Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಸಮುಯೇಲ 5

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
2ಫಿಲಿಷ್ಟಿಯರು ದೇವರ ಮಂಜೂಷವನ್ನು ದಾಗೋನನ ಗುಡಿಗೆ ತೆಗೆದುಕೊಂಡುಹೋಗಿ, ದಾಗೋನನ ಪಕ್ಕದಲ್ಲಿಟ್ಟರು.
3ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
4ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು.
5ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದ್ದರಿಂದ ಈ ದಿನದವರೆಗೂ ದಾಗೋನನ ಯಾಜಕರೂ, ದಾಗೋನನ ಗುಡಿಯನ್ನು ಪ್ರವೇಶಿಸುವವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿಲನ್ನು ತುಳಿಯುವುದಿಲ್ಲ.
6ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.
7ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು.
8ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.
9ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.
10ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.
11ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.
12ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.