Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ತಿಮೊಥೆಯನಿಗೆ 4

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:
2ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.
3ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.
4ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.
5ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.
6ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ.
7ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.
8ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು. ವೈಯಕ್ತಿಕ ಹಿತನುಡಿಗಳು
9ನನ್ನ ಬಳಿಗೆ ಆದಷ್ಟು ಬೇಗನೆ ಬರುವುದಕ್ಕೆ ನೀನು ಪ್ರಯತ್ನ ಮಾಡು.
10ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.
11ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನು ನನ್ನ ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
12ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದೆನು.
13ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.
15ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು.
16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.
17ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.
18ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್. ಅಂತಿಮ ವಂದನೆಗಳು
19ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ವಂದನೆ.
20ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ಆದರೆ ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ನಾನು ಮಿಲೇತದಲ್ಲಿ ಬಿಟ್ಟಿದ್ದೇನೆ.
21ನೀನು ಚಳಿಗಾಲಕ್ಕೆ ಮುಂಚೆಯೇ ಆದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನ ಮಾಡು. ಯುಬೂಲನೂ ಪೊದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.
22ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.