Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಪೂರ್ವಕಾಲ ವೃತ್ತಾಂತ 19

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಅರಮನೆಗೆ ತಿರುಗಿಬಂದನು.
2ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.
3ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು. ಯೆಹೋಷಾಫಾಟನು ನ್ಯಾಯಾಧೀಶರನ್ನು ನೇಮಿಸಿದ್ದು
4ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದನು. ಅವನು ತಿರುಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯೀಮನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಕಡೆಗೆ ಅವರನ್ನು ತಿರುಗಿಸಿದನು.
5ಇದಲ್ಲದೆ ಅವನು ದೇಶದೊಳಗೆ ಪಟ್ಟಣ ಪಟ್ಟಣದಲ್ಲಿ ಯೆಹೂದದ ಸಮಸ್ತ ಕೋಟೆಗಳುಳ್ಳ ಪಟ್ಟಣಗಳೊಳಗೆ ನ್ಯಾಯಾಧಿಪತಿಗಳಿಗೆ,
6“ನೀವು ಮಾಡುವುದನ್ನು ನೋಡಿಕೊಳ್ಳಿರಿ. ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಯೆಹೋವ ದೇವರಿಗೋಸ್ಕರ ನ್ಯಾಯ ತೀರಿಸುತ್ತೀರಿ.
7ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.
8ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ,
9“ನೀವು ಈ ಕಾರ್ಯವನ್ನು ಯೆಹೋವ ದೇವರ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣಹೃದಯದಿಂದಲೂ ಮಾಡಬೇಕು.
10ಇದಲ್ಲದೆ ಜೀವಹತ್ಯ, ನ್ಯಾಯಕ್ಕೂ, ಆಜ್ಞೆಗೂ, ನಿಯಮಗಳಿಗೂ, ನ್ಯಾಯತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ, ರೌದ್ರವು ನಿಮ್ಮ ಮೇಲೆಯೂ, ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ. ಆಗ ನೀವು ಅಪರಾಧವಿಲ್ಲದವರಾಗಿರುವಿರಿ.
11“ಮುಖ್ಯಯಾಜಕನಾದ ಅಮರ್ಯನು ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಯೆಹೂದದ ಮನೆಯ ನಾಯಕನಾಗಿರುವ ಇಷ್ಮಾಯೇಲನ ಮಗ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇರುವರು. ಇದಲ್ಲದೆ ಲೇವಿಯರು ನಿಮ್ಮ ಮುಂದೆ ಅಧಿಕಾರಿಗಳಾಗಿರುವರು. ನೀವು ಬಲಗೊಂಡು ಕೆಲಸ ನಡೆಸಿರಿ. ಯೆಹೋವ ದೇವರು ಒಳ್ಳೆಯವರ ಸಂಗಡ ಇರುವರು,” ಎಂದನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.