Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಹೆಜ್ಕೇಲನು 42

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು.
2ಉತ್ತರ ಭಾಗದಲ್ಲಿ ಬಾಗಿಲು ಇದ್ದ ಕಟ್ಟಡವು ಸುಮಾರು ಐವತ್ತೆರಡು ಮೀಟರ್ ಉದ್ದ ಮತ್ತು ಇಪ್ಪತ್ತಾರು ಮೀಟರ್ ಅಗಲವಿತ್ತು.
3ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡಸಾಲೆಗಳ ಮೇಲೆ ಪಡಸಾಲೆಗಳಿದ್ದವು.
4ಕೊಠಡಿಗಳ ಮುಂದೆ ಸುಮಾರು ಐದು ಮೀಟರ್ ಅಗಲ ಮತ್ತು ಸುಮಾರು ಐವತ್ತೆರಡು ಮೀಟರ್ ಉದ್ದದ ಒಳ ಮಾರ್ಗವಿತ್ತು. ಅದರ ಬಾಗಿಲುಗಳು ಉತ್ತರಕ್ಕೆ ಎದುರಾಗಿದ್ದವು.
5ಈಗ ಮೇಲಿನ ಕೊಠಡಿಗಳೇ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮತ್ತು ಮಧ್ಯ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು.
6ಇವು ಮೂರು ಅಂತಸ್ತುಗಳಾಗಿದ್ದವು. ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ. ಆದ್ದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ನಡುವಣ ಕೋಣೆಗಳಿಗಿಂತ ಚಿಕ್ಕದಾಗಿದ್ದವು.
7ಕೊಠಡಿಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.
8ಏಕೆಂದರೆ ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿಯೂ ಮತ್ತು ದೇವಾಲಯದ ಮುಂದೆ ನೂರು ಮೊಳಗಳಿದ್ದವು.
9ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶವಿತ್ತು.
10ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.
11ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು. ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು. ಉತ್ತರ ದಿಕ್ಕಿನ ಬಾಗಿಲುಗಳು
12ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.
13ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ.
14ಯಾಜಕರು ಅವುಗಳಲ್ಲಿ ಪ್ರವೇಶಿಸುವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು. ಏಕೆಂದರೆ ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸಮೀಪಿಸಬೇಕು,” ಎಂದನು.
15ಹೀಗೆ ಅವನು ಒಳಗಿನ ಆಲಯದ ಅಳತೆಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಿಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.
16ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುಮಾರು 265 ಮೀಟರ್ ಆಗಿತ್ತು.
17ಉತ್ತರದ ಕಡೆಯಲ್ಲಿಯೂ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಸುಮಾರು 265 ಮೀಟರ್ ಎಂದು ಅಳೆದನು.
18ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗವನ್ನು ಸುಮಾರು 265 ಮೀಟರ್ ಎಂದು ಅಳೆದನು.
19ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಸುಮಾರು 265 ಮೀಟರ್ ಎಂದು ಅಳೆದನು.
20ಅವನು ನಾಲ್ಕು ಕಡೆಗಳಿಂದ ಅಳೆದನು. ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಸ್ಥಳವನ್ನೂ ಪ್ರತ್ಯೇಕಪಡಿಸುವ ಹಾಗೆ ಅದಕ್ಕೆ ಸುತ್ತಲು ಸುಮಾರು 265 ಮೀಟರ್ ಉದ್ದ ಮತ್ತು ಸುಮಾರು 265 ಮೀಟರ್ ಗೋಡೆ ಇತ್ತು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.