Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ವಿಮೋಚನಕಾಂಡ 26

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1“ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು.
2ಎಲ್ಲಾ ಪರದೆಗಳೂ ಒಂದೇ ಅಳತೆಯವುಗಳಾಗಿರಬೇಕು. ಪ್ರತಿಯೊಂದು ಪರದೆಯು ಸುಮಾರು ಹದಿಮೂರು ಮೀಟರ್ ಉದ್ದ ಮತ್ತು ಎರಡು ಮೀಟರ್ ಅಗಲವಿರಬೇಕು.
3ಐದು ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು ಮತ್ತು ಇನ್ನುಳಿದ ಐದು ಪರದೆಗಳನ್ನೂ ಒಂದಕ್ಕೊಂದು ಜೋಡಿಸಬೇಕು.
4ಕೊನೆಯ ಪರದೆಯ ಅಂಚಿನ ಒಂದು ಜೋಡಣೆಯ ಸ್ಥಳದಲ್ಲಿ ನೀಲಿ ದಾರಿನ ಕುಣಿಕೆಗಳನ್ನು ಮಾಡಿ, ಎರಡನೆಯ ಜೋಡಣೆಯ ಕಟ್ಟಕಡೆಯ ಪರದೆಯ ಅಂಚಿನಲ್ಲಿಯೂ ಅದೇ ಪ್ರಕಾರ ಮಾಡಬೇಕು.
5ಒಂದು ಪರದೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ಪರದೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಎದುರುಬದುರಾಗಿ ಹಿಡಿದುಕೊಳ್ಳುವವುಗಳಾಗಿರಬೇಕು.
6ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗಬೇಕು.
7“ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಮೇಕೆಯ ಕೂದಲಿನಿಂದ ಹನ್ನೊಂದು ಪರದೆಗಳನ್ನು ಮಾಡಬೇಕು.
8ಒಂದೊಂದು ಪರದೆಯು ಸುಮಾರು ಹದಿಮೂರುವರೆ ಮೀಟರ್ ಉದ್ದ ಮತ್ತು ಒಂದುವರೆ ಮೀಟರ್ ಅಗಲ ಇರಬೇಕು. ಹನ್ನೊಂದು ಪರದೆಗಳೂ ಒಂದೇ ಅಳತೆಯಾಗಿರಬೇಕು.
9ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿ, ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ತೂಗಾಡಬಿಡಬೇಕು.
10ಜೋಡಿಸುವಾಗ ಕೊನೆಯ ಒಂದು ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು, ಜೋಡಣೆಯಲ್ಲಿರುವ ಕೊನೆಯ ಎರಡನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು.
11ಇದಲ್ಲದೆ ಕಂಚಿನ ಐವತ್ತು ಕೊಂಡಿಗಳನ್ನು ಮಾಡಿ, ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ, ಒಂದೇ ಡೇರೆ ಆಗುವಂತೆ ಜೋಡಿಸಬೇಕು.
12ಗುಡಾರದ ಪರದೆಗಳನ್ನು ಮಿಕ್ಕಿದ ತೂಗಾಡುವಂಥದ್ದು ಎಂದರೆ ಉಳಿದ ಅರ್ಧ ಪರದೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
13ಗುಡಾರದ ಪರದೆಗಳ ಉದ್ದದಲ್ಲಿ ಈಚೆ ಆಚೆ ಮಿಕ್ಕಿದ ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವುದಕ್ಕಾಗಿ ತೂಗಾಡಲಿ.
14ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಬೇಕು, ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಬೇಕು.
15“ಗುಡಾರಕ್ಕೆ ಜಾಲಿ ಮರದಿಂದ ಚೌಕಟ್ಟುಗಳನ್ನು ಮಾಡಬೇಕು.
16ಒಂದೊಂದು ಚೌಕಟ್ಟಿನ ಉದ್ದವು ಸುಮಾರು ನಾಲ್ಕುವರೆ ಮೀಟರ್ ಮತ್ತು ಅಗಲ ಅರವತ್ತೆಂಟು ಸೆಂಟಿಮೀಟರ್ ಇರಬೇಕು.
17ಒಂದು ಚೌಕಟ್ಟಿಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಬೇಕು. ಅದೇ ಪ್ರಕಾರ ಗುಡಾರದ ಎಲ್ಲಾ ಚೌಕಟ್ಟುಗಳಿಗೆ ಮಾಡಬೇಕು.
18ಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಬೇಕು.
19ಇಪ್ಪತ್ತು ಚೌಕಟ್ಟುಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಬೇಕು ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಅದರ ಎರಡು ಪಟ್ಟಿಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
20ಹಾಗೆಯೇ ಗುಡಾರದ ಉತ್ತರ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನೂ,
21ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಗದ್ದಿಗೇ ಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನೂ,
22ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದ ಕಡೆಗೆ ಆರು ಚೌಕಟ್ಟುಗಳನ್ನು ಮಾಡಬೇಕು.
23ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಬೇಕು.
24ಈ ಮೂಲೆಗಳನ್ನು ಅಡಿಯಲ್ಲಿ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಇದೇ ರೀತಿಯಲ್ಲಿ ಅವು ಎರಡು ಮೂಲೆಗಳಲ್ಲಿ ಎರಡಕ್ಕೂ ಇರಬೇಕು.
25ಹೀಗೆ ಅವು ಎಂಟು ಚೌಕಟ್ಟುಗಳೂ ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಕೂರುಗದ್ದಿಗೇ ಕಲ್ಲುಗಳೂ ಇರುವುದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕೂರುಗದ್ದಿಗೇ ಕಲ್ಲುಗಳೂ ಇರಬೇಕು.
26“ಜಾಲಿ ಮರದಿಂದ ಅಗುಳಿಗಳನ್ನು ಮಾಡಬೇಕು. ಗುಡಾರದ ಒಂದು ಕಡೆಯ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು,
27ಗುಡಾರದ ಇನ್ನೊಂದು ಭಾಗದ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು, ಅದರ ಹಿಂದುಗಡೆಯ ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು ಮಾಡಬೇಕು.
28ಮಧ್ಯದ ಅಗುಳಿಯು ಚೌಕಟ್ಟುಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಮುಟ್ಟಿರಬೇಕು.
29ಆ ಚೌಕಟ್ಟುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು. ಅಗುಳಿಗಳನ್ನು ಬಂಗಾರದಿಂದ ಹೊದಿಸಬೇಕು.
30“ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರವನ್ನು ನಿಲ್ಲಿಸಬೇಕು.
31“ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಬೇಕು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
32ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳ ಮೇಲೆ ಊರಿಕೊಂಡಿರುವ ಜಾಲಿ ಮರದ ಸ್ತಂಭಗಳಲ್ಲಿ ಅದನ್ನು ತೂಗು ಹಾಕಬೇಕು.
33ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು.
34ಮಹಾಪರಿಶುದ್ಧ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮೇಲೆ ಕರುಣಾಸನವನ್ನು ಇಡಬೇಕು.
35ಇದಲ್ಲದೆ ಗುಡಾರದ ಉತ್ತರ ಕಡೆಯಲ್ಲಿ ಪರದೆಯ ಹೊರಗೆ ಮೇಜನ್ನು ಇಡಬೇಕು ಮತ್ತು ದೀಪಸ್ತಂಭವನ್ನು ಅದರ ಎದುರಾಗಿ ದಕ್ಷಿಣದ ದಿಕ್ಕಿನಲ್ಲಿ ಇಡಬೇಕು.
36“ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಬೇಕು.
37ಆ ಪರದೆಗೆ ಜಾಲಿ ಮರದ ಐದು ಕಂಬಗಳನ್ನು ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಎರಕಹೊಯಿಸಬೇಕು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.