Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೋಬ 23

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:
2“ಇಂದಿಗೂ ನನ್ನ ದೂರು ಕಹಿಯಾಗಿದೆ; ನಾನು ನಿಟ್ಟುಸಿರಿಟ್ಟರೂ ದೇವರ ಹಸ್ತವು ಭಾರವಾಗಿದೆ.
3ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು! ಸಾಧ್ಯವಾದರೆ ನಾನು ದೇವರು ವಾಸಿಸುವ ಸ್ಥಳದ ತನಕ ಹೋಗುತ್ತಿದ್ದೆ.
4ನನ್ನ ನ್ಯಾಯವನ್ನು ದೇವರ ಮುಂದೆ ವಿವರಿಸುತ್ತಿದ್ದೆ; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುತ್ತಿದ್ದೆ.
5ದೇವರು ನನಗೆ ಉತ್ತರವಾಗಿ ಕೊಡುವ ಮಾತುಗಳನ್ನು ಕಂಡುಹಿಡಿದು, ದೇವರು ನನಗೆ ಹೇಳುವುದನ್ನು ಪರಿಗಣಿಸುತ್ತಿದ್ದೆ.
6ದೇವರು ನನ್ನನ್ನು ಕಠಿಣವಾಗಿ ವಿರೋಧಿಸುತ್ತಾರೋ? ಇಲ್ಲ, ಖಂಡಿತವಾಗಿ ಅವರು ನನ್ನ ವಿರುದ್ಧ ಆರೋಪಗಳನ್ನು ಹೊರಿಸುವುದಿಲ್ಲ.
7ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು.
8“ಒಂದು ವೇಳೆ ನಾನು ಪೂರ್ವದೆಡೆಗೆ ಹೋದರೂ ದೇವರು ನನಗೆ ಕಾಣಿಸುವುದಿಲ್ಲ; ಪಶ್ಚಿಮದೆಡೆಗೆ ಹೋದರೂ ದೇವರು ಕಾಣಿಸುವುದಿಲ್ಲ.
9ಉತ್ತರದಲ್ಲಿ ಹುಡುಕಿದರೂ ದೇವರನ್ನು ನೋಡಲಾರೆನು; ದಕ್ಷಿಣದೆಡೆಗೆ ತಿರುಗಿಕೊಂಡರೂ ದೇವರು ಕಾಣಿಸುವುದಿಲ್ಲ.
10ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.
11ನನ್ನ ಪಾದಗಳು ದೇವರ ಹೆಜ್ಜೆಯ ಜಾಡಿನಲ್ಲಿ ನಿಕಟವಾಗಿ ಅನುಸರಿಸಿವೆ; ದೇವರ ಮಾರ್ಗವನ್ನು ಬಿಟ್ಟು ನಾನು ತೊಲಗದಂತೆ ನೋಡಿಕೊಂಡೆನು.
12ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.
13“ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ.
14ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ. ಇಂಥ ಅನೇಕ ಯೋಜನೆಗಳು ದೇವರಲ್ಲಿವೆ.
15ಆದ್ದರಿಂದ ನಾನು ದೇವರ ಮುಂದೆ ಗಾಬರಿಗೊಳ್ಳುತ್ತೇನೆ; ಇದನ್ನೆಲ್ಲಾ ಗ್ರಹಿಸಿಕೊಳ್ಳುವಾಗ ನಾನು ದೇವರಿಗೆ ಭಯಪಡುತ್ತೇನೆ.
16ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ; ಸರ್ವಶಕ್ತರು ನನ್ನನ್ನು ಗಾಬರಿಪಡಿಸಿದ್ದಾರೆ.
17ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ; ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲಿನ ನಿಮಿತ್ತ ನಾನು ಮಾತಾಡದೆ ಇರುವುದಿಲ್ಲ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.