Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಧರ್ಮೋಪದೇಶಕಾಂಡ 16

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ನೀವು ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಾತ್ರಿಯಲ್ಲಿ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.
2ಹೀಗಿರುವುದರಿಂದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಸ್ಕದ ಪಶುವನ್ನಾಗಿ ಅರ್ಪಿಸಬೇಕು.
3ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.
4ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿಮ್ಮ ಮೇರೆಗಳಲ್ಲಿ ಎಲ್ಲಿಯೂ ಕಾಣಬಾರದು. ಮೊದಲನೆಯ ದಿವಸದ ಸಾಯಂಕಾಲದಲ್ಲಿ ನೀವು ಯಜ್ಞವಾಗಿ ಸಮರ್ಪಿಸಿದ ಮಾಂಸದಲ್ಲಿ ಏನೂ ಮರುದಿವಸದವರೆಗೆ ಉಳಿಯಬಾರದು.
5ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವ ಊರಲ್ಲಾದರೂ ಪಸ್ಕವನ್ನು ಅರ್ಪಿಸಬಾರದು.
6ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲೇ ಸೂರ್ಯನು ಅಸ್ತಮಿಸುವಾಗ ನೀವು ಈಜಿಪ್ಟನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
7ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು. ಮರುದಿವಸದಲ್ಲಿ ಹಿಂದಿರುಗಿ ನಿಮ್ಮ ಗುಡಾರಗಳಿಗೆ ಹೋಗಬಹುದು.
8ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು. ವಾರಗಳ ಹಬ್ಬ
9ಏಳು ವಾರಗಳನ್ನು ನನಗಾಗಿ ಎಣಿಸಿಕೊಳ್ಳಬೇಕು. ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವುದಕ್ಕೆ ಪ್ರಾರಂಭಿಸಬೇಕು.
10ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ಅರ್ಪಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ವಾರಗಳ ಹಬ್ಬವನ್ನು ಆಚರಿಸಬೇಕು
11ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.
12ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು. ಗುಡಾರಗಳ ಹಬ್ಬ
13ನೀವು ಕಣದ ಕೆಲಸವನ್ನೂ ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಗುಡಾರಗಳ ಹಬ್ಬವನ್ನು ಆಚರಿಸಬೇಕು.
14ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಂದೆತಾಯಿ ಇಲ್ಲದವರೂ ಹಾಗೂ ವಿಧವೆಯರೂ ಸಂಭ್ರಮದಿಂದಿರಬೇಕು.
15ನಿಮ್ಮ ದೇವರಾದ ಯೆಹೋವ ದೇವರಿಗೆ ಏಳು ದಿವಸ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಎಲ್ಲಾ ಆದಾಯದಲ್ಲಿಯೂ, ನಿಮ್ಮ ಎಲ್ಲಾ ಕೆಲಸದಲ್ಲಿಯೂ ಆಶೀರ್ವದಿಸುವುದರಿಂದ ನೀವು ಪರಿಪೂರ್ಣ ಸಂತೋಷದಿಂದ ಇರಬೇಕು.
16ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.
17ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನೂ ಕೊಡಬೇಕು. ನ್ಯಾಯಾಧಿಪತಿಗಳು
18ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
19ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
20ನೀವು ಬದುಕಿ ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನ್ಯಾಯವನ್ನು ಅಂದರೆ ಕೇವಲ ನ್ಯಾಯವನ್ನೇ ಅನುಸರಿಸಬೇಕು. ಇತರ ದೇವರುಗಳ ಆರಾಧನೆ
21ನಿಮ್ಮ ಯೆಹೋವ ದೇವರಿಗಾಗಿ ಕಟ್ಟುವ ಬಲಿಪೀಠದ ಸಮೀಪದಲ್ಲಿ ಮರದಿಂದ ಮಾಡಿದ ಯಾವುದೇ ಅಶೇರ ಸ್ತಂಭವನ್ನು ನಿಲ್ಲಿಸಬಾರದು.
22ಯಾವ ವಿಗ್ರಹವನ್ನೂ ನಿಲ್ಲಿಸಬಾರದು. ಇದನ್ನು ನಿನ್ನ ಯೆಹೋವ ದೇವರು ದ್ವೇಷಿಸುತ್ತಾರೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.