Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಪೂರ್ವಕಾಲ ವೃತ್ತಾಂತ 29

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನೆಂದರೆ, “ದೇವರು ಒಬ್ಬನನ್ನೇ ಆಯ್ದುಕೊಂಡ ನನ್ನ ಮಗ ಸೊಲೊಮೋನನು ಚಿಕ್ಕವನೂ ಎಳೆಯ ಪ್ರಾಯದವನೂ ಆಗಿದ್ದಾನೆ. ಆದರೆ ಕೆಲಸವು ದೊಡ್ಡದು. ಈ ಮಹಾ ಕಟ್ಟಡವು ಮನುಷ್ಯರಿಗೋಸ್ಕರವಲ್ಲ, ದೇವರಾದ ಯೆಹೋವ ದೇವರಿಗೋಸ್ಕರವೇ,
2ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ, ಬಂಗಾರದ ಕೆಲಸಕ್ಕೋಸ್ಕರ ಬಂಗಾರವನ್ನೂ, ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ, ಕಂಚಿನ ಕೆಲಸಕ್ಕೋಸ್ಕರ ಕಂಚನ್ನೂ, ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ, ಮರದ ಕೆಲಸಕ್ಕೋಸ್ಕರ ಮರವನ್ನೂ, ಗೋಮೇಧಿಕ ರತ್ನಗಳನ್ನೂ; ಕೆತ್ತುವುದಕ್ಕೆ ರತ್ನ ವಿಚಿತ್ರವಾದಂಥ ಕಲ್ಲುಗಳನ್ನೂ; ಸಕಲ ಅಮೂಲ್ಯವಾದ ಕಲ್ಲುಗಳನ್ನೂ. ಅಮೃತ ಶಿಲೆಗಳನ್ನೂ ಬಹಳಷ್ಟು ಸಿದ್ಧಮಾಡಿದ್ದೇನೆ.
3ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.
4ಮನೆಗಳ ಗೋಡೆಗಳನ್ನು ಹೊದಿಸುವುದಕ್ಕೆ ಓಫೀರ್ ಬಂಗಾರದಲ್ಲಿ 100 ಮೆಟ್ರಿಕ್ ಟನ್ ಬಂಗಾರವನ್ನೂ, 240 ಮೆಟ್ರಿಕ್ ಟನ್ ಚೊಕ್ಕ ಬೆಳ್ಳಿಯನ್ನೂ ಕೊಟ್ಟಿದ್ದೇನೆ.
5ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ತನ್ನನ್ನೇ ಯೆಹೋವ ದೇವರಿಗೆ ಇಷ್ಟಪೂರ್ವಕವಾಗಿ ಸಮರ್ಪಿಸಿಕೊಳ್ಳುವವರು ಯಾರು?” ಎಂದನು.
6ಆಗ ಪಿತೃಗಳ ಪ್ರಧಾನರೂ, ಇಸ್ರಾಯೇಲ್ ಗೋತ್ರಗಳ ಪ್ರಧಾನರೂ, ಸಹಸ್ರಾಧಿಪತಿಗಳೂ ಶತಾಧಿಪತಿಗಳೂ, ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು,
7ಯೆಹೋವ ದೇವರ ಮನೆಯ ಸೇವೆಗೋಸ್ಕರ ಬಂಗಾರವನ್ನೂ 17 0 ಮೆಟ್ರಿಕ್ ಟನ್, ಮತ್ತು 10,000 ಬಂಗಾರದ ನಾಣ್ಯಗಳನ್ನೂ 34 5 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 61 0 ಮೆಟ್ರಿಕ್ ಟನ್ ಕಂಚನ್ನೂ, 34 50 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.
8ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ, ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವುಗಳನ್ನು ಯೆಹೋವ ದೇವರ ಆಲಯದ ಬೊಕ್ಕಸಕ್ಕೆ ಕೊಟ್ಟರು.
9ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು. ದಾವೀದನ ಪ್ರಾರ್ಥನೆ
10ದಾವೀದನು ಸಮಸ್ತ ಕೂಟದ ಮುಂದೆ ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ನಮ್ಮ ತಂದೆಯಾದ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವು ಯುಗಯುಗಾಂತರಗಳಿಂದ ಯುಗಯುಗಾಂತರಗಳಿಗೂ ಸ್ತುತಿಗೆ ಪಾತ್ರರಾಗಿದ್ದೀರಿ.
11ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.
12ಐಶ್ವರ್ಯವೂ, ಘನವೂ ನಿಮ್ಮ ಬಳಿಯಿಂದ ಬರುತ್ತವೆ. ನೀವು ಸಮಸ್ತವನ್ನು ಆಳಿಕೆಮಾಡುವವರು. ಶಕ್ತಿಯೂ, ಪರಾಕ್ರಮವೂ ನಿಮ್ಮ ಕೈಯಲ್ಲಿ ಇವೆ. ಎಲ್ಲರಿಗೂ ಉನ್ನತಿಯನ್ನೂ, ಬಲವನ್ನೂ ಕೊಡುವುದು ನಿಮ್ಮ ಕೈಯಲ್ಲಿ ಇದೆ.
13ಆದ್ದರಿಂದ ನಮ್ಮ ದೇವರೇ, ನಾವು ನಿಮ್ಮನ್ನು ಸ್ತುತಿಸಿ, ನಿಮ್ಮ ಮಹಿಮೆಯುಳ್ಳ ನಾಮವನ್ನು ಕೊಂಡಾಡುತ್ತೇವೆ.
14“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.
15ನಿಮ್ಮ ಕೈಯಿಂದಲೇ ನಿಮಗೆ ಅರ್ಪಿಸಿದೆವು. ಏಕೆಂದರೆ ನಾವು ನಿಮ್ಮ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ, ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಇವೆ; ನಿರೀಕ್ಷೆಯು ಇಲ್ಲ.
16ನಮ್ಮ ದೇವರಾದ ಯೆಹೋವ ದೇವರೇ, ನಿಮ್ಮ ಪರಿಶುದ್ಧ ನಾಮಕ್ಕೋಸ್ಕರ ನಿಮಗೆ ಆಲಯವನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿಮ್ಮಿಂದ ಬಂದದ್ದು. ಸಮಸ್ತವೂ ನಿಮ್ಮದು.
17ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.
18ನಮ್ಮ ಪಿತೃಗಳಾದ ಅಬ್ರಹಾಮನ, ಇಸಾಕನ, ಇಸ್ರಾಯೇಲನ ದೇವರಾದ ಯೆಹೋವ ದೇವರೇ, ನಿಮ್ಮ ಜನರ ಹೃದಯದ ಮನೋಭಾವನೆಯಲ್ಲಿ ಭಕ್ತಿಯನ್ನು ನಿರಂತರವಾಗಿ ಕಾಪಾಡಿ, ಅವರ ಹೃದಯವನ್ನು ನಿಮಗೆ ಸಿದ್ಧಮಾಡಿ.
19ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.
20ತರುವಾಯ ದಾವೀದನು ಸಮಸ್ತ ಸಭೆಗೆ, “ಈಗ ನಿಮ್ಮ ದೇವರಾದ ಯೆಹೋವ ದೇವರನ್ನು ಸ್ತುತಿಸಿರಿ,” ಎಂದನು. ಆಗ ಜನರೆಲ್ಲರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ತಮ್ಮ ತಲೆಗಳನ್ನು ಬಾಗಿಸಿ ಯೆಹೋವ ದೇವರನ್ನೂ, ಅರಸನನ್ನೂ ವಂದಿಸಿದರು. ಸೊಲೊಮೋನನನ್ನು ಅರಸನನ್ನಾಗಿ ಸ್ವೀಕರಿಸಿದ್ದು
21ಮಾರನೆಯ ದಿವಸದಲ್ಲಿ ಅವರು ಯೆಹೋವ ದೇವರಿಗೆ ಬಲಿಗಳನ್ನು ವಧಿಸಿ, ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ, ಅವುಗಳ ಪಾನದ ಅರ್ಪಣೆಗಳನ್ನೂ, ಸಮಸ್ತ ಇಸ್ರಾಯೇಲರಿಗೋಸ್ಕರ ಬಹಳವಾಗಿ ಬಲಿಗಳನ್ನು ಅರ್ಪಿಸಿದರು.
22ಆ ದಿವಸದಲ್ಲಿ ಮಹಾ ಸಂತೋಷದಿಂದ ಯೆಹೋವ ದೇವರ ಮುಂದೆ ತಿಂದು ಕುಡಿದರು. ಎರಡನೆಯ ಸಾರಿ ದಾವೀದನ ಮಗ ಸೊಲೊಮೋನನನ್ನು ಅರಸನನ್ನಾಗಿ ಸ್ವೀಕರಿಸಿದರು. ಯೆಹೋವ ದೇವರ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕನನ್ನು ಯಾಜಕನಾಗಿಯೂ ಅಭಿಷೇಕಿಸಿದರು.
23ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಯೆಹೋವ ದೇವರ ಸಿಂಹಾಸನದ ಮೇಲೆ ಕುಳಿತುಕೊಂಡು, ಸಮೃದ್ಧಿ ಹೊಂದಿದನು. ಸಮಸ್ತ ಇಸ್ರಾಯೇಲರು ಅವನಿಗೆ ವಿಧೇಯರಾದರು.
24ಎಲ್ಲಾ ಪ್ರಧಾನರೂ, ಪರಾಕ್ರಮಶಾಲಿಗಳೂ, ಅರಸನಾದ ದಾವೀದನ ಸಮಸ್ತ ಪುತ್ರರೂ ಅರಸನಾದ ಸೊಲೊಮೋನನಿಗೆ ಅಧೀನರಾದರು.
25ಇದಲ್ಲದೆ ಯೆಹೋವ ದೇವರು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ, ಇಸ್ರಾಯೇಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸನಿಗಾದರೂ ಇಲ್ಲದಂಥ ರಾಜ್ಯದ ವೈಭವವನ್ನು ಅವನಿಗೆ ಕೊಟ್ಟರು. ದಾವೀದನ ಮರಣವು
26ಇಷಯನ ಮಗ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.
27ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.
28ಅವನು ದೀರ್ಘಾಯುಷ್ಯದಿಂದಲೂ, ಐಶ್ವರ್ಯದಿಂದಲೂ, ಘನದಿಂದಲೂ ಕೂಡಿದವನಾಗಿ, ಒಳ್ಳೆಯ ಪ್ರಾಯದಲ್ಲಿ ಮರಣಹೊಂದಿದನು. ಅವನ ಮಗ ಸೊಲೊಮೋನನು ಅವನಿಗೆ ಬದಲಾಗಿ ಅರಸನಾದನು.
29ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯವರೆಗೆ ಅವನ ಸಮಸ್ತ ಆಳಿಕೆಯೂ, ಅವನ ಪರಾಕ್ರಮವೂ, ಅವನ ಮೇಲೆಯೂ, ಇಸ್ರಾಯೇಲಿನ ಮೇಲೆಯೂ, ಬೇರೆ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಸಂಭವಿಸಿದ ಘಟನೆಗಳು,
30ದರ್ಶಿಯಾದ ಸಮುಯೇಲನ ಪುಸ್ತಕದಲ್ಲಿ, ಪ್ರವಾದಿಯಾದ ನಾತಾನನ ಪುಸ್ತಕದಲ್ಲಿ ಮತ್ತು ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಲಿಖಿತವಾಗಿವೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.