Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಹೆಜ್ಕೇಲನು 40

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
2ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
3ಅವರು ನನ್ನನ್ನು ಅಲ್ಲಿಗೆ ತಂದಾಗ, ಅಲ್ಲಿ ಕಂಚಿನಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲೂ ಅಳತೆಯ ಕೋಲೂ ಇತ್ತು. ಅವನು ಬಾಗಿಲಲ್ಲೇ ನಿಂತಿದ್ದನು.
4ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು. ಹೊರ ಅಂಗಳಕ್ಕೆ ಪೂರ್ವ ದ್ವಾರ
5ನಾನು ದೇವಾಲಯದ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿರುವ ಒಂದು ಗೋಡೆಯನ್ನು ಕಂಡೆನು. ಆ ಮನುಷ್ಯನ ಕೈಯಲ್ಲಿದ್ದ ಅಳತೆ ಕೋಲು ಸುಮಾರು ಮೂರು ಮೀಟರ್ ಉದ್ದವಿತ್ತು, ಪ್ರತಿಯೊಂದೂ ಒಂದು ಮೀಟರ್ ಮತ್ತು ಒಂದು ಅಂಗೈ ಅಗಲವಾಗಿತ್ತು. ಆ ಮನುಷ್ಯನು ಗೋಡೆಯನ್ನು ಅಳೆದನು. ಅದು ಒಂದು ಕೋಲು ಅಗಲ ಮತ್ತು ಒಂದು ಕೋಲು ಎತ್ತರವಾಗಿತ್ತು.
6ಆಮೇಲೆ ಅವನು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಬಾಗಿಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಿಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.
7ಕಾವಲುಗಾರರ ಕೋಣೆಯ ಉಪವಿಭಾಗಗಳು ಒಂದು ಕೋಲು ಉದ್ದ ಮತ್ತು ಒಂದು ಕೋಲು ಅಗಲವಿದ್ದವು ಮತ್ತು ಕೋಣೆಯ ಉಪವಿಭಾಗಗಳ ನಡುವಿನ ಗೋಡೆಗಳು ಸುಮಾರು ಮೂರು ಮೀಟರ್ ದಪ್ಪವಾಗಿದ್ದವು. ಮತ್ತು ದೇವಾಲಯಕ್ಕೆ ಎದುರಾಗಿರುವ ದ್ವಾರಮಂಟಪದ ಮುಂದಿನ ಹೆಬ್ಬಾಗಿಲಿನ ಹೊಸ್ತಿಲು ಒಂದು ಕೋಲು ಆಳವಾಗಿತ್ತು.
8ನಂತರ ಅವನು ಹೆಬ್ಬಾಗಿಲಿನ ದ್ವಾರಮಂಟಪವನ್ನು ಅಳೆದನು.
9ಆಮೇಲೆ ಬಾಗಿಲಿನ ದ್ವಾರಾಂಗಣವನ್ನು ಸುಮಾರು ನಾಲ್ಕು ಮೀಟರ್ ಅದರ ಕಂಬಗಳನ್ನು ಸುಮಾರು ಒಂದು ಮೀಟರ್ ಎಂದು ಅಳೆದನು. ಹೆಬ್ಬಾಗಿಲಿನ ದ್ವಾರಮಂಟಪವು ದೇವಾಲಯಕ್ಕೆ ಎದುರಾಗಿತ್ತು.
10ಪೂರ್ವದಿಕ್ಕಿನ ಕೋಣೆಯ ಉಪವಿಭಾಗಗಳು ಈ ಕಡೆಯಲ್ಲಿ ಮೂರೂ ಆ ಕಡೆಯಲ್ಲಿ ಮೂರೂ ಇದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡೂ ಕಡೆಯ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.
11ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು. ಅದರ ಅಗಲ ಸುಮಾರು ಐದು ಮೀಟರ್ ಹಾಗು ಉದ್ದ ಸುಮಾರು ಆರುವರೆ ಮೀಟರ್ ಇತ್ತು.
12ಪ್ರತಿಯೊಂದು ಕೋಣೆಯ ಉಪವಿಭಾಗಗಳ ಮುಂದೆ ಸುಮಾರು ಅರ್ಧ ಮೀಟರ್ ಎತ್ತರದ ಗೋಡೆಯಿತ್ತು. ಕೋಣೆಯ ಉಪವಿಭಾಗಗಳು ಸುಮಾರು ಮೂರು ಚದರ ಮೀಟರ್ ಆಗಿದ್ದವು.
13ಆಗ ಅವನು, ಒಂದು ಕೋಣೆಯ ಉಪವಿಭಾಗದ ಮಾಳಿಗೆಯಿಂದ ಇನ್ನೊಂದು ಕೋಣೆಯ ಉಪವಿಭಾಗದ ಮಾಳಿಗೆಯವರೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಸುಮಾರು ಹದಿಮೂರು ಮೀಟರಿತ್ತು.
14ಬಾಗಿಲಿನ ಚೌಕಟ್ಟಿನ ಕಂಬಗಳನ್ನು ಅಳತೆಮಾಡಲು ಸುಮಾರು ಮೂವತ್ತೆರಡು ಮೀಟರ್ ಇದ್ದವು. ಅದು ಬಾಗಿಲಿನ ಸುತ್ತಮುತ್ತಲಿರುವ ಕಂಬದವರೆಗೂ ಇತ್ತು.
15ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳಬಾಗಿಲಿನ ದ್ವಾರದ ಅಂಗಳದವರೆಗೂ ಸುಮಾರು ಇಪ್ಪತ್ತೇಳು ಮೀಟರ್ ದೂರವಿತ್ತು.
16ಕೋಣೆಯ ಉಪವಿಭಾಗಗಳು ಮತ್ತು ಬಾಗಿಲ ಚೌಕಟ್ಟಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು. ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು. ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು. ಹೊರ ಅಂಗಳ
17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆತಂದನು. ಅಲ್ಲಿ ನಾನು ಕೆಲವು ಕೋಣೆಗಳನ್ನು ಮತ್ತು ಅಂಗಳದ ಸುತ್ತಲೂ ನಿರ್ಮಿಸಲಾದ ಒಂದು ಕಾಲುದಾರಿಯನ್ನು ಕಂಡೆನು. ಕಾಲುದಾರಿ ಉದ್ದಕ್ಕೂ ಮೂವತ್ತು ಕೋಣೆಗಳಿದ್ದವು.
18ಬಾಗಿಲುಗಳ ಪಾರ್ಷ್ವದಲ್ಲಿಯೂ ಬಾಗಿಲುಗಳ ಉದ್ದಕ್ಕೆ ಸರಿಯಾಗಿಯೂ ಇದ್ದ ಆ ಕಲ್ಲು ಹಾಸಿದ ನೆಲವು ಕೆಳಗಿನ ನೆಲಗಟ್ಟಾಗಿತ್ತು.
19ಆಗ ಅವನು ಕೆಳಗಿನ ಬಾಗಿಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು. ಉತ್ತರದ ಹೆಬ್ಬಾಗಿಲು
20ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರಗಿನ ಬಾಗಿಲಿನ ಉದ್ದವನ್ನೂ ಅಗಲವನ್ನೂ ಅಳೆದನು.
21ಅದರ ಕೋಣೆಯ ಉಪವಿಭಾಗಗಳು ಈ ಕಡೆಗೂ ಆ ಕಡೆಗೂ ಮೂರು ಇದ್ದವು. ಅದರ ಕಂಬಗಳು ಮತ್ತು ಅದರ ಕೈಸಾಲೆಗಳು ಮೊದಲನೆಯ ಬಾಗಿಲಿನ ಅಳತೆಯಂತೆ ಇದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.
22ಅದರ ಕಿಟಕಿಗಳೂ ಅದರ ಕೈಸಾಲೆಗಳೂ ಅದರ ಖರ್ಜೂರದ ಗಿಡಗಳೂ ಪೂರ್ವ ಕಡೆಯ ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
23ಒಳಗಿನ ಅಂಗಳದ ಬಾಗಿಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಿಲಿಗೆ ಎದುರಾಗಿತ್ತು. ಅವನು ಬಾಗಿಲಿನಿಂದ ಬಾಗಿಲಿಗೆ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು. ದಕ್ಷಿಣದ ಹೆಬ್ಬಾಗಿಲು
24ಆಮೇಲೆ ಆತನು ನನ್ನನ್ನು ದಕ್ಷಿಣದ ಕಡೆಗೆ ಕರೆತಂದನು ಅಲ್ಲಿಯೂ ಬಾಗಿಲು ಇತ್ತು, ಅವನು ಅದರ ಕಂಬಗಳನ್ನು ಅದರ ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.
25ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.
26ಅದಕ್ಕೆ ಏರುವ ಹಾಗೆ ಏಳೂ ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು. ಅದರ ಕಂಬಗಳು ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರದಿಂದ ಅಲಂಕರಿಸಲಾಗಿತ್ತು.
27ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಿಲಿತ್ತು. ಅವನು ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿಗೆ ದಕ್ಷಿಣವಾಗಿ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು. ಒಳಗಿನ ಪ್ರಾಕಾರಕ್ಕೆ ಬಾಗಿಲು
28ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಿಲನ್ನು ಅಳೆದನು.
29ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.
30ಸುತ್ತಲಿರುವ ಕೈಸಾಲೆಗಳೂ ಸುಮಾರು ಇಪ್ಪತ್ತೈದು ಮೀಟರ್ ಉದ್ದವಾಗಿಯೂ ಸುಮಾರು ಹದಿಮೂರು ಮೀಟರ್ ಅಗಲವಾಗಿಯೂ ಇದ್ದವು.
31ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗಿದ್ದವು. ಅದರ ಕಂಬಗಳಲ್ಲಿ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು. ಅದಕ್ಕೆ ಏರುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.
32ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ಬಾಗಿಲನ್ನು ಅಳೆದನು.
33ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.
34ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.
35ಅವನು ನನ್ನನ್ನು ಉತ್ತರದ ಬಾಗಿಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;
36ಅಲ್ಲಿಯ ಕೋಣೆಯ ಉಪವಿಭಾಗಗಳು, ಅಲ್ಲಿನ ಕಂಬಗಳು, ಅಲ್ಲಿನ ಕೈಸಾಲೆಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.
37ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು. ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು. ಯಜ್ಞಗಳನ್ನು ಸಿದ್ಧಪಡಿಸುವ ಕೋಣೆಗಳು
38ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಿಲುಗಳ ಕಂಬಗಳ ಬಳಿಯಲ್ಲಿ, ದಹನಬಲಿಯನ್ನು ತೊಳೆಯುವಲ್ಲಿ ಇದ್ದವು;
39ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡು ಮೇಜುಗಳು ಈ ಕಡೆಗೆ ಮತ್ತು ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
40ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಮೇಜುಗಳೂ ಇದ್ದವು.
41ಬಾಗಿಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞಗಳನ್ನು ಅರ್ಪಿಸುತ್ತಿದ್ದರು.
42ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ನಿರ್ಮಿತವಾಗಿದ್ದವು. ಅವುಗಳ ಉದ್ದ ಮತ್ತು ಅಗಲ ಸುಮಾರು ಎಂಬತ್ತು ಸೆಂಟಿಮೀಟರ್, ಎತ್ತರವೂ ಸುಮಾರು ಐವತ್ತಮೂರು ಸೆಂಟಿಮೀಟರ್. ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿಸುವ ಸಲಕರಣೆಗಳನ್ನೂ ಇಡುತ್ತಿದ್ದರು.
43ಒಳಗೆ ಸುತ್ತಲಾಗಿ ಅಂಗೈ ಅಗಲದಷ್ಟು ಕೊಂಡಿಗಳು ಜಡಿಯಲಾಗಿದ್ದವು. ಮೇಜುಗಳ ಮೇಲೆ ಬಲಿಯ ಮಾಂಸವಿತ್ತು. ಯಾಜಕರ ಕೋಣೆಗಳು
44ಅನಂತರ ಅವನು ನನ್ನನ್ನು ಒಳಗಿನ ಪ್ರಾಕಾರಕ್ಕೆ ಕರೆತಂದರು. ಅಲ್ಲಿ ಎರಡು ಕೊಠಡಿಗಳು ಇದ್ದವು. ಒಂದು ಉತ್ತರದ ಬಾಗಿಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಿಲಿನ ಕಡೆಗೆ ಉತ್ತರಕ್ಕೆ ಅಭಿಮುಖವಾಗಿತ್ತು.
45ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.
46ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.”
47ಹೀಗೆ ಅವನು ಅಂಗಳವನ್ನು ಅಳೆದನು. ಅದರ ಉದ್ದವು ಸುಮಾರು ಐವತ್ತು ಮೀಟರ್, ಅಗಲವು ಸುಮಾರು ಐವತ್ತು ಮೀಟರ್ ಚಚ್ಚೌಕವಾಗಿತ್ತು. ಆ ಬಲಿಪೀಠವು ದೇವಾಲಯದ ಮುಂದೆ ಇತ್ತು. ನೂತನ ದೇವಾಲಯ
48ಅವನು ನನ್ನನ್ನು ಮನೆಯ ದ್ವಾರಮಂಟಪಕ್ಕೆ ಕರೆದುಕೊಂಡು ಹೋಗಿ, ದ್ವಾರಮಂಟಪ ಪ್ರತಿಯೊಂದು ಕಂಬವನ್ನೂ ಅಳೆದನು. ದ್ವಾರಮಂಟಪ ಅಗಲವು ಸುಮಾರು ಏಳು ಮೀಟರ್ ಮತ್ತು ಪಕ್ಕದ ಗೋಡೆಗಳ ಅಗಲವು ಎರಡೂ ಬದಿಗಳಲ್ಲಿ ಸುಮಾರು ಒಂದೂವರೆ ಮೀಟರ್ ಆಗಿತ್ತು.
49ದ್ವಾರಮಂಟಪದ ಅಗಲವು ಸುಮಾರು ಹನ್ನೊಂದು ಮೀಟರ್ ಮತ್ತು ಮುಂಭಾಗದಿಂದ ಹಿಂಭಾಗಕ್ಕೆ ಸುಮಾರು ಆರು ಮೀಟರ್. ಅದನ್ನು ಹತ್ತಲು ಮೆಟ್ಟಿಲುಗಳಿದ್ದವು ಮತ್ತು ಎರಡೂ ಬದಿಗಳಲ್ಲಿ ಬಾಗಿಲಿನ ಚೌಕಟ್ಟುಗಳ ಬದಿಗಳಲ್ಲಿ ಕಂಬಗಳು ಇದ್ದವು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.