Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ವಿಮೋಚನಕಾಂಡ 37

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಬೆಚಲಯೇಲನು ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಎತ್ತರವಾಗಿರುವ ಮಂಜೂಷವನ್ನು ಮಾಡಿದನು.
2ಅದನ್ನು ಶುದ್ಧ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ, ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಿದನು.
3ಅದರ ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಎಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇರಿಸಿದನು.
4ಆಮೇಲೆ ಜಾಲಿ ಮರದ ಕೋಲುಗಳನ್ನು ಮಾಡಿಸಿ, ಅವುಗಳಿಗೆ ಬಂಗಾರದಿಂದ ಹೊದಿಸಬೇಕು.
5ಮಂಜೂಷವನ್ನು ಹೊರುವುದಕ್ಕಾಗಿ ಕೋಲುಗಳನ್ನು ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು.
6ಇದಲ್ಲದೆ ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಿದನು.
7ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿದನು.
8ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯನ್ನು ಮಾಡಿದನು.
9ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿದ್ದವು. ಮೇಜು
10ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಿದನು.
11ಆಮೇಲೆ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಸುತ್ತಲೂ ಬಂಗಾರದ ತೋರಣ ಕಟ್ಟಿದನು.
12ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ, ಅಂಚಿನ ಸುತ್ತಲೂ ಬಂಗಾರದ ತೋರಣವನ್ನು ಕಟ್ಟಿದರು.
13ಮೇಜಿಗೆ ಬಂಗಾರದ ನಾಲ್ಕು ಬಳೆಗಳನ್ನು ಎರಕ ಹೊಯ್ದು, ಅವುಗಳನ್ನು ಅದರ ನಾಲ್ಕು ಕಾಲುಗಳಲ್ಲಿರುವ ನಾಲ್ಕು ಮೂಲೆಗಳಿಗೆ ಜೋಡಿಸಿದರು.
14ಮೇಜನ್ನು ಹೊತ್ತುಕೊಂಡು ಹೋಗಲು ಕೋಲುಗಳನ್ನು ಮಾಡಿ, ಈ ಬಳೆಗಳನ್ನು ಅಡ್ಡಪಟ್ಟಿಗೆ ಸಮೀಪದಲ್ಲಿ ಕೂಡಿಸಿದರು.
15ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳಿಗೆ ಬಂಗಾರದಿಂದ ಹೊದಿಸಲಾಯಿತು.
16ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣ, ಧೂಪಾರತಿಗಳು, ಹೂಜೆಗಳು, ಪಾನದ್ರವ್ಯಗಳ ಅರ್ಪಣೆಗಾಗಿ ಬೇಕಾಗುವ ಬಟ್ಟಲುಗಳನ್ನು ಶುದ್ಧ ಬಂಗಾರದಿಂದ ಮಾಡಿದರು. ದೀಪಸ್ತಂಭವು
17ಚೊಕ್ಕ ಬಂಗಾರದಿಂದ ದೀಪಸ್ತಂಭವನ್ನು ಮಾಡಿದರು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದರು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇದ್ದವು.
18ಆ ದೀಪಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಅಂದರೆ ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬಂದಿದ್ದವು.
19ಒಂದು ಕೊಂಬೆಯಲ್ಲಿ ಬಾದಾಮಿ ಪುಷ್ಟದಂತಿರುವ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿದ್ದವು ಮತ್ತು ಮತ್ತೊಂದು ಕೊಂಬೆಯಲ್ಲಿ ಬಾದಾಮಿಯ ಪುಷ್ಟವಿದ್ದ ಮೂರು ಹಣತೆಗಳು ಮೊಗ್ಗು ಪುಷ್ಟಗಳಿದ್ದವು. ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿಯೂ ಇದ್ದವು.
20ದೀಪಸ್ತಂಭದಲ್ಲಿಯೇ ಬಾದಾಮಿ ಹೂವುಗಳಂತೆಯೂ ಮೊಗ್ಗುಗಳಂತೆಯೂ ಅದಕ್ಕೊಂದು ಪುಷ್ಪದ ಆಕಾರದಲ್ಲಿ ನಾಲ್ಕು ಹಣತೆಗಳು ಇದ್ದವು.
21ದೀಪಸ್ತಂಭದಿಂದ ಹೊರಬರುವ ಒಂದು ಮೊಗ್ಗು ಮೊದಲ ಜೋಡಿ ಕೊಂಬೆಗಳ ಅಡಿಯಲ್ಲಿತ್ತು, ಎರಡನೇ ಮೊಗ್ಗು ಎರಡನೇ ಜೋಡಿಯ ಅಡಿಯಲ್ಲಿ ಮತ್ತು ಮೂರನೆಯ ಮೊಗ್ಗು ಮೂರನೆಯ ಜೋಡಿಯ ಅಡಿಯಲ್ಲಿ ಹೀಗೆ ಆರು ಕೊಂಬೆಗಳಿದ್ದವು.
22ಅದರ ಮೊಗ್ಗುಗಳೂ ಕೊಂಬೆಗಳೂ ಅದರಿಂದಲೇ ಬಂದಿದ್ದವು. ದೀಪಸ್ತಂಭವನ್ನೆಲ್ಲಾ ಶುದ್ಧ ಬಂಗಾರದ ಒಂದೇ ಅಚ್ಚಿನಲ್ಲಿ ಬರೆದ ಕಲಾಕೃತಿಯಾಗಿತ್ತು.
23ಅವರು ಏಳು ದೀಪಗಳನ್ನೂ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಿದರು.
24ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಒಂದು ತಲಾಂತು ಶುದ್ಧ ಬಂಗಾರದಿಂದ ಮಾಡಿದರು. ಧೂಪವೇದಿ
25ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಿದರು. ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿತ್ತು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಲಾಗಿತ್ತು.
26ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿದರು. ಅದರ ಸುತ್ತಲೂ ಬಂಗಾರದ ಗೋಟನ್ನು ಕಟ್ಟಿಸಿದರು.
27ಅದರ ಗೋಟಿನ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡಿದರು, ಇವುಗಳನ್ನು ಹೊರುವುದಕ್ಕಾಗಿ ಅವುಗಳಲ್ಲಿ ಕೋಲುಗಳನ್ನು ಸಿಕ್ಕಿಸಿದರು.
28ಕೋಲುಗಳನ್ನು ಜಾಲಿ ಮರದಿಂದ ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಿದರು.
29ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.