Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಹೆಜ್ಕೇಲನು 43

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಿಲಿಗೆ ಕರೆದುಕೊಂಡು ಹೋದನು.
2ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.
3ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು.
4ಆಗ ಯೆಹೋವ ದೇವರ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿಸಿತು.
5ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆತಂದಿತು. ಯೆಹೋವ ದೇವರ ಮಹಿಮೆಯಿಂದ ಆಲಯವು ತುಂಬಿಕೊಂಡಿತು.
6ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವುದನ್ನು ಕೇಳಿದೆನು. ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿದ್ದನು.
7ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.
8ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ. ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿಬಿಟ್ಟಿದ್ದೇನೆ.
9ಈಗ ಅವರು ತಮ್ಮ ವ್ಯಭಿಚಾರವನ್ನು ಮತ್ತು ನಿಮ್ಮ ರಾಜರ ಅಂತ್ಯಕ್ರಿಯೆಯ ವಿಧಿಗಳನ್ನು ಬಿಟ್ಟುಬಿಡಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ.
10“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ದೇವಾಲಯನ್ನು ವಿವರಿಸಿರಿ. ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಅದರ ಪರಿಪೂರ್ಣತೆಯನ್ನು ಪರಿಗಣಿಸಲಿ.
11ಅವರು ಮಾಡಿದ ಎಲ್ಲದಕ್ಕಾಗಿ ನಾಚಿಕೆಪಟ್ಟರೆ, ದೇವಾಲಯದ ರೂಪವನ್ನೂ, ಅದರ ಆಕಾರವನ್ನೂ, ಅದರ ಆಗಮನ ನಿರ್ಗಮನಗಳನ್ನೂ, ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ವಿವರಿಸು. ಅವರು ಅದರ ರಚನಾವಿಧಾನಗಳಿಗೆ ನಂಬಿಗಸ್ತರಾಗಿರುವಂತೆಯೂ ಅವರು ಅದರ ಎಲ್ಲಾ ಕಟ್ಟಳೆಗಳನ್ನೂ ಅನುಸರಿಸುವಂತೆಯೂ ಅವರ ಮುಂದೆಯೇ ಇವುಗಳನ್ನು ಬರೆ.
12“ಇದು ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿ ಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧವಾಗಿದೆ. ಇಗೋ, ಇದೇ ಆ ಆಲಯದ ನಿಯಮವಾಗಿದೆ. ಮಹಾ ಬಲಿಪೀಠವನ್ನು ಪುನಃಸ್ಥಾಪಿಸಲಾಗಿದೆ
13“ಬಲಿಪೀಠವು ಮೀಟರ್ ಅಳತೆಯ ಪ್ರಕಾರ ಹೀಗಿರಬೇಕು. ಕೆಳಭಾಗದ ಎತ್ತರ ಐವತ್ತು ಸೆಂಟಿಮೀಟರ್, ಮೇಲಿನ ಬಿಡುವಿನ ಅಗಲವು ಸುತ್ತಲೂ ಐವತ್ತು ಸೆಂಟಿಮೀಟರ್, ಬಿಡುವಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್;
14ಕೆಳಭಾಗದ ಎತ್ತರವು ಒಂದು ಮೊಳ ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಲೂ ದಿಂಡಿನ ಅಗಲವು ಒಂದು ಮೊಳ. ಇದೇ ಬಲಿಪೀಠ. ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರವು ಎರಡು ಮೊಳ, ಅದರ ಮೇಲಣ ಬಿಡುವಿನ ಅಗಲ ಒಂದು ಮೊಳ. ಸಣ್ಣ ಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
15ಅಗ್ನಿಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್ ಆ ಅಗ್ನಿಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.
16ಬಲಿಪೀಠದ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು, ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.
17ಅದರ ಅಂಚು ನಾಲ್ಕು ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ಅದರ ತಳವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಎದುರಾಗಿರಬೇಕು.”
18ಅವರು ನನಗೆ ಹೇಳಿದ್ದೇನೆಂದರೆ: “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಬಲಿಪೀಠವನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.
19ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಬಳಿಗೆ ಸಮೀಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯರಿಗೂ ದೋಷಪರಿಹಾರ ಬಲಿಗಾಗಿ ಎಳೆಯ ಹೋರಿಯನ್ನು ಕೊಡಬೇಕು.
20ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಬಲಿಪೀಠವನ್ನು ಶುದ್ಧೀಕರಿಸಿ ಮತ್ತು ಅದಕ್ಕೆ ಪ್ರಾಯಶ್ಚಿತ್ತವನ್ನು ಮಾಡಿರಿ.
21ಇದಲ್ಲದೆ ನೀನು ಹೋರಿಯನ್ನೂ ಸಹ ದೋಷಪರಿಹಾರ ಬಲಿಗೆ ತೆಗೆದುಕೊಂಡು ಆಲಯದ ನೇಮಕವಾದ ಸ್ಥಳದಲ್ಲಿ, ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.
22“ಎರಡನೆಯ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ದೋಷಪರಿಹಾರ ಬಲಿಯಾಗಿ ಅರ್ಪಿಸಬೇಕು. ಅವರು ಬಲಿಪೀಠವನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.
23ಹೀಗೆ ಅವರು ಶುದ್ಧಮಾಡಿದಾಗ ಕೊನೆಯಲ್ಲಿ ದೋಷವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.
24ನೀನು ಅವುಗಳನ್ನು ಯೆಹೋವ ದೇವರ ಮುಂದೆ ಅರ್ಪಿಸಬೇಕು. ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಬೇಕು.
25“ಏಳು ದಿನಗಳ ತನಕ ಪ್ರತಿದಿನವೂ ನೀನು ದೋಷಪರಿಹಾರ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ಧಮಾಡಬೇಕು.
26ಏಳು ದಿನಗಳ ತನಕ ಅವರು ಬಲಿಪೀಠವನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.
27ಈ ದಿನಗಳು ತೀರಿದಾಗ ಎಂಟನೆಯ ದಿನದ ತರುವಾಯ ಯಾಜಕರು ಬಲಿಪೀಠದ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.