Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಪೂರ್ವಕಾಲ ವೃತ್ತಾಂತ 26

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ದ್ವಾರಪಾಲಕರ ವರ್ಗಗಳು: ಕೋರಹಿಯರೊಳಗೆ: ಆಸಾಫನ ಪುತ್ರರಲ್ಲಿ ಒಬ್ಬನಾಗಿರುವ ಕೋರೆಯ ಮಗನಾದ ಮೆಷೆಲೆಮ್ಯನು.
2ಮೆಷೆಲೆಮ್ಯನ ಪುತ್ರರು: ಚೊಚ್ಚಲ ಮಗನು ಜೆಕರ್ಯನು; ಎರಡನೆಯವನು ಯೆದೀಯಯೇಲನು; ಮೂರನೆಯವನು ಜೆಬದ್ಯನು; ನಾಲ್ಕನೆಯವನು ಯತ್ನಿಯೇಲನು;
3ಐದನೆಯವನು ಏಲಾಮನು; ಆರನೆಯವನು ಯೆಹೋಹಾನಾನನು; ಏಳನೆಯವನು ಎಲಿಹೋಯೇನೈನು.
4ಓಬೇದ್ ಏದೋಮನ ಪುತ್ರರು: ಚೊಚ್ಚಲ ಮಗನು ಶೆಮಾಯ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ; ನಾಲ್ಕನೆಯವನು ಸಾಕಾರ; ಐದನೆಯವನು ನೆತನೆಯೇಲ್;
5ಆರನೆಯವನು ಅಮ್ಮಿಯೇಲ್; ಏಳನೆಯವನು ಇಸ್ಸಾಕಾರ್ ಮತ್ತು ಎಂಟನೆಯವನು ಪೆಯುಲ್ಲೆತೈ. ಓಬೇದ್ ಎದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನು.
6ಇದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಪುತ್ರರು ಹುಟ್ಟಿದರು, ಅವರು ಪರಾಕ್ರಮಶಾಲಿಗಳಾಗಿದ್ದರು.
7ಶೆಮಾಯನ ಪುತ್ರರು ಯಾರೆಂದರೆ: ಒತ್ನಿಯು, ರೆಫಾಯೇಲನು, ಓಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.
8ಇವರೆಲ್ಲರು ಓಬೇದ್ ಏದೋಮನ ಪುತ್ರರು; ಇವರೂ, ತಮ್ಮ ಪುತ್ರರೂ, ತಮ್ಮ ಸಹೋದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೆದೆದೋಮನವರು ಅರವತ್ತೆರಡು ಮಂದಿಯಾಗಿದ್ದರು.
9ಮೆಷೆಲೆಮ್ಯನಿಗೆ ಬಲವುಳ್ಳ ಪುತ್ರರೂ, ಸಹೋದರರೂ ಹದಿನೆಂಟು ಮಂದಿಯಾಗಿದ್ದರು.
10ಇದಲ್ಲದೆ ಮೆರಾರೀಯ ಮಕ್ಕಳಲ್ಲಿರುವ ಹೋಸ ಎಂಬವನಿಗೆ ಮಕ್ಕಳಿದ್ದರು. ಮೊದಲನೆಯವನು ಶಿಮ್ರಿಯು; ಅವನು ಚೊಚ್ಚಲ ಮಗನಲ್ಲ; ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;
11ಎರಡನೆಯವನು ಹಿಲ್ಕೀಯನು; ಮೂರನೆಯವನು ಟೆಬಲ್ಯನು; ನಾಲ್ಕನೆಯವನು ಜಕರೀಯನು. ಹೋಸನ ಸಮಸ್ತ ಪುತ್ರರು ಮತ್ತು ಸಹೋದರರೂ ಹದಿಮೂರು ಮಂದಿಯಾಗಿದ್ದರು.
12ಇದರಲ್ಲಿ ದ್ವಾರಪಾಲಕರ ವರ್ಗಗಳು ಯೆಹೋವ ದೇವರ ಆಲಯದಲ್ಲಿ ಸೇವೆ ಮಾಡುವುದಕ್ಕೆ ವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲಾಗಿದ್ದವು.
13ಅವರು ಕಿರಿಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಿಲಿಂದ ಬಾಗಿಲಿಗೂ ಚೀಟುಗಳನ್ನು ಹಾಕಿದರು.
14ಪೂರ್ವದಿಕ್ಕಿನ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗ ಬುದ್ಧಿಯುಳ್ಳ ಆಲೋಚನೆಯವನಾಗಿರುವ ಜೆಕರ್ಯನಿಗೋಸ್ಕರ ಹಾಕಿದ ಚೀಟು ಉತ್ತರ ಭಾಗಕ್ಕೆ ಇತ್ತು.
15ಓಬೇದ್ ಏದೋಮನಿಗೆ ದಕ್ಷಿಣ ಭಾಗ ಬಂತು. ಅವನ ಪುತ್ರರಿಗೆ ಉಗ್ರಾಣ ಮನೆ ಬಂತು.
16ಶುಪ್ಪೀಮ್, ಹೋಸ ಎಂಬವರಿಗೆ ಪಶ್ಚಿಮದಲ್ಲಿರುವ ಶೆಲ್ಲೆಕೆತ್ ಎಂಬ ಬಾಗಿಲು ಬಂತು. ಅವು ಮೇಲಕ್ಕೆ ಹೋಗುವ ರಾಜಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.
17ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ,
18ಪಶ್ಚಿಮ ಭಾಗವಾದ ದೇವಾಲಯದ ಅಂಗಳಕ್ಕೆ ಹೋಗುವ ರಾಜಮಾರ್ಗದಲ್ಲಿ ನಾಲ್ಕು ಮಂದಿಯೂ, ದೇವಾಲಯದ ಅಂಗಳ ಬಳಿಯಲ್ಲಿ ಇಬ್ಬರೂ ಇದ್ದರು.
19ಕೋರಹೀಯರ ಪುತ್ರರಲ್ಲಿಯೂ, ಮೆರಾರೀಯ ಪುತ್ರರಲ್ಲಿಯೂ ವಿಭಾಗಿಸಿದ ದ್ವಾರಪಾಲಕರ ವರ್ಗಗಳು ಇವೆ. ಖಜಾಂಚಿಗಳೂ, ಇತರ ಅಧಿಕಾರಿಗಳು
20ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಆಲಯದ ಬೊಕ್ಕಸದ ಮೇಲೆಯೂ, ಪ್ರತಿಷ್ಠಿತವಾದವುಗಳ ಬೊಕ್ಕಸಗಳ ಮೇಲೆಯೂ ಅಧಿಕಾರಿಯಾಗಿದ್ದನು.
21ಲದ್ದಾನನ ವಂಶಜರು: ಗೇರ್ಷೋನ್ಯನಾದ ಲದ್ದಾನನ ಪುತ್ರರು ಕುಟುಂಬಗಳ ಮುಖ್ಯಸ್ಥರಾಗಿದ್ದರು. ಈ ಗೇರ್ಷೋನ್ಯನಾದ ಲಡಾನನ ಮಗನು ಯೆಹೀಯೇಲನು.
22ಯೆಹೀಯೇಲನ ಪುತ್ರರು ಜೇತಾಮನು, ಅವನ ಸಹೋದರನಾದ ಯೋಯೇಲನು; ಇವರು ಯೆಹೋವ ದೇವರ ಆಲಯದ ಬೊಕ್ಕಸಗಳ ಮೇಲೆ ಇದ್ದರು.
23ಅಮ್ರಾಮಿಯರಲ್ಲಿಯೂ ಇಚ್ಹಾರರಲ್ಲಿಯೂ ಹೆಬ್ರೋನಿಯರಲ್ಲಿಯೂ ಉಜ್ಜೀಯೇಲರಲ್ಲಿಯೂ ಇವರ ಸಂತಾನದವರಲ್ಲಿ:
24ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆಗಿರುವ ಶೆಬೂಯೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿದ್ದನು.
25ಇವನ ಸಹೋದರರು, ಎಲೀಯೆಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮ, ಇವನ ಮಗನು ಜಿಕ್ರಿಯು, ಇವನ ಮಗನು ಶೆಲೋಮೋತನು.
26ಈ ಶೆಲೋಮೋತನೂ ಅವನ ಸಹೋದರರೂ ಅರಸನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತ್ರುಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆ ಮಾಡಿದ ಪ್ರತಿಷ್ಠಿತವಾದವುಗಳ ಬೊಕ್ಕಸಗಳನ್ನು ಕಾಯುತ್ತಿದ್ದರು.
27ಅವರು ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವುದಕ್ಕೆ ಯುದ್ಧಗಳಿಂದಲೂ, ಕೊಳ್ಳೆಯಿಂದಲೂ ಸಂಪಾದಿಸಿದವುಗಳನ್ನು ಪ್ರತಿಷ್ಠೆ ಮಾಡಿದರು.
28ಇದಲ್ಲದೆ ದರ್ಶಿಯಾದ ಸಮುಯೇಲನೂ, ಕೀಷನ ಮಗ ಸೌಲನೂ, ನೇರನ ಮಗ ಅಬ್ನೇರನೂ, ಚೆರೂಯಳ ಮಗ ಯೋವಾಬನೂ ಪ್ರತಿಷ್ಠೆ ಮಾಡಿದ್ದೆಲ್ಲವೂ ಮತ್ತು ಯಾರು ಪ್ರತಿಷ್ಠೆ ಮಾಡಿದ್ದರೋ, ಅದೆಲ್ಲವೂ ಶೆಲೋಮೋತನ ಕೈಕೆಳಗೂ, ಅವನ ಸಹೋದರರ ಕೈಕೆಳಗೂ ಇತ್ತು.
29ಇಚ್ಹಾರರಲ್ಲಿ ಕೆನನ್ಯನನ್ನು, ಅವನ ಪುತ್ರರನ್ನು ಪಾರುಪತ್ಯಗಾರರಿಗೋಸ್ಕರವೂ, ನ್ಯಾಯಾಧಿಪತಿಗಳಿಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ನೇಮಿಸಲಾಗಿತ್ತು.
30ಹೆಬ್ರೋನಿಯರಲ್ಲಿ ಬಲವುಳ್ಳವರಾದ ಹಷಬ್ಯನೂ, ಅವನ ಸಹೋದರರೂ ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಅರಸನ ಸೇವೆಯಲ್ಲಿಯೂ ಸಾವಿರದ ಏಳು ನೂರು ಮಂದಿ ಪಶ್ಚಿಮವಾಗಿ ಯೊರ್ದನ್ ನದಿ ಈಚೆಯಲ್ಲಿ ಇಸ್ರಾಯೇಲರೊಳಗೆ ಅಧಿಪತಿಗಳಾಗಿದ್ದರು.
31ಹೆಬ್ರೋನಿಯರಲ್ಲಿ ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀದನ ಆಳಿಕೆಯ ನಲ್ವತ್ತನೆಯ ವರ್ಷದಲ್ಲಿ ಆಯ್ಕೆಯಾಗಿದ್ದರು. ಆಗ ಗಿಲ್ಯಾದಿನ ಯಜ್ಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.
32ಇದಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಕುಟುಂಬಗಳ ಮುಖ್ಯಸ್ಥರಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ರೂಬೇನ್ಯರ ಮೇಲೆಯೂ, ಗಾದ್ಯರ ಮೇಲೆಯೂ, ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳಾಗಿ ಮಾಡಿದನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.