Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಶಾಯ 31

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.
2ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು. ಅವರು ತಮ್ಮ ಮಾತನ್ನು ಹಿಂದೆಗೆಯುವುದಿಲ್ಲ. ಆದರೆ ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
3ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
4ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.
5ರೆಕ್ಕೆಗಳನ್ನು ಚಾಚಿದ ಪಕ್ಷಿಗಳಂತೆ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮನ್ನು ಕಾಪಾಡುವರು. ಅದನ್ನು ರಕ್ಷಿಸಿ ಕಾಯುವರು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವರು.
6ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.
7ಏಕೆಂದರೆ ನೀವು ನಿಮ್ಮ ಸ್ವಂತ ಕೈಗಳು ಪಾಪಕ್ಕೋಸ್ಕರ ಮಾಡಿದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
8ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.
9ಭಯಾನಕತೆಯಿಂದ ಅವರ ಕೋಟೆ ಬೀಳುವುದು, ಯುದ್ಧದ ದೃಶ್ಯವನ್ನು ನೋಡಿ ಅವರ ಸೇನಾಪತಿಗಳು ಧ್ವಜಸ್ಥಾನದಿಂದ ದಿಕ್ಕುಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವ ದೇವರು ಘೋಷಿಸುತ್ತಾರೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.