Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಪೂರ್ವಕಾಲ ವೃತ್ತಾಂತ 22

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆರೂಸಲೇಮಿನ ನಿವಾಸಿಗಳು ಯೆಹೋರಾಮನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯನನ್ನು ಅರಸನಾಗಿ ಮಾಡಿದರು. ಏಕೆಂದರೆ ಪಾಳೆಯಕ್ಕೆ ಬಂದ ಅರಬಿಯರ ಗುಂಪು ಹಿರಿಯ ಮಕ್ಕಳನ್ನೆಲ್ಲಾ ಕೊಂದುಹಾಕಿದರು. ಹೀಗೆಯೇ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಲು ಆರಂಭಿಸಿದನು.
2ಅಹಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಅತಲ್ಯಳು, ಈಕೆಯು ಒಮ್ರಿಯ ಮೊಮ್ಮಗಳು.
3ಅವನ ತಾಯಿಯ ದುರ್ಬೋಧನೆಯಿಂದ ಅವನು ದುಷ್ಟನಾಗಿ ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದನು.
4ಅವನು ಅಹಾಬನ ಕುಟುಂಬದಂತೆಯೇ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು, ಏಕೆಂದರೆ ಅವನ ತಂದೆಯ ಮರಣದ ನಂತರ ಅವರು ಅವನ ಸಲಹೆಗಾರರಾದರು. ಆದಕಾರಣ ಎಲ್ಲವೂ ನಾಶವಾಯಿತು.
5ಅಹಜ್ಯನು ಇವರ ಯೋಚನೆಯ ಪ್ರಕಾರ ನಡೆದು, ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ಯೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.
6ಆದ್ದರಿಂದ ಅವನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಜರ್ಯನು ಅವನನ್ನು ನೋಡಲು ಹೋದನು.
7ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.
8ಯೇಹುವು ಅಹಾಬನ ಮನೆಯ ಮೇಲೆ ನ್ಯಾಯ ತೀರಿಸುವಂತೆ ಅವನು ಯೆಹೂದ್ಯರ ಪ್ರಧಾನರನ್ನೂ, ಅಹಜ್ಯನನ್ನು ಸೇವಿಸುತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಕಂಡುಹಿಡಿದು, ಅವರನ್ನು ಕೊಂದುಹಾಕಿದನು.
9ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ. ಅತಲ್ಯಳು ಮತ್ತು ಯೆಹೋಷಬತಳು
10ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ಯೆಹೂದನ ಮನೆಯ ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.
11ಆದರೆ ಅರಸನಾದ ಯೆಹೋರಾಮನ ಮಗಳಾದ ಯೆಹೋಷಬತಳು, ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನನ್ನೂ ಅವನ ದಾದಿಯನ್ನೂ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು. ಹೀಗೆಯೇ ಅರಸನಾದ ಯೆಹೋರಾಮನ ಪುತ್ರಿಯರಾಗಿರುವ ಯಾಜಕನಾದ ಯೆಹೋಯಾದಾವನ ಹೆಂಡತಿಯಾಗಿರುವ ಅಹಜ್ಯನ ಸಹೋದರಿಯಾದ ಯೆಹೋಷಬತಳು, ಅತಲ್ಯಳು ಅವನನ್ನು ಕೊಲ್ಲದ ಹಾಗೆ ಬಚ್ಚಿಟ್ಟಳು.
12ಹೀಗೆಯೇ ಇವನು ಅವರ ಸಂಗಡ ಆರು ವರ್ಷ ದೇವರ ಆಲಯದಲ್ಲಿ ಗುಪ್ತವಾಗಿದ್ದನು. ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.