Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆರೆಮೀಯ 28

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಅದೇ ವರ್ಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ ಗಿಬ್ಯೋನಿನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾದಿಯು ಯೆಹೋವ ದೇವರ ಆಲಯದಲ್ಲಿ ಯಾಜಕರ ಮುಂದೆಯೂ, ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನೆಂದರೆ,
2“ಇಸ್ರಾಯೇಲಿನ ದೇವರೂ ಸೇನಾಧೀಶ್ವರ ಯೆಹೋವ ದೇವರೂ ಹೀಗೆ ಹೇಳುತ್ತಾರೆ: ‘ನಾನು ಬಾಬಿಲೋನಿನ ಅರಸನ ನೊಗವನ್ನು ಮುರಿದಿದ್ದೇನೆ.
3ಎರಡು ವರ್ಷದೊಳಗಾಗಿ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದುಕೊಂಡು, ಬಾಬಿಲೋನಿಗೆ ಒಯ್ದ ಯೆಹೋವ ದೇವರ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
4ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.”
5ಆಗ ಪ್ರವಾದಿಯಾದ ಯೆರೆಮೀಯನು ಯಾಜಕರ ಮುಂದೆಯೂ, ಯೆಹೋವ ದೇವರ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯನಿಗೆ,
6“ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
7ಆದರೂ ನಾನು ನಿನಗೂ, ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
8ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು.
9ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು.
10ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯಿಂದ ನೊಗವನ್ನು ತೆಗೆದು, ಅದನ್ನು ಮುರಿದುಬಿಟ್ಟನು.
11ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನೆಂದರೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇದೇ ಪ್ರಕಾರ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು,’ ” ಎಂದನು. ಆಗ ಪ್ರವಾದಿಯಾದ ಯೆರೆಮೀಯನು ತನ್ನ ಮಾರ್ಗವಾಗಿ ಹೊರಟುಹೋದನು.
12ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ, ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,
13“ನೀನು ಹೋಗಿ ಹನನ್ಯನಿಗೆ ಹೀಗೆ ಹೇಳು: ‘ನೀವು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವಕ್ಕೆ ಬದಲಾಗಿ ನಿನ್ನ ಮೇಲೆ ಕಬ್ಬಿಣದ ನೊಗಗಳನ್ನು ಉಂಟುಮಾಡು,’ ಎಂದು ಯೆಹೋವ ದೇವರು ಹೇಳುತ್ತಾರೆ.
14ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ”
15ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ.
16ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’ ” ಎಂದನು.
17ಹಾಗೆಯೇ ಪ್ರವಾದಿಯಾದ ಹನನ್ಯನು ಅದೇ ವರ್ಷದಲ್ಲಿ ಏಳನೆಯ ತಿಂಗಳಲ್ಲಿ ಸತ್ತನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.