Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಹೆಜ್ಕೇಲನು 37

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರ ಕೈ ನನ್ನ ಮೇಲೆ ಇತ್ತು; ಅದು ಆತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಯಲ್ಲಿ ಇಳಿಸಿತು.
2ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದನು. ತೆರೆದಿರುವ ಆ ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
3ಆತನು ನನಗೆ, “ನರಪುತ್ರನೇ, ಈ ಎಲುಬುಗಳು ಜೀವಿಸುವಂಥವೇ?” ಎಂದಾಗ, ನಾನು ಉತ್ತರವಾಗಿ, “ಸಾರ್ವಭೌಮ ಯೆಹೋವ ದೇವರೇ, ನೀವೇ ತಿಳಿದಿರುವಿರಿ,” ಎಂದೆನು.
4ಅವರು ನನಗೆ ಹೇಳಿದ್ದೇನೆಂದರೆ, “ಈ ಎಲುಬುಗಳ ಮೇಲೆ ಪ್ರವಾದಿಸಿ, ಅವುಗಳಿಗೆ ಹೇಳು: ‘ಒಣಗಿದ ಎಲುಬುಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ,
5ಸಾರ್ವಭೌಮ ಯೆಹೋವ ದೇವರು ಈ ಎಲುಬುಗಳಿಗೆ ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ. ನೀವು ಬದುಕುವಿರಿ;
6ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ತಂದು ಮತ್ತು ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”
7ಅದರಂತೆ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು. ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು. ಅದು ಕದಲುತ್ತಿತ್ತು, ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
8ನಾನು ನೋಡಿದಾಗ, ನರಗಳು ಮತ್ತು ಮಾಂಸವು ಅವುಗಳ ಮೇಲೆ ಬಂದವು. ಅವುಗಳ ಮೇಲೆ ಚರ್ಮವು ಮುಚ್ಚಿಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.
9ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯಪುತ್ರನೇ, ಆ ಉಸಿರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತಶರೀರಗಳು ಬದುಕುವಂತೆ ಅದರ ಮೇಲೆ ಊದು.’ ”
10ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು, ಅವುಗಳಲ್ಲಿ ಉಸಿರು ಬಂತು. ಅವುಗಳಲ್ಲಿ ಪಾದದ ಮೇಲೆ ಅವುಗಳು ನಿಂತವು, ಅತ್ಯಂತ ಮಹಾಸೈನ್ಯವಾದವು.
11ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’
12ಆದ್ದರಿಂದ ನೀನು ಪ್ರವಾದಿಸಿ ಅವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
13ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.
14ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ” ಒಬ್ಬನೇ ಅರಸ ಒಂದೇ ರಾಷ್ಟ್ರ
15ಯೆಹೋವ ದೇವರ ವಾಕ್ಯವು ನನಗೆ ಬಂದಿತು,
16“ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಯೆಹೂದನದು ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು,’ ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯೀಮಿನ ಕೋಲು ಯೋಸೇಫನಿಗೂ ಅವನ ಜೊತೆಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು,’ ಎಂದು ಬರೆದಿಡು.
17ಆ ಎರಡನ್ನು ಒಂದೇ ಕೋಲಾಗುವ ಹಾಗೆ ಜೋಡಿಸು. ಅವು ಒಂದಾಗಿ ನಿನ್ನ ಕೈಯಲ್ಲಿರುವುವು.
18“ ‘ಇದರ ಅರ್ಥವೇನೆಂದು ನೀನು ನಮಗೆ ಹೇಳುವುದಿಲ್ಲವೋ?’ ಎಂದು ನಿನ್ನ ದೇಶದ ಜನರು ನಿನ್ನನ್ನು ಪ್ರಶ್ನಿಸುವಾಗ,
19ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎಫ್ರಾಯೀಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು,’ ಎಂದು ಹೇಳು.
20ನೀನು ಬರೆದ ಆ ಕೋಲುಗಳು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿ ಹಿಡಿದು ಅವರಿಗೆ ಹೇಳು:
21‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.
22ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.
23ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
24“ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.
25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.
26ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
27ನನ್ನ ಗುಡಾರವು ಸಹ ಅವರೊಂದಿಗಿರುವುದು. ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.
28ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’ ”
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.