Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಶಾಯ 12

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?
2ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”
3ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
4ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.
5ಯೆಹೋವ ದೇವರಿಗೆ ಹಾಡಿರಿ. ಏಕೆಂದರೆ, ಅವರು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾರೆ. ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.