Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ವಿಮೋಚನಕಾಂಡ 11

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರು ಮೋಶೆಗೆ, “ಇನ್ನು ಒಂದೇ ಉಪದ್ರವವನ್ನು ಫರೋಹನ ಮೇಲೆಯೂ, ಈಜಿಪ್ಟ್ ಮೇಲೆಯೂ ಬರಮಾಡುವೆನು. ಆಮೇಲೆ ಅವನು ಇಲ್ಲಿಂದ ಕಳುಹಿಸುವನು. ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲರನ್ನೂ ಕಳುಹಿಸಿಬಿಡುವನು.
2ಆದ್ದರಿಂದ ಸ್ತ್ರೀಪುರುಷರೆಲ್ಲರು ತನ್ನ ನೆರೆಯವನಿಂದಲೂ ಬೆಳ್ಳಿಬಂಗಾರ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ಇಸ್ರಾಯೇಲರಿಗೆ ಹೇಳು,” ಎಂದು ಹೇಳಿದರು.
3ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರ ದೃಷ್ಟಿಯಲ್ಲಿ ಜನರಿಗೆ ದಯೆ ದೊರಕುವಂತೆ ಮಾಡಿದರು. ಇದಲ್ಲದೆ ಮೋಶೆಯು ಈಜಿಪ್ಟ್ ದೇಶದಲ್ಲಿಯೂ ಫರೋಹನ ಅಧಿಕಾರಿಗಳ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹಳ ಗೌರವ ಹೊಂದಿದನು.
4ಆಗ ಮೋಶೆಯು ಫರೋಹನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸುಮಾರು ಮಧ್ಯರಾತ್ರಿಯಲ್ಲಿ ನಾನು ಈಜಿಪ್ಟಿನ ಮಧ್ಯದಲ್ಲಿ ಹಾದು ಹೋಗುವೆನು.
5ಆಗ ಈಜಿಪ್ಟ್ ದೇಶದ ಚೊಚ್ಚಲ ಮಕ್ಕಳು ಅಂದರೆ, ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲನ್ನು ಹಿಡಿದಿರುವ ದಾಸಿಯ ಚೊಚ್ಚಲ ಮಗನವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವೂ ಸಾಯುವುವು.
6ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವುದು. ಅಂಥಾ ಗೋಳಾಟವು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವುದಿಲ್ಲ.
7ಆದರೆ ಯೆಹೋವ ದೇವರು ಈಜಿಪ್ಟಿನವರಿಗೂ, ಇಸ್ರಾಯೇಲರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳುಕೊಳ್ಳುವಂತೆ, ಇಸ್ರಾಯೇಲಿನವರ ವಿರುದ್ಧ ಇಲ್ಲವೆ ಪ್ರಾಣಿಗಳ ವಿರುದ್ಧ ಒಂದು ನಾಯಿ ಸಹ ಬೊಗಳುವುದಿಲ್ಲ.’
8ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು, ನನಗೆ ಅಡ್ಡಬಿದ್ದು, ನನಗೆ ನೀನೂ, ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ, ‘ಹೊರಗೆ ಹೋಗಿರಿ,’ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು,” ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
9ಆದರೆ ಯೆಹೋವ ದೇವರು ಮೋಶೆಗೆ, “ನನ್ನ ಅದ್ಭುತಗಳು ಈಜಿಪ್ಟ್ ದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ,” ಎಂದರು.
10ಈ ಅದ್ಭುತಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.