Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೋಬ 27

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:
2ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ,
3“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ; ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಆಡುತ್ತಿದೆ.
4ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ.
5ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ.
6ನನ್ನ ನಿಷ್ಕಪಟತೆಯನ್ನು ದೃಢವಾಗಿ ಹಿಡುಕೊಂಡಿದ್ದೇನೆ; ಅದನ್ನು ಎಂದಿಗೂ ನಾನು ಹೋಗಗೊಡಿಸುವುದಿಲ್ಲ; ನಾನು ಜೀವಂತವಾಗಿ ಇರುವವರೆಗೂ ನನ್ನ ಮನಸ್ಸಾಕ್ಷಿಯು ನನ್ನನ್ನು ನಿಂದಿಸುವುದಿಲ್ಲ.
7“ನನ್ನ ಶತ್ರು ದುಷ್ಟನ ಹಾಗಿರಲಿ; ನನ್ನ ವಿರುದ್ಧ ಏಳುವವನು ಅನ್ಯಾಯವಂತನ ಹಾಗಿರಲಿ.
8ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?
9ಭಕ್ತಿಹೀನನಿಗೆ ಯಾತನೆ ಬಂದರೆ, ದೇವರು ಅವನ ಮೊರೆಯನ್ನು ಕೇಳುವರೋ?
10ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿಯೂ ದೇವರನ್ನು ಕರೆಯುವನೋ?
11“ನಾನು ದೇವರ ಶಕ್ತಿಯ ಬಗ್ಗೆ ನಿಮಗೆ ಬೋಧಿಸುವೆನು; ಸರ್ವಶಕ್ತರ ಮಾರ್ಗಗಳನ್ನು ನಾನು ಮರೆಮಾಡೆನು.
12ನೀವೆಲ್ಲರೂ ಇದನ್ನು ನೋಡಿದ್ದರೂ, ಮತ್ತೆ ಏಕೆ ಈ ಪ್ರಕಾರ ವ್ಯರ್ಥವಾಗಿ ವಾದಿಸುತ್ತೀರಿ?
13“ಇದು ದುಷ್ಟರಿಗೆ ದೇವರಿಂದ ಬಂದ ಪಾಲಾಗಿದೆ; ಹಿಂಸಕರಿಗೆ ಸರ್ವಶಕ್ತರಿಂದ ಹೊಂದುವ ಪಾಲು ಹೀಗಿರುತ್ತವೆ:
14ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು.
15ಅವರ ಮನೆಯಲ್ಲಿ ಯಾರಾದರೂ ಉಳಿದರೆ, ವ್ಯಾಧಿಯಿಂದ ಸತ್ತು ಸಮಾಧಿ ಸೇರುವರು; ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.
16ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ,
17ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು; ಅವರ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.
18ದುಷ್ಟರು ಕಟ್ಟಿಕೊಂಡ ಮನೆಯು ಜೇಡ ಹುಳದ ಗೂಡಿನಂತೆಯೂ, ಕಾವಲುಗಾರನ ಗುಡಿಸಿಲಂತೆಯೂ ದುರ್ಬಲವಾಗಿರುವುದು.
19ದುಷ್ಟರು ಧನಿಕರಾಗಿ ನಿದ್ರಿಸಿದರೂ ಮತ್ತೆ ನಿದ್ರೆಬಾರದು; ಅವರು ತಮ್ಮ ಕಣ್ಣನ್ನು ತೆರೆಯುತ್ತಲೇ ಆಸ್ತಿ ಇಲ್ಲವಾಗಿರುವುದು.
20ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು.
21ಪೂರ್ವದಿಕ್ಕಿನ ಗಾಳಿ ದುಷ್ಟರನ್ನು ಬಡಿಯಲು, ಅವರು ಕೊಚ್ಚಿಕೊಂಡು ಹೋಗುವರು; ಅದು ಅವರನ್ನು ಅವರ ಸ್ಥಳದಿಂದ ಹಾರಿಸಿಬಿಡುವುದು.
22ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.
23ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.