Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಹೆಜ್ಕೇಲನು 19

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1“ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,
2ಹೀಗೆ ಹೇಳು: “ ‘ಇಗೋ, ನಿನ್ನ ತಾಯಿ, ಸಿಂಹಗಳ ಮಧ್ಯೆ ಸಿಂಹಿಣಿ, ತನ್ನ ಮರಿಗಳನ್ನು ಸಾಕಿ, ಯುವ ಸಿಂಹಗಳ ನಡುವೆ ವಾಸಿಸಿತು.
3ಅವಳೂ ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು, ಇದು ಪ್ರಾಯದ ಸಿಂಹವಾಯಿತು. ಇದು ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.
4ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು, ಅವರ ಗುಂಡಿಯಲ್ಲಿ ಇದನ್ನು ಹಿಡಿದುಕೊಂಡರು. ಸಂಕೋಲೆಗಳಿಂದ ಬಂಧಿಸಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.
5“ ‘ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕಳೆದುಕೊಂಡೆನೆಂದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು, ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.
6ಅದೂ ಸಿಂಹಗಳ ನಡುವೆ ತಿರುಗಾಡಿ, ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.
7ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.
8ಆಗ ಜನಾಂಗಗಳು ಸುತ್ತಲಿನ ಪ್ರಾಂತಗಳೊಳಗಿಂದ ಕೂಡಿಬಂದು, ಅದಕ್ಕೆ ವಿರೋಧವಾಗಿ ನಿಂತು, ಅದರ ಮೇಲೆ ಬಲೆಯನ್ನೊಡ್ಡಿದರು, ಆಗ ಅದು ಅವರ ಗುಂಡಿಯಲ್ಲಿ ಸಿಕ್ಕಿಬಿದ್ದಿತು.
9ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಪಂಜರದಲ್ಲಿ ಹಾಕಿ, ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾಯೇಲಿನ ಪರ್ವತಗಳ ಮೇಲೆ ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿದರು.
10“ ‘ನಿನ್ನ ತಾಯಿ ನೀರಿನ ಬಳಿಯಲ್ಲಿ ನೆಟ್ಟ ದ್ರಾಕ್ಷಿ ಗಿಡದ ಹಾಗೆ ಇದ್ದಾಳೆ. ಅದು ಸಮೃದ್ಧಿಯಾದ ನೀರಾವರಿಯಿಂದ ಫಲವುಳ್ಳದ್ದಾಗಿಯೂ ಇದೆ.
11ಆಳುವವರ ರಾಜದಂಡಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ. ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ. ಹಾಗೆಯೇ ಅದು ಬಹು ಕೊಂಬೆಗಳ ಮಧ್ಯದಲ್ಲಿ ಎತ್ತರವಾಗಿ ಕಾಣಬರುತ್ತಿದೆ.
12ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
13ಈಗ ಅದು ಮರುಭೂಮಿಯಲ್ಲಿ ಒಣಗಿ, ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ.
14ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.”
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.