Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆರೆಮೀಯ 40

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.
2ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.
3ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.
4ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.
5ಯೆರೆಮೀಯನು ಇನ್ನು ಹಿಂದಿರುಗದೆ ಇರುವಾಗ, ನೆಬೂಜರದಾನನು ಹೇಳಿದ್ದೇನೆಂದರೆ: “ಬಾಬಿಲೋನಿನ ಅರಸನು ಯೆಹೂದದ ಪಟ್ಟಣಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನ ಬಳಿಗೆ ತಿರುಗಿಕೋ; ಅವನ ಸಂಗಡ ಜನರೊಳಗೆ ವಾಸಮಾಡು. ಇಲ್ಲವೆ ಎಲ್ಲಿ ಹೋಗುವುದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ, ಅಲ್ಲಿಗೆ ಹೋಗು,” ಎಂದು ಹೇಳಿ, ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ, ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
6ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು. ಗೆದಲ್ಯನನ್ನು ಕೊಂದದ್ದು
7ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ,
8ನೆತನ್ಯನ ಮಗ ಇಷ್ಮಾಯೇಲನೂ; ಕಾರೇಹನ ಮಗ ಯೋಹಾನಾನ್, ಯೋನಾತಾನ್; ತನ್ಹುಮೆತನ ಮಗ ಸೆರಾಯ್; ನೆಟೋಫದವನಾದ ಏಫಯನ ಪುತ್ರರೂ; ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ; ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
9ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.
10ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು.
11ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ
12ಯೆಹೂದ್ಯರೆಲ್ಲರೂ, ಅವರು ಓಡಿಸಲಾಗಿದ್ದ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು, ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ, ಬೇಸಿಗೆ ಕಾಲದ ಹಣ್ಣುಗಳನ್ನೂ ಕೂಡಿಸಿದರು.
13ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು,
14“ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
15ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು.
16ಆದರೆ ಅಹೀಕಾಮನ ಮಗ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಈ ಕೆಲಸ ಮಾಡಬೇಡ, ಏಕೆಂದರೆ ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ,” ಎಂದನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.