Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಶಾಯ 35

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಅರಣ್ಯವೂ, ಮರುಭೂಮಿಯೂ ಆನಂದಿಸುವುದು: ಒಣ ನೆಲವು ಹರ್ಷಿಸಿ, ತಾವರೆಯಂತೆ ಕಳಕಳಿಸುವುದು.
2ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.
3ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ. ನಡುಗುವ ಮೊಣಕಾಲುಗಳನ್ನು ದೃಢಪಡಿಸಿರಿ.
4ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.
5ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.
6ಆಗ ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯೂ ಹರ್ಷದಿಂದ ಹಾಡುವುದು. ಏಕೆಂದರೆ ಮರುಭೂಮಿಯಲ್ಲಿ ನೀರೂ, ಮರುಭೂಮಿಯಲ್ಲಿ ಒರತೆಗಳೂ ಒಡೆಯುವುವು.
7ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು.
8ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.
9ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.
10ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.