Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಇಬ್ರಿಯರಿಗೆ 5

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.
2ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು.
3ಆ ಬಲಹೀನತೆಯ ಕಾರಣದಿಂದ ಆತನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಬೇಕಾದವನಾಗಿದ್ದಾನೆ.
4ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.
5ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು, “ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದು ಹೇಳಿದರು.
6ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ.
7ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.
8ಕ್ರಿಸ್ತ ಯೇಸು ದೇವರ ಪುತ್ರರಾಗಿದ್ದರೂ ತಾವು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡರು.
9ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.
10ಯೇಸು ದೇವರಿಂದ ನೇಮಕಗೊಂಡು, ಮೆಲ್ಕಿಜೆದೇಕನ ಕ್ರಮದ ಪ್ರಕಾರ ಮಹಾಯಾಜಕರಾದರು. ಬಿದ್ದು ಹೋಗುವುದರ ಬಗ್ಗೆ ಎಚ್ಚರಿಕೆ
11ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ನೀವು ಗ್ರಹಿಸ ಬಯಸದಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.
12ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
13ಹಾಲು ಕುಡಿಯುವವರು ಕೂಸಿನಂತಿದ್ದು ನೀತಿ ಬೋಧನೆಯಲ್ಲಿ ಅನುಭವ ಇಲ್ಲದವರಾಗಿದ್ದಾರೆ.
14ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.