Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಹೋಶೇಯ 1

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೂದದ ಅರಸರಾದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗ ಹೋಶೇಯನಿಗೆ ಯೆಹೋವ ದೇವರ ವಾಕ್ಯವು ಬಂದಿತು. ಹೋಶೇಯನ ಹೆಂಡತಿ ಮತ್ತು ಮಕ್ಕಳು
2ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.
3ಆಗ ಅವನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಬ್ಬ ಮಗನನ್ನು ಹೆತ್ತಳು.
4ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.
5ಆ ದಿನದಲ್ಲಿ, ನಾನು ಇಸ್ರಾಯೇಲಿನ ಬಿಲ್ಲು ಶಕ್ತಿಯನ್ನು ಇಜ್ರೆಯೇಲ್ ಕಣಿವೆಯಲ್ಲಿ ಮುರಿದು ಹಾಕುವೆನು,” ಎಂದು ಹೇಳಿದರು.
6ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ.
7ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.
8ಗೋಮೆರಳು ಲೋರುಹಾಮಾಳನ್ನು ಎದೆಹಾಲಿನ ಸೇವನೆಯಿಂದ ಬಿಡಿಸಿದ ಮೇಲೆ ಪುನಃ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
9ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.
10“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.
11ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.