Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಅರಸುಗಳು 24

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.
2ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
3ನಿಶ್ಚಯವಾಗಿ ಯೆಹೋವ ದೇವರ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಮನಸ್ಸೆಯು ತನ್ನ ಸಮಸ್ತ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ, ಯೆಹೂದವನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕುವಂತೆ ಇದಾಯಿತು.
4ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.
5ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
6ಯೆಹೋಯಾಕೀಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.
7ಆದರೆ ಈಜಿಪ್ಟಿನ ಅರಸನು ತನ್ನ ದೇಶದಿಂದ ತಿರುಗಿ ಬರಲಿಲ್ಲ. ಏಕೆಂದರೆ ಈಜಿಪ್ಟ್ ನದಿ ಮೊದಲುಗೊಂಡು ಯೂಫ್ರೇಟೀಸ್ ನದಿಯವರೆಗೂ ಈಜಿಪ್ಟಿನ ಅರಸನಿಗೆ ಇದ್ದದ್ದನ್ನೆಲ್ಲಾ ಬಾಬಿಲೋನಿನ ಅರಸನು ಸ್ವಾಧೀನಮಾಡಿಕೊಂಡಿದ್ದನು. ಯೆಹೂದ್ಯರ ಅರಸನಾದ ಯೆಹೋಯಾಕೀನನು
8ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ.
9ಅವನು ತನ್ನ ತಂದೆಯು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು.
10ಆ ಕಾಲದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮಿಗೆ ವಿರೋಧವಾಗಿ ಬಂದು ಆ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.
11ಅಷ್ಟರಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತಾನೇ ಆ ಪಟ್ಟಣಕ್ಕೆ ಬಂದನು.
12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.
13ಯೆಹೋವ ದೇವರು ಮುಂತಿಳಿಸಿದ ಪ್ರಕಾರವೇ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದಲ್ಲಿ ಸಮಸ್ತ ಬೊಕ್ಕಸಗಳನ್ನೂ, ಅರಮನೆಯ ಬೊಕ್ಕಸಗಳನ್ನೂ, ಇಸ್ರಾಯೇಲಿನ ಅರಸನಾದ ಸೊಲೊಮೋನನು ಅರಸನ ಆಲಯದಲ್ಲಿ ಮಾಡಿದ ಬಂಗಾರದ ಸಮಸ್ತ ಪಾತ್ರೆಗಳನ್ನೂ ಸೂರೆಯಾಗಿ ತೆಗೆದುಕೊಂಡನು.
14ಅವನು ಯೆರೂಸಲೇಮಿನವರೆಲ್ಲರನ್ನೂ, ಸಮಸ್ತ ಪ್ರಧಾನರನ್ನೂ, ಸಮಸ್ತ ಸ್ಥಿತಿಯುಳ್ಳ ಪರಾಕ್ರಮಶಾಲಿಗಳನ್ನೂ, ಹತ್ತು ಸಾವಿರ ಸೆರೆಯವರನ್ನೂ ಮತ್ತು ಸಮಸ್ತ ಕೌಶಲಗಾರರನ್ನೂ, ಕಮ್ಮಾರರನ್ನೂ ಅಲ್ಲಿಂದ ಒಯ್ದನು. ದೇಶದಲ್ಲಿ ಬಡವರು ಹೊರತು ಉಳಿದವರು ಯಾರೂ ಇರಲಿಲ್ಲ.
15ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದನು. ಅರಸನ ತಾಯಿಯನ್ನೂ, ಅರಸನ ಹೆಂಡತಿಯರನ್ನೂ, ಅವನ ಅಧಿಕಾರಿಗಳನ್ನೂ, ದೇಶದ ಪ್ರತಿಷ್ಠಿತರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ಒಯ್ದನು.
16ಬಾಬಿಲೋನಿನ ಅರಸನು ಸಮಸ್ತ ಸ್ಥಿತಿವಂತರಾದ ಏಳು ಸಾವಿರ ಸೈನಿಕರನ್ನೂ, ಕೌಶಲಗಾರರನ್ನೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಾಬಿಲೋನಿಗೆ ಸೆರೆಯಾಗಿ ಒಯ್ದನು.
17ಬಾಬಿಲೋನಿನ ಅರಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ, ಅವನಿಗೆ ಚಿದ್ಕೀಯನೆಂದು ಬೇರೆ ಹೆಸರನ್ನಿಟ್ಟನು. ಯೆಹೂದ್ಯರ ಅರಸನಾದ ಚಿದ್ಕೀಯನು
18ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.
19ಅವನು ಯೆಹೋಯಾಕೀಮನು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
20ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಯೆರೂಸಲೇಮಿನ ಪತನ ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.