Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಹೆಜ್ಕೇಲನು 9

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಆಗ ಅವರು ದೊಡ್ಡ ಧ್ವನಿಯಿಂದ, “ನಗರದ ಜನರಿಗೆ ನ್ಯಾಯತೀರಿಸಲು ನೇಮಕವಾಗಿರುವವರೇ, ನಿಮ್ಮ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ,” ಎಂದು ಹೇಳುವುದನ್ನು ನಾನು ಕೇಳಿದೆನು.
2ಕೂಡಲೇ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು. ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.
3ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ, ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು. ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಯೆಹೋವ ದೇವರು ಕೂಗಿ ಅವನಿಗೆ,
4“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.
5ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ, ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ,
6ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.
7ದೇವರು ಅವರಿಗೆ, “ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿರಿ, ಹೊರಡಿರಿ,” ಎಂದು ಹೇಳಿದರು. ಆಗ ಅವರು ಹೊರಟು ನಗರದಲ್ಲಿದ್ದವರನ್ನು ಕೊಂದರು.
8ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು.
9ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.
10ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.
11ನಾರುಮಡಿಯನ್ನು ಧರಿಸಿಕೊಂಡು ದೌತಿಯನ್ನು ತನ್ನ ನಡುವಿಗೆ ಕಟ್ಟಿಕೊಂಡಂಥ ಆ ಮನುಷ್ಯನು, “ವರ್ತಮಾನವನ್ನು ತಂದು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ,” ಎಂದನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.