Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಹೆಜ್ಕೇಲನು 12

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರ ವಾಕ್ಯವು ನನಗೆ ಬಂದಿತು:
2“ಮನುಷ್ಯಪುತ್ರನೇ, ನೀನು ತಿರುಗಿಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವ, ಅವರಿಗೆ ನೋಡುವುದಕ್ಕೆ ಕಣ್ಣುಗಳುಂಟು, ಆದರೆ ನೋಡುವುದಿಲ್ಲ; ಕೇಳುವುದಕ್ಕೆ ಕಿವಿಗಳುಂಟು, ಕೇಳುವುದಿಲ್ಲ. ಅವರು ತಿರುಗಿಬೀಳುವ ಮನೆತನದವರು.
3“ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.
4ನಿನ್ನ ಸಲಕರಣೆಗಳನ್ನು ತೆಗೆದುಕೊಂಡು ಹೋಗಲು ಅವುಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು. ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ
5ನೀನು ಅವರ ಕಣ್ಣುಗಳ ಮುಂದೆಯೇ ಗೋಡೆಯನ್ನು ಕೊರೆದು, ಅಲ್ಲಿಂದ ನಿನ್ನ ಸಲಕರಣೆಗಳನ್ನು ಹೊತ್ತುಕೊಂಡು ಹೊರಗೆ ಹೊರಟು ಹೋಗು.
6ಅವರ ಕಣ್ಣುಗಳ ಮುಂದೆ ಸಲಕರಣೆಗಳನ್ನು ಹೆಗಲಿನ ಮೇಲೆ ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೋಗಬೇಕು; ನೆಲವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.”
7ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು. ನನ್ನ ಸರಕುಗಳನ್ನು ಹಗಲಿನಲ್ಲಿಯೇ ಹೊರಗೆ ತಂದೆನು. ಸಂಜೆಯಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು. ಅದನ್ನು ನಾನು ಮುಸ್ಸಂಜೆಯಲ್ಲಿ ಹೊರಗೆ ತಂದು, ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
8ಬೆಳಗಿನ ಜಾವದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
9“ಮನುಷ್ಯಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೇ?
10“ಅವರಿಗೆ ನೀನು ಹೀಗೆ ಹೇಳಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ಈ ಪ್ರವಾದನೆಯು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ, ಅದರಲ್ಲಿರುವ ಸಮಸ್ತ ಇಸ್ರಾಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.
11ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಗುರುತಾಗಿದ್ದೇನೆ.’ “ನಾನು ಮಾಡಿದ ಹಾಗೆ ಅವರಿಗೆ ಮಾಡಲಾಗುವುದು. ಅವರು ಗುಲಾಮರಾಗಿ ಸೆರೆಗೆ ಹೋಗುವರು.
12“ಅವರ ಮಧ್ಯದಲ್ಲಿರುವ ರಾಜಪುತ್ರನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೊರಟು ಹೋಗುವನು. ಅವರು ಗೋಡೆಯನ್ನು ಕೊರೆದು, ಆ ಕಿಂಡಿಯ ಮೂಲಕ ತಮ್ಮ ಸಲಕರಣೆಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖವನ್ನು ಮುಚ್ಚಿಕೊಳ್ಳುವನು.
13ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
14ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ, ಅವನ ಎಲ್ಲಾ ಸೈನ್ಯಗಳನ್ನೂ, ಎಲ್ಲಾ ದಿಕ್ಕುಗಳಿಗೆ ಚದರಿಸಿ, ಅವರ ಹಿಂದೆ ಖಡ್ಗವನ್ನು ಬೀಸುವೆನು.
15“ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳ ಮೇಲೆ ಚೆಲ್ಲಾಪಿಲ್ಲಿಮಾಡುವಾಗ, ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.
16ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.”
17ಯೆಹೋವ ದೇವರ ವಾಕ್ಯವು ನನಗೆ ಬಂದಿತು,
18“ಮನುಷ್ಯಪುತ್ರನೇ, ಆಹಾರವನ್ನು ನಡುಗುತ್ತಾ ಊಟಮಾಡು ಮತ್ತು ನೀರನ್ನು ನಡುಗುವಿಕೆಯಿಂದಲೂ, ಎಚ್ಚರಿಕೆಯಿಂದಲೂ ಕುಡಿ.
19ನಿನ್ನ ದೇಶದ ಜನರಿಗೆ ಹೀಗೆ ಹೇಳು, ‘ಯೆರೂಸಲೇಮಿನ ನಿವಾಸಿಗಳಿಗೆ ಮತ್ತು ಇಸ್ರಾಯೇಲರ ದೇಶಕ್ಕೆ ಸಾರ್ವಭೌಮ ಯೆಹೋವ ದೇವರು ಹೇಳಿದ್ದೇನೆಂದರೆ, ಅವರು ತಮ್ಮ ರೊಟ್ಟಿಯನ್ನು ಎಚ್ಚರಿಕೆಯಿಂದಲೇ ತಿನ್ನುವರು, ನೀರನ್ನು ಅಂಜಿಕೆಯಿಂದಲೇ ಕುಡಿಯುವರು. ಅದರಲ್ಲಿ ವಾಸವಾಗಿರುವವರೆಲ್ಲರ ಹಿಂಸಾಚಾರದಿಂದ ಅವರ ದೇಶವು ಸೊತ್ತನ್ನೆಲ್ಲಾ ಕಳೆದುಕೊಂಡು ಹಾಳಾಗುವುದು.
20ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವುವು. ದೇಶವು ನಿರ್ಜನವಾಗುವುದು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ” ಯಾವುದೇ ವಿಳಂಬವಿಲ್ಲ
21ಯೆಹೋವ ದೇವರ ವಾಕ್ಯವು ನನಗೆ ಬಂದಿತು:
22“ಮನುಷ್ಯಪುತ್ರನೇ, ‘ದಿನಗಳು ಬಹಳವಾಗುತ್ತಿವೆ. ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂದು ಇಸ್ರಾಯೇಲ್ ದೇಶದಲ್ಲಿ ಹೇಳಿಕೊಳ್ಳುವ ಈ ಗಾದೆ ಏನು’?
23ಆದ್ದರಿಂದ ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನಾನು ಈ ಗಾದೆಯನ್ನು ನಿಲ್ಲಿಸುತ್ತೇನೆ. ಅದನ್ನು ಇನ್ನು ಮೇಲೆ ಇಸ್ರಾಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವುದಿಲ್ಲ. ದಿನಗಳು ಹತ್ತಿರವಾಗಿವೆ. ಪ್ರತಿದರ್ಶನವು ನೆರವೇರಲಿದೆ’ ಎಂದು ಅವರಿಗೆ ಹೇಳು.
24‘ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ಸುಳ್ಳು ದರ್ಶನವೂ, ಮೋಸದ ಶಕುನವೂ ಇರುವುದಿಲ್ಲ.
25ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”
26ಯೆಹೋವ ದೇವರ ವಾಕ್ಯವು ನನಗೆ ಬಂದಿತು:
27“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು, ‘ಇವನಿಗಾದ ದರ್ಶನವು ಬಹುದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆ,’ ಎಂದು ಹೇಳುತ್ತಾರೆ.”
28“ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ, ನನ್ನ ಯಾವುದೇ ಮಾತು ಇನ್ನು ತಡವಾಗದು. ನಾನು ಹೇಳಿದ್ದೆಲ್ಲವನ್ನು ನೆರವೇರುವುದೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.