Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೊರಿಂಥದವರಿಗೆ 8

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.
2ಯಾರಾದರೂ ತಾನು ಏನನ್ನಾದರೂ ತಿಳಿದಿರುವುದಾಗಿ ಭಾವಿಸಿದರೆ, ಅಂಥವನು ತಿಳಿಯಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿರುವುದಿಲ್ಲ.
3ಆದರೆ ದೇವರನ್ನು ಪ್ರೀತಿಸುವವರನ್ನು ದೇವರು ತಿಳಿದುಕೊಂಡಿರುತ್ತಾರೆ.
4ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.
5ಆಕಾಶದಲ್ಲಾಗಲಿ, ಭೂಮಿಯ ಮೇಲೆ ಆಗಲಿ, ದೇವರುಗಳು ಎಂದು ಎನ್ನಿಸಿಕೊಳ್ಳುವವರು ಉಂಟು. ಅನೇಕರಿಗೆ ಅಂಥ “ದೇವರುಗಳು” ಹಾಗೂ “ಸ್ವಾಮಿಗಳು” ಇದ್ದಾರೆ.
6ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.
7ಆದರೆ ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಕೆಲವರು ಇದುವರೆಗೂ ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನುವ ರೂಢಿಯಲ್ಲಿದ್ದು, ಅವರು ವಿಗ್ರಹಕ್ಕೆ ನೈವೇದ್ಯ ಮಾಡಿ ತಿನ್ನುವುದಾಗಿ ಭಾವಿಸಿಕೊಳ್ಳುತ್ತಾರೆ. ಹೀಗೆ ಅವರ ಮನಸ್ಸಾಕ್ಷಿ ಬಲಹೀನವಾಗಿರುವುದರಿಂದ, ಅದು ಅಶುದ್ಧವಾಗಿರುತ್ತದೆ.
8ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ಸೇರಿಸಲಾರದು. ಅದನ್ನು ತಿನ್ನದಿದ್ದರೆ ನಮಗೆ ನಷ್ಟವಿಲ್ಲ, ತಿಂದರೆ ನಮಗೆ ಲಾಭವಿಲ್ಲ.
9ಆದರೆ ಈ ನಿಮ್ಮ ಸ್ವಾತಂತ್ರ್ಯವು ಬಲಹೀನರಿಗೆ ವಿಘ್ನವಾಗದಂತೆ ಜಾಗರೂಕರಾಗಿರಿ.
10ಎಲ್ಲಾ ತಿಳುವಳಿಕೆಯಿರುವ ನೀನು ವಿಗ್ರಹದ ಗುಡಿಯಲ್ಲಿ ತಿನ್ನುವುದನ್ನು ನೋಡಿದರೆ ಬಲಹೀನ ಮನಸ್ಸಾಕ್ಷಿಯುಳ್ಳ ಸಹೋದರನು, ತಾನೂ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನು ತಿನ್ನುವುದಕ್ಕೆ ಧೈರ್ಯಗೊಳ್ಳುವನಲ್ಲವೇ?
11ಆ ಬಲಹೀನನು ನಿನ್ನ ತಿಳುವಳಿಕೆಯಿಂದ ನಾಶವಾಗುತ್ತಾನೆ. ಆ ಸಹೋದರನಿಗಾಗಿಯೂ ಕ್ರಿಸ್ತ ಯೇಸುವು ತಮ್ಮ ಪ್ರಾಣವನ್ನು ಕೊಟ್ಟರಲ್ಲವೇ?
12ಹೀಗೆ ನಿನ್ನ ಸಹೋದರರ ವಿರುದ್ಧ ಪಾಪಮಾಡಿ, ಬಲಹೀನವಾದ ಅವರ ಮನಸ್ಸನ್ನು ನೋಯಿಸಿ, ಕ್ರಿಸ್ತ ಯೇಸುವಿಗೆ ವಿರುದ್ಧವಾಗಿ ಪಾಪಮಾಡುವವನಾಗಿರುತ್ತಿ.
13ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.