Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆರೆಮೀಯ 37

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು.
2ಆದರೆ ಅವನೂ ಅವನ ಸೇವಕರೂ ದೇಶದ ಜನರೂ ಯೆಹೋವ ದೇವರ ಪ್ರವಾದಿಯಾದ ಯೆರೆಮೀಯನಿಂದ ಹೇಳಿಸಿದ ವಾಕ್ಯಗಳಿಗೆ ಕಿವಿಗೊಡಲಿಲ್ಲ.
3ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ, ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ, ಪ್ರವಾದಿಯಾದ ಯೆರೆಮೀಯನ ಬಳಿಗೆ ಕಳುಹಿಸಿ, “ನಮಗೋಸ್ಕರ ನಮ್ಮ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸು,” ಎಂದು ಹೇಳಿಸಿದನು.
4ಆಗ ಯೆರೆಮೀಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು. ಏಕೆಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
5ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ, ಯೆರೂಸಲೇಮನ್ನು ಬಿಟ್ಟುಹೋದರು.
6ಆಗ ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಯೆರೆಮೀಯನಿಗೆ ಬಂದಿತು:
7“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು.
8ಕಸ್ದೀಯರು ತಿರುಗಿಕೊಂಡು, ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು.’
9“ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಕಸ್ದೀಯರು ನಿಜವಾಗಿ ನಮ್ಮನ್ನು ಬಿಟ್ಟು ಹೋಗುವರು,’ ಎಂದುಕೊಂಡು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ; ಏಕೆಂದರೆ ಅವರು ತೊಲಗುವುದೇ ಇಲ್ಲ.
10ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.”
11ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ, ಯೆರೂಸಲೇಮನ್ನು ಬಿಟ್ಟುಹೋದ ಮೇಲೆ,
12ಯೆರೆಮೀಯನು ಬೆನ್ಯಾಮೀನನ ದೇಶಕ್ಕೆ ಹೋಗುವುದಕ್ಕೂ, ಜನರ ಮಧ್ಯದಿಂದ ತನ್ನ ಪಾಲನ್ನು ತೆಗೆದುಕೊಳ್ಳುವುದಕ್ಕೂ ಯೆರೂಸಲೇಮಿನಿಂದ ಹೊರಟನು.
13ಆಗ ಅವನು ಬೆನ್ಯಾಮೀನನ ಬಾಗಿಲಲ್ಲಿ ಇರುವಾಗ, ಅಲ್ಲಿ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನಾದ ಇರೀಯನೆಂಬ ಪಹರೆಯ ನಾಯಕನು ಇದ್ದನು. ಇವನು ಪ್ರವಾದಿಯಾದ ಯೆರೆಮೀಯನನ್ನು, “ನೀನು ಕಸ್ದೀಯರ ಪಕ್ಷಕ್ಕೆ ಸೇರುತ್ತೀ,” ಎಂದು ಹೇಳಿ ಹಿಡಿದನು.
14ಆದರೆ ಯೆರೆಮೀಯನು ಹೇಳಿದ್ದೇನೆಂದರೆ, ಸುಳ್ಳು; ನಾನು ಕಸ್ದೀಯರ ಕಡೆಗೆ ಸೇರುವವನಲ್ಲ. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆಮೀಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.
15ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
16ಯೆರೆಮೀಯನು ಆ ಬಂಧಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದನು.
17ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.
18ಇದಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇನೆಂದರೆ: “ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ, ನಿನ್ನ ಸೇವಕರಿಗೂ, ಈ ಜನರಿಗೂ ವಿರೋಧವಾಗಿ ಏನು ಅಪರಾಧ ಮಾಡಿದ್ದೇನೆ?
19ಬಾಬಿಲೋನಿನ ಅರಸನು ನಿಮ್ಮ ಮೇಲೆಯೂ, ಈ ದೇಶದ ಮೇಲೆಯೂ ಬರುವುದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?
20ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು.
21ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.