Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೋಬ 4

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟನು:
2“ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ, ನಿನಗೆ ಬೇಸರಿಕೆ ಉಂಟಾಗುವುದೋ? ಮಾತಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?
3ಅನೇಕರಿಗೆ ನೀನು ಶಿಕ್ಷಣ ಕೊಟ್ಟದ್ದನ್ನೂ ಬಲಹೀನ ಕೈಗಳನ್ನು ಬಲಪಡಿಸಿದ್ದನ್ನೂ ಯೋಚಿಸು.
4ಎಡವಿ ಬೀಳುವವನನ್ನು ನಿನ್ನ ನುಡಿಗಳು ಎದ್ದು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲಪಡಿಸಿದೆ.
5ಈಗ ಆಪತ್ತು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತಿರುವೆ; ನಿನಗೂ ಕಡುಕಷ್ಟ ತಟ್ಟಿದ್ದರಿಂದ ಕಳವಳಪಡುತ್ತಿರುವೆ.
6ನಿನ್ನ ಭಯಭಕ್ತಿಯೇ ನಿನಗೆ ಭರವಸೆಯೂ ನಿನ್ನ ಸನ್ಮಾಮಾರ್ಗಗಳು ನಿನ್ನ ನಿರೀಕ್ಷೆಯೂ ಆಗಿರಬೇಕಲ್ಲವೇ?
7“ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿವಂತರು ಅಳಿದು ಹೋದದ್ದು ಎಲ್ಲಿ?
8ನಾನು ಕಂಡ ಹಾಗೆ ಕೆಟ್ಟತನವನ್ನು ಊಳುವವರೂ ದುಷ್ಟತನವನ್ನು ಬಿತ್ತುವವರೂ ಅದನ್ನೇ ಕೊಯ್ಯುವರು.
9ದೇವರ ಉಸಿರಿನಿಂದ ಅವರು ಕ್ಷಯಿಸಿ ಹೋಗುತ್ತಾರೆ. ದೇವರ ದಂಡನೆಯಿಂದ ಅಂಥವರು ನಾಶವಾಗುತ್ತಾರೆ;
10ಸಿಂಹಗಳು ಗರ್ಜಿಸಬಹುದು ಮತ್ತು ಕೂಗಬಹುದು, ಆದರೂ ಪ್ರಾಯದ ಸಿಂಹಗಳ ಹಲ್ಲುಗಳು ಮುರಿದುಹೋಗಿವೆ.
11ಸಿಂಹವು ಬೇಟೆ ಇಲ್ಲದ್ದರಿಂದ ನಾಶವಾಗುತ್ತದೆ; ಸಿಂಹದ ಮರಿಗಳು ಚದರಿಹೋಗುವವು.
12“ಒಂದು ಮಾತು ನನಗೆ ಗುಟ್ಟಾಗಿ ತಿಳಿದುಬಂತು, ಅದರ ಪಿಸುಮಾತು ನನ್ನ ಕಿವಿಗೆ ಬಿತ್ತು.
13ರಾತ್ರಿ ಕನಸಿನ ಆಲೋಚನೆಗಳಲ್ಲಿಯೂ ಗಾಢನಿದ್ರೆಯು ಜನರಿಗೆ ಹತ್ತುವಾಗಲೂ
14ಭಯವೂ ನಡುಕವೂ ನನ್ನನ್ನು ಹಿಡಿದು, ನನ್ನ ಎಲ್ಲಾ ಎಲುಬುಗಳನ್ನು ನಡುಗಿಸಿತು.
15ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು, ಆಗ ನನ್ನ ಮೈ ರೋಮವೆಲ್ಲಾ ನಿಮಿರಿ ನಿಂತವು.
16ಆ ಆತ್ಮ ನಿಂತಿದ್ದರೂ ಅದು ಏನೆಂದು ನನಗೆ ತಿಳಿಯಲಿಲ್ಲ. ಅದರ ರೂಪವು ನನ್ನ ಕಣ್ಣು ಮುಂದೆ ನಿಂತಿತ್ತು, ಆಗ ಒಂದು ಸೂಕ್ಷ್ಮ ಸ್ವರವು ಕೇಳಿಸಿತು:
17‘ಮನುಷ್ಯನು ದೇವರಿಗಿಂತ ಹೆಚ್ಚು ನೀತಿವಂತನಾಗಿರಲು ಸಾಧ್ಯವೇ? ಮಾನವನು ಸೃಷ್ಟಿಕರ್ತ ದೇವರಿಗಿಂತಲೂ ಶುದ್ಧನಾಗಿರಲು ಸಾಧ್ಯವೇ?
18ತಮ್ಮ ಸೇವಕರಲ್ಲಿ ದೇವರು ನಂಬದೆ, ತಮ್ಮ ದೂತರಲ್ಲಿಯೇ ತಪ್ಪು ಕಂಡಿರಲು,
19ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?
20ಬೆಳಿಗ್ಗೆಯಿಂದ ಸಂಜೆಯವರೆಗೆ ಜೀವಿಸಿದ ಅವರು ನಾಶವಾಗುತ್ತಾರೆ; ಯಾರ ಗಮನಕ್ಕೂ ಬಾರದೇ ನಿತ್ಯ ನಾಶವಾಗುತ್ತಾರೆ.
21ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದು, ಅವರು ಜ್ಞಾನವಿಲ್ಲದೆ ಸಾಯುವರು.’
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.