Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಹೆಜ್ಕೇಲನು 2

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.”
2ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು.
3ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.
4ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು.
5ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು.
6ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.
7ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.
8ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು.
9ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು. ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು.
10ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.