Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಪೂರ್ವಕಾಲ ವೃತ್ತಾಂತ 3

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು,
2ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು.
3ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು, ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು.
4ಈ ಆರು ಮಂದಿ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು. ಅಲ್ಲಿ ಅವನು ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.
5ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ದಾವೀದನ ಹೆಂಡತಿ ಬತ್ಷೆಬೆಳು ಅಮ್ಮಿಯೇಲನ ಮಗಳು. ಆಕೆಗೆ ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡು ಮಕ್ಕಳು ಜನಿಸಿದರು.
6ಇದಲ್ಲದೆ ಇಬ್ಹಾರ್, ಎಲೀಷಾಮ, ಎಲೀಫೆಲೆಟ್,
7ನೋಗಹ, ನೆಫೆಗ್, ಯಾಫೀಯ,
8ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಈ ಒಂಬತ್ತು ಮಂದಿ ಮಕ್ಕಳಿದ್ದರು.
9ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು. ಯೆಹೂದ್ಯರ ಅರಸರು
10ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು;
11ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು.
12ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
13ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
14ಇವನ ಮಗನು ಆಮೋನನು; ಇವನ ಮಗನು ಯೋಷೀಯನು.
15ಯೋಷೀಯನ ಮಕ್ಕಳು: ಚೊಚ್ಚಲಮಗನಾದ ಯೋಹಾನಾನ್, ಎರಡನೆಯವನಾದ ಯೆಹೋಯಾಕೀಮ್, ಮೂರನೆಯವನಾದ ಚಿದ್ಕೀಯ, ನಾಲ್ಕನೆಯವನಾದ ಶಲ್ಲೂಮ್.
16ಯೆಹೋಯಾಕೀಮನ ಮಕ್ಕಳು: ಇವನ ಮಗನಾದ ಯೆಕೊನ್ಯ; ಇವನ ಮಗನು ಚಿದ್ಕೀಯ. ಸೆರೆಯ ನಂತರದ ರಾಜವಂಶಸ್ಥರು
17ಯೆಹೋಯಾಕೀನನು ಸೆರೆಯಲ್ಲಿದ್ದಾಗ ಅವನ ವಂಶಜರು: ಇವನ ಮಗ ಶೆಯಲ್ತಿಯೇಲ್,
18ಮಲ್ಕೀರಾಮ, ಪೆದಾಯ್, ಶೆನಚ್ಚರ, ಯೆಕಮ್ಯ, ಹೋಷಾಮ ಮತ್ತು ನೆದಬ್ಯ.
19ಪೆದಾಯನ ಮಕ್ಕಳು: ಜೆರುಬ್ಬಾಬೆಲನು, ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮನು, ಹನನ್ಯನು. ಇವರ ಸಹೋದರಿಯಾದ ಶೆಲೋಮೀತಳು.
20ಇವರಲ್ಲದೆ ಐವರು ಗಂಡು ಮಕ್ಕಳು ಅವನಿಗಿದ್ದರು: ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯ, ಯೂಷಬ್ಹೆಸೆದ್
21ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
22ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು.
23ನೆಯರ್ಯನ ಮಕ್ಕಳು: ಎಲ್ಯೋವೇನೈನು, ಹಿಜ್ಕೀಯನು, ಅಜ್ರೀಕಾಮನು, ಈ ಮೂರು ಮಂದಿಯು.
24ಎಲ್ಯೋವೇನೈನ ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬ ಏಳುಮಂದಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.