Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಸಮುಯೇಲ 8

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಮೇತೆಗ್ ಅಮ್ಮಹವನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
2ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.
3ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಚೋಬದ ಅರಸನಾದ ರೆಹೋಬನ ಮಗ ಹದದೆಜೆರನನ್ನು ಸೋಲಿಸಿದನು.
4ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.
5ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.
6ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.
7ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು.
8ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ, ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು.
9ದಾವೀದನು ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,
10ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.
11ಅರಸನಾದ ದಾವೀದನು ಚಿನ್ನ, ಬೆಳ್ಳಿ ಮತ್ತು ಕಂಚಿನ ಎಲ್ಲಾ ವಸ್ತುಗಳನ್ನು ಯೆಹೋವ ದೇವರಿಗೆ ಸಮರ್ಪಿಸಿದನು. ಜೊತೆಗೆ ಅವನು ಸೋತ ಎಲ್ಲಾ ದೇಶಗಳಿಂದ ವಶಪಡಿಸಿಕೊಂಡ ವಸ್ತುಗಳನ್ನೂ ಅರ್ಪಿಸಿದನು.
12ಅಂದರೆ, ಅರಾಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಮತ್ತು ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಿಂದ ಪಡೆದ ಕೊಳ್ಳೆಯನ್ನೂ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.
13ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂದಿರುಗಿದಾಗ ಪ್ರಖ್ಯಾತಿ ಹೊಂದಿದನು.
14ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು. ದಾವೀದನ ಅಧಿಕಾರಿಗಳು
15ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.
16ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.
17ಅಹೀಟೂಬನ ಮಗ ಚಾದೋಕನೂ ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.
18ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.