Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಸಮುಯೇಲ 21

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ದಾವೀದನು ನೋಬಿನಲ್ಲಿರುವ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ, “ಒಬ್ಬರೂ ನಿನ್ನ ಸಂಗಡ ಬಾರದೆ, ನೀನು ಒಂಟಿಯಾಗಿ ಬಂದದ್ದೇನು?” ಎಂದು ಅವನನ್ನು ಕೇಳಿದನು.
2ದಾವೀದನು ಯಾಜಕನಾದ ಅಹೀಮೆಲೆಕನಿಗೆ, “ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿದ್ದು, ಇಂಥದ್ದೆಂದು ಒಬ್ಬರಿಗೂ ತಿಳಿಯಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
3ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ, ನಿನಗೆ ದೊರಕಿದ ಯಾವುದನ್ನಾದರೂ ನನಗೆ ಕೊಡು,” ಎಂದನು.
4ಯಾಜಕನು ದಾವೀದನಿಗೆ ಉತ್ತರವಾಗಿ, “ಪರಿಶುದ್ಧವಾಗಿಸಿದ ರೊಟ್ಟಿಯ ಹೊರತಾಗಿ, ನನ್ನ ಕೈಯಲ್ಲಿ ಸಾಧಾರಣವಾದ ಒಂದು ರೊಟ್ಟಿಯಾದರೂ ಇಲ್ಲ. ಆ ರೊಟ್ಟಿಗಳನ್ನು ಸ್ತ್ರೀಯರೊಂದಿಗೆ ಸಂಪರ್ಕ ಮಾಡದವರಿಗೆ ಕೊಡಬಹುದು,” ಎಂದನು.
5ದಾವೀದನು ಯಾಜಕನಿಗೆ ಉತ್ತರವಾಗಿ, “ನಾನು ಹೊರಡುವುದಕ್ಕಿಂತ ಮುಂಚೆ ನಿನ್ನೆಯೂ, ಮೊನ್ನೆಯೂ ಸ್ತ್ರೀಯರು ನಮಗೆ ದೂರವಾಗಿದ್ದರು. ಅಪವಿತ್ರವಾದ ಕಾರ್ಯಗಳಿಗೆ ಹೋಗುವಾಗಲೂ ಪುರುಷರು ಶುದ್ಧರಾಗಿರುತ್ತಾರೆ. ಇಂದು ಅದಕ್ಕಿಂತಲೂ ಹೆಚ್ಚಾಗಿರುವರಲ್ಲವೇ?” ಎಂದನು.
6ಆಗ ಯೆಹೋವ ದೇವರ ಸನ್ನಿಧಿಯಿಂದ ತೆಗೆಯಲಾದ ಸಮ್ಮುಖದ ರೊಟ್ಟಿಗಳ ಹೊರತು, ಬೇರೆ ರೊಟ್ಟಿ ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧವಾಗಿಸಿದ ರೊಟ್ಟಿಯನ್ನು ಕೊಟ್ಟನು. ಏಕೆಂದರೆ ಅವುಗಳನ್ನು ತೆಗೆದುಕೊಳ್ಳುವ ದಿನದಲ್ಲಿ ಅವುಗಳಿಗೆ ಬದಲಾಗಿ ಬಿಸಿ ರೊಟ್ಟಿಗಳನ್ನು ಇಡಲೇಬೇಕು.
7ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
8ಆಗ ದಾವೀದನು ಅಹೀಮೆಲೆಕನಿಗೆ, “ಇಲ್ಲಿ ನಿನ್ನ ಕೈ ವಶದಲ್ಲಿ ಈಟಿಯಾದರೂ, ಖಡ್ಗವಾದರೂ ಇಲ್ಲವೋ? ಏಕೆಂದರೆ ಅರಸನ ಕಾರ್ಯವು ಅವಸರವಾದುದರಿಂದ ನಾನು ನನ್ನ ಖಡ್ಗವನ್ನಾದರೂ, ಆಯುಧಗಳನ್ನಾದರೂ ತೆಗೆದುಕೊಂಡು ಬರಲಿಲ್ಲ,” ಎಂದನು.
9ಅದಕ್ಕೆ ಯಾಜಕನು, “ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಏಫೋದಿನ ಹಿಂದೆ ಒಂದು ಬಟ್ಟೆಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೋ. ಏಕೆಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ,” ಎಂದನು. ಅದಕ್ಕೆ ದಾವೀದನು, “ಅದರಂಥದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದನು. ದಾವೀದನು ಗಾತಿನಲ್ಲಿ
10ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.
11ಆಕೀಷನ ಸೇವಕರು ಅವನಿಗೆ, “ಇವನು ನಾಡಿನ ಅರಸನಾದ ದಾವೀದನಲ್ಲವೋ? “ ‘ಸೌಲನು ಸಾವಿರಗಳನ್ನೂ, ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’ ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?”
12ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿಗೆ ಹೆದರಿ,
13ಅವರ ಕಣ್ಣು ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ, ಅವರಿಗೆ ತನ್ನನ್ನು ಹುಚ್ಚನ ಹಾಗೆಯೇ ತೋರಮಾಡಿ, ದ್ವಾರದ ಕದಗಳನ್ನು ಕೆರೆಯುತ್ತಾ, ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
14ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ನೋಡಿರಿ! ಅವನು ಹುಚ್ಚನಾಗಿದ್ದಾನೆ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?
15ಹುಚ್ಚರು ನನಗೆ ಅವಶ್ಯವೆಂದು ನೆನಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇವನು ನನ್ನ ಮನೆಯಲ್ಲಿ ಬರಬೇಕೋ?” ಎಂದನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.