Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ವಿಮೋಚನಕಾಂಡ 5

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು.
2ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.
3ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು.
4ಈಜಿಪ್ಟಿನ ಅರಸನು ಅವರಿಗೆ, “ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸಗಳನ್ನು ಮಾಡದಂತೆ ಏಕೆ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಗಳಿಗೆ ಹೋಗಿ,” ಎಂದನು.
5ಇದಲ್ಲದೆ ಫರೋಹನು, “ಈಗ ಹಿಬ್ರಿಯರು ಈ ದೇಶದಲ್ಲಿ ಹೆಚ್ಚಿದ್ದಾರೆ. ನೀವು ಅವರನ್ನು ಅವರ ಬಿಟ್ಟಿಕೆಲಸಗಳಿಂದ ನಿಲ್ಲಿಸಿಬಿಡುತ್ತೀರಲ್ಲಾ?” ಎಂದನು.
6ಅದೇ ದಿನದಲ್ಲಿ ಫರೋಹನು ಬಿಟ್ಟಿಕೆಲಸ ಮಾಡಿಸುವವರಿಗೂ ಅವರ ಮೇಲ್ವಿಚಾರಕರಿಗೂ,
7“ನೀವು ಇನ್ನು ಇಟ್ಟಿಗೆಗಳನ್ನು ಮಾಡುವುದಕ್ಕೆ ಮೊದಲಿನ ಹಾಗೆ ಜನರಿಗೆ ಒಣಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
8ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದ್ದರಿಂದ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಅರ್ಪಿಸೋಣ,’ ಎಂದು ಕೂಗುತ್ತಾರೆ.
9ಈ ಜನರು ಸುಳ್ಳು ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ. ಅವರು ದುಡಿಯಲಿ,” ಎಂದು ಆಜ್ಞಾಪಿಸಿದನು.
10ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ.
11ನಿಮಗೆ ಹುಲ್ಲು ಎಲ್ಲಿ ದೊರಕುವುದೋ, ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೆ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು,’ ಎಂದು ಹೇಳಿದ್ದಾನೆ,” ಎಂದರು.
12ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು.
13ಇದಲ್ಲದೆ ಬಿಟ್ಟಿಕೆಲಸ ಮಾಡಿಸುವವರು, “ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿದಂತೆಯೇ, ಪ್ರತಿಯೊಂದು ದಿನದಲ್ಲಿ, ಆ ದಿನದ ಕೆಲಸವನ್ನು ತೀರಿಸಿಬಿಡಬೇಕು,” ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
14ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಅವರನ್ನು ಹೊಡೆಸಿದರು.
15ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿಮ್ಮ ದಾಸರಿಗೆ ಹೀಗೆ ಮಾಡುತ್ತೀರಿ?
16ನಿಮ್ಮ ದಾಸರಿಗೆ ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ, ‘ಇಟ್ಟಿಗೆಗಳನ್ನು ಮಾಡಿರಿ’ ಎಂದು ನಮಗೆ ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಆದರೆ ತಪ್ಪು ನಿಮ್ಮ ಸ್ವಂತ ಜನರಲ್ಲಿಯೇ ಇದೆ,” ಎಂದರು.
17ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ.
18ಆದ್ದರಿಂದ ಈಗ ಹೋಗಿ ಕೆಲಸಮಾಡಿರಿ. ಹುಲ್ಲನ್ನು ನಿಮಗೆ ಕೊಡುವುದಕ್ಕಾಗುವುದಿಲ್ಲ. ಆದರೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ತಯಾರಿಸಬೇಕು,” ಎಂದನು.
19ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದ್ದರಿಂದ, ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಇದ್ದೇವೆಂದು ತಿಳಿದುಕೊಂಡರು.
20ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ, ದಾರಿಯಲ್ಲಿ ಕಾದಿದ್ದ ಮೋಶೆಯನ್ನೂ, ಆರೋನನನ್ನೂ ಸಂಧಿಸಿದರು.
21ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು. ದೇವರು ವಿಮೋಚನೆಯನ್ನು ವಾಗ್ದಾನ ಮಾಡಿದ್ದು
22ಆಗ ಮೋಶೆಯು ಯೆಹೋವ ದೇವರ ಬಳಿಗೆ ಬಂದು, “ಸ್ವಾಮಿ, ಈ ಜನರಿಗೆ ಏಕೆ ಕಷ್ಟವನ್ನು ಕೊಟ್ಟಿದ್ದೀರಿ? ಏಕೆ ನನ್ನನ್ನು ಕಳುಹಿಸಿದಿರಿ?
23ನಾನು ಫರೋಹನ ಬಳಿಗೆ ಬಂದು ನಿಮ್ಮ ಹೆಸರಿನಲ್ಲಿ ಮಾತನಾಡಿದಂದಿನಿಂದ, ಈ ಜನರಿಗೆ ಅವನು ಕೇಡನ್ನೇ ಮಾಡುತ್ತಿದ್ದಾನೆ. ನೀವು ನಿಮ್ಮ ಜನರನ್ನು ರಕ್ಷಿಸಲಿಲ್ಲವಲ್ಲಾ,” ಎಂದನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.