Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ವಿಮೋಚನಕಾಂಡ 38

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಬೆಚಲೇಲನು ಜಾಲಿ ಮರದಿಂದ ದಹನಬಲಿಯ ಪೀಠವನ್ನು ಮಾಡಿದರು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.
2ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದರು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಿದರು.
3ಅನಂತರ ಅವರು ಬಲಿಪೀಠದ ಉಪಕರಣಗಳನ್ನೆಲ್ಲಾ ಅಂದರೆ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಇವುಗಳೆನ್ನೆಲ್ಲಾ ಕಂಚಿನಿಂದ ಮಾಡಿದರು.
4ಬಲಿಪೀಠಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿದರು. ಅದು ಬಲಿಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಅದನ್ನು ಬಲಿಪೀಠದ ಕೆಳಭಾಗದಿಂದ ಮಧ್ಯದವರೆಗೆ ಇರುವಂತೆ ಮಾಡಿದರು.
5ವೇದಿಯನ್ನು ಹೊರುವಾಗ ಕೋಲು ಸಿಕ್ಕಿಸುವುದಕ್ಕೋಸ್ಕರ ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಕಂಚಿನಿಂದ ಎರಕ ಹೊಯ್ದರು.
6ಅವರು ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳನ್ನು ಕಂಚಿನಿಂದ ಹೊದಿಸಿದರು.
7ಬಲಿಪೀಠವನ್ನು ಹೊರುವುದಕ್ಕೆ ಅದರ ಎರಡೂ ಬದಿಯಲ್ಲಿ ಮಾಡಿದ ಕೋಲುಗಳನ್ನು ಬಳೆಗಳಲ್ಲಿ ಸೇರಿಸಿದರು. ಅವರು ಆ ಬಲಿಪೀಠವನ್ನು ಚೌಕಟ್ಟುಗಳಿಂದ ಪೊಳ್ಳಾಗಿರುವಂತೆ ಮಾಡಿದರು. ಗಂಗಾಳವು
8ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಸೇವೆಮಾಡುತ್ತಿದ್ದ ಸ್ತ್ರೀಯರಿಂದ ಕೂಡಿಸಿದ ಕಂಚಿನ ದರ್ಪಣಗಳಿಂದ ಕಂಚಿನಿಂದ ಬೋಗುಣಿಯನ್ನು ಅದರ ಪೀಠವನ್ನೂ ಮಾಡಿದರು. ಗುಡಾರದ ಅಂಗಳವು
9ಅವರು ಗುಡಾರದ ಅಂಗಳವನ್ನು ಮಾಡಿದರು. ಹೇಗೆಂದರೆ ದಕ್ಷಿಣ ದಿಕ್ಕಿನಲ್ಲಿರುವ ಅಂಗಳಕ್ಕೋಸ್ಕರ ನಯವಾಗಿ ಹೊಸೆದ ನಾರಿನ ಪರದೆಗಳನ್ನು ಮಾಡಲಾಗಿತ್ತು. ಅವು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು.
10ಆ ಕಡೆಯಲ್ಲಿ ಇಪ್ಪತ್ತು ಸ್ತಂಭಗಳಿದ್ದವು ಮತ್ತು ಅವುಗಳಿಗೆ ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಸ್ತಂಭಗಳ ಕೊಂಡಿಗಳನ್ನು ಮತ್ತು ಅವುಗಳ ಪಟ್ಟಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು.
11ಉತ್ತರ ದಿಕ್ಕಿನ ಪರದೆಗಳು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು. ಇಪ್ಪತ್ತು ಸ್ತಂಭಗಳು ಮತ್ತು ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಆ ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದ್ದಾಗಿದ್ದವು.
12ಅಂಗಳದ ಪಶ್ಚಿಮ ಭಾಗದಲ್ಲಿ ಸುಮಾರು ಇಪ್ಪತ್ತಮೂರು ಮೀಟರ್ ಉದ್ದವಾದ ಪರದೆಗಳಿದ್ದವು. ಹತ್ತು ಸ್ತಂಭಗಳು ಮತ್ತು ಆ ಸ್ತಂಭಗಳಿಗೆ ಹತ್ತು ಗದ್ದಿಗೇ ಕಲ್ಲುಗಳಿದ್ದವು. ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಮೇಲಿನ ಕಟ್ಟುಗಳು ಬೆಳ್ಳಿಯದ್ದಾಗಿದ್ದವು.
13ಪೂರ್ವದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಅಂಗಳದ ಅಗಲವು ಸುಮಾರು ಇಪ್ಪತ್ತಮೂರು ಮೀಟರವಾಗಿತ್ತು.
14ದ್ವಾರದ ಒಂದು ಬದಿಯ ಪರದೆಗಳು ಸುಮಾರು ಆರುವರೆ ಮೀಟರ್ ಉದ್ದವಾಗಿದ್ದವು. ಅವುಗಳಿಗೆ ಮೂರು ಸ್ತಂಭಗಳು, ಆ ಸ್ತಂಭಗಳಿಗೆ ಮೂರು ಗದ್ದಿಗೇ ಕಲ್ಲುಗಳು ಇದ್ದವು.
15ಅಂಗಳದ ದ್ವಾರದ ಎರಡೂ ಕಡೆಗಳಲ್ಲಿ ಸುಮಾರು ಆರುವರೆ ಮೀಟರ್ ಉದ್ದವಾದ ಪರದೆಗಳಿದ್ದವು, ಅವುಗಳಿಗೆ ಮೂರು ಸ್ತಂಭಗಳು ಮತ್ತು ಮೂರು ಗದ್ದಿಗೇ ಕಲ್ಲುಗಳಿದ್ದವು.
16ಅಂಗಳದ ಸುತ್ತಲಿದ್ದ ಎಲ್ಲ ಪರದೆಗಳು ನಯವಾಗಿ ಹೊಸೆದ ನಾರಿನ ಬಟ್ಟೆಯಿಂದ ಮಾಡಲಾಗಿದ್ದವು.
17ಸ್ತಂಭಗಳ ಗದ್ದಿಗೇ ಕಲ್ಲುಗಳು ಕಂಚಿನದ್ದಾಗಿದ್ದವು. ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯದ್ದಾಗಿದ್ದವು. ಸ್ತಂಭದ ಬೋದಿಗೆಗಳು ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದ ಎಲ್ಲಾ ಸ್ತಂಭಗಳಿಗೆ ಬೆಳ್ಳಿಯ ಕಟ್ಟುಗಳಿದ್ದವು.
18ಗುಡಾರದ ಅಂಗಳದ ದ್ವಾರಕ್ಕಾಗಿ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸಮಾಡಿದ ಇಪ್ಪತ್ತು ಮೊಳದ ಪರದೆ ಮಾಡಲಾಗಿತ್ತು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು. ಅಗಲ, ಎತ್ತರಗಳಲ್ಲಿ ಅಂಗಳದ ಉಳಿದ ಪರದೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.
19ಅವುಗಳಿಗೆ ನಾಲ್ಕು ಸ್ತಂಭಗಳು, ಆ ಕಂಬಗಳಿಗೆ ನಾಲ್ಕು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಅವುಗಳ ಕೊಂಡಿಗಳು ಬೆಳ್ಳಿಯದ್ದಾಗಿದ್ದವು. ಅವುಗಳ ಬೋದಿಗಳ ಹೊದಿಕೆ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದ್ದಾಗಿದ್ದವು.
20ಗುಡಾರದ ಮತ್ತು ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದಾಗಿದ್ದವು. ಲೋಹಗಳ ಬಳಕೆ
21ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.
22ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದವನಾದ ಊರಿಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲಯೇಲನು ಮಾಡಿದನು.
23ಅವನ ಜೊತೆಯಲ್ಲಿ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ, ಧೂಮ್ರ ಮತ್ತು ರಕ್ತವರ್ಣದ ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವವನೂ ಆಗಿದ್ದನು.
24ಪರಿಶುದ್ಧಾಲಯದ ಸೇವೆಗೆ ನೇಮಕವಾದ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ವಿಶೇಷವಾಗಿ ಅರ್ಪಿಸಿದ ಕಾಣಿಕೆಯಾಗಿತ್ತು, ಅದು ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್ ಇತ್ತು.
25ಪರಿಶುದ್ಧಾಲಯದ ನಿಯಮದ ಮೇರೆಗೆ ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ಸಂಗ್ರಹಿದ ಬೆಳ್ಳಿಯ ತೂಕವು ಸುಮಾರು 3,400 ಕಿಲೋಗ್ರಾಂ ಇತ್ತು.
26ಪರಿಶುದ್ಧಾಲಯದ ನಿಯಮದ ಮೇರೆಗೆ ಪ್ರತಿಯೊಬ್ಬ ಮನುಷ್ಯನಿಂದ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಕೊಟ್ಟವರ ಲೆಕ್ಕವನ್ನು ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲಿನ ಪ್ರಾಯದವರನ್ನು ಲೆಕ್ಕ ಮಾಡಲಾಗಿ ಅದು 6,03,550 ಗಂಡಸರ ಸಂಖ್ಯೆ ಇತ್ತು.
27ಪರಿಶುದ್ಧಾಲಯದ ಗದ್ದಿಗೇ ಕಲ್ಲುಗಳಿಗೆ ಮತ್ತು ಪರದೆಗಳ ಗದ್ದಿಗೇ ಕಲ್ಲುಗಳಿಗೆ ಎರಕ ಹೊಯ್ಯಲು 3,400 ಕಿಲೋಗ್ರಾಂ ಬೆಳ್ಳಿ ಹಿಡಿಯಿತು. ಒಂದು ಗದ್ದಿಗೇ ಕಲ್ಲಿಗೆ ಮೂವತ್ನಾಲ್ಕು ಕಿಲೋಗ್ರಾಂನಂತೆ ನೂರು ಗದ್ದಿಗೇ ಕಲ್ಲುಗಳಿಗೆ 3,400 ಕಿಲೋಗ್ರಾಂ ಬೆಳ್ಳಿ ಆಯಿತು.
28ಒಂದರ ತೂಕ ಸುಮಾರು 34 ಕಿಲೋಗ್ರಾಂ ಇತ್ತು. ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದರು.
29ವಿಶೇಷ ಕಾಣಿಕೆಯಾಗಿ ಬಂದ ಕಂಚು 2,425 ಕಿಲೋಗ್ರಾಂ ತೂಕವಿತ್ತು.
30ಆ ಕಂಚಿನಿಂದ ಅವರು ದೇವದರ್ಶನದ ಗುಡಾರದ ದ್ವಾರಗಳಿಗೆ ಗದ್ದಿಗೇ ಕಲ್ಲುಗಳನ್ನೂ ಬಲಿಪೀಠವನ್ನೂ ಅದಕ್ಕೆ ಕಂಚಿನ ಜಾಳಿಗೆಯನ್ನೂ ಬಲಿಪೀಠದ ಸಮಸ್ತ ಪಾತ್ರೆಗಳನ್ನೂ ಮಾಡಿದರು.
31ಅಂಗಳದ ಸುತ್ತಲಿನ ಗದ್ದಿಗೇ ಕಲ್ಲುಗಳನ್ನೂ, ಗುಡಾರದ ಮತ್ತು ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.