Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಪೂರ್ವಕಾಲ ವೃತ್ತಾಂತ 22

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಆಗ ದಾವೀದನು, “ಇದೇ ದೇವರಾದ ಯೆಹೋವ ದೇವರ ಆಲಯ, ಮತ್ತು ಇದೇ ಇಸ್ರಾಯೇಲರ ದಹನಬಲಿಪೀಠ,” ಎಂದನು. ದೇವಾಲಯದ ಕಟ್ಟಡಕ್ಕಾಗಿ ಸಿದ್ಧತೆಗಳು
2ದಾವೀದನು ಇಸ್ರಾಯೇಲ್ ದೇಶದಲ್ಲಿರುವ ಪರದೇಶಸ್ಥರನ್ನು ಕೂಡಿಸಲು ಹೇಳಿ, ದೇವರ ಆಲಯವನ್ನು ಕಟ್ಟಿಸುವುದಕ್ಕೆ ಕೆತ್ತಿದ ಕಲ್ಲುಗಳನ್ನು ಕಡಿಯುವ ಹಾಗೆ ಕಲ್ಲುಕುಟಿಗರನ್ನು ನೇಮಿಸಿದನು.
3ದಾವೀದನು ಬಾಗಿಲುಗಳ ಕದಗಳನ್ನು ಜೋಡಿಸುವುದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಬಹಳ ಕಬ್ಬಿಣವನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ ಸಿದ್ಧಮಾಡಿಸಿದನು.
4ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿಸಿದನು. ಏಕೆಂದರೆ ಸೀದೋನ್ಯರೂ, ಟೈರಿನವರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.
5ದಾವೀದನು, “ನನ್ನ ಮಗ ಸೊಲೊಮೋನನು ಎಳೆಯ ಪ್ರಾಯದವನಾಗಿದ್ದಾನೆ. ಯೆಹೋವ ದೇವರಿಗೆ ಕಟ್ಟಬೇಕಾದ ಆಲಯವು ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ, ಸೌಂದರ್ಯದಲ್ಲಿಯೂ ಅಧಿಕ ಘನವುಳ್ಳದ್ದಾಗಿರಬೇಕು. ನಾನು ಅದಕ್ಕೋಸ್ಕರ ಈಗ ಸಿದ್ಧಮಾಡುವೆನು,” ಎಂದು ಹೇಳಿದನು. ಆದ್ದರಿಂದ ದಾವೀದನು ಸಾಯುವುದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
6ತನ್ನ ಮಗ ಸೊಲೊಮೋನನನ್ನು ಕಳುಹಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಆಲಯವನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
7ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು.
8ಆದರೆ ಯೆಹೋವ ದೇವರಿಂದ ನನಗೆ ಉಂಟಾದ ವಾಕ್ಯವೇನೆಂದರೆ: ‘ನೀನು ಬಹು ರಕ್ತವನ್ನು ಚೆಲ್ಲಿದ್ದೀಯೆ; ಮಹಾ ಯುದ್ಧಗಳನ್ನು ಮಾಡಿದ್ದೀಯೆ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ. ಏಕೆಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಚೆಲ್ಲಿದಿ.
9ಶಾಂತಿ ಸಮಾಧಾನದ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು. ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ವಿಶ್ರಾಂತಿಯನ್ನು ಕೊಡುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಶಾಂತಿ ಸಮಾಧಾನವನ್ನೂ ಕೊಡುವೆನು.
10ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ.
11“ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಕುರಿತು ಹೇಳಿದ ಪ್ರಕಾರ, ನೀನು ಕೃತಾರ್ಥನಾಗಿ, ನೀನು ನಿನ್ನ ದೇವರಾದ ಯೆಹೋವ ದೇವರ ಆಲಯವನ್ನು ಕಟ್ಟಿಸುವಂತೆ ಅವರು ನಿನ್ನ ಸಂಗಡ ಇರಲಿ.
12ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.
13ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.
14“ಇಗೋ, ಕಷ್ಟಪಟ್ಟು ನಾನು ಯೆಹೋವ ದೇವರ ಆಲಯಕ್ಕೋಸ್ಕರ ಮೂರು ಸಾವಿರದ ನಾನೂರ ಎಪ್ಪತ್ತು ಮೆಟ್ರಿಕ್ ಟನ್ ಬಂಗಾರವನ್ನೂ, ಮೂವತ್ತ ನಾಲ್ಕು ಸಾವಿರದ ಐನೂರು ಮೆಟ್ರಿಕ್ ಟನ್ ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ, ಕಬ್ಬಿಣವನ್ನೂ ಮರಗಳನ್ನೂ, ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಸೇರಿಸಬಹುದು.
15ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ, ಕಲ್ಲು ಕೆಲಸದವರೂ, ಕಲ್ಲುಕುಟಿಗರೂ, ಬಡಗಿಯವರೂ, ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.
16ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.
17ಇದಲ್ಲದೆ, ದಾವೀದನು ತನ್ನ ಮಗ ಸೊಲೊಮೋನನಿಗೆ ಸಹಾಯಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ,
18“ನಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ, ಅಲ್ಲವೇ? ಎಲ್ಲಾ ಕಡೆಗಳಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ, ಅಲ್ಲವೇ? ನಿಶ್ಚಯವಾಗಿ ಅವರು ದೇಶ ನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ, ದೇಶವು ಯೆಹೋವ ದೇವರ ಮುಂದೆಯೂ, ಅವರ ಜನರ ಮುಂದೆಯೂ ಸ್ವಾಧೀನವಾಯಿತು.
19ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.