಗಳವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಸಾ.
50ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ್. ಹೂರನ ಮಗ ಶೋಬಾಲ್ ಕಿರ್ಯತ್ ಯಾರೀಮ್ ಪಟ್ಟಣವನ್ನೂ,
51ಅವನ ಇನ್ನೊಬ್ಬ ಮಗ ಸಲ್ಮ ಬೇತ್ಲೆಹೇಮನ್ನೂ, ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.
52ಕಿರ್ಯತ್ ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹಾರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,
53ಹಾಗೂ ಕಿರ್ಯತ್ ಯಾರೀಮನವರ ಗೋತ್ರಗಳು: ಯೆತೆರಿಯರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು, ಇವರಿಂದ ಚೊರ್‍ರಾತ್ಯರೂ, ಎಷ್ಟಾವೋಲ್ಯರೂ ಹುಟ್ಟಿದರು.
54ಸಲ್ಮನ ವಂಶಜರು: ಬೇತ್ಲೆಹೇಮ್, ನೆಟೋಫಾ, ಅಟರೋತ್ ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಉತ್ಪತ್ತಿಯಾದರು.
55ಯಾಬೇಚಿನಲ್ಲಿ ವಾಸಿಸುವ ಬರಹಗಾರರ ಕುಟುಂಬದವರಾದ ತಿರ್ರಾತ್ಯರು, ಶಿಮೆಯಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮ್ಮತನಿಂದ ಉತ್ಪನ್ನರಾದ ಕೇನ್ಯರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.