Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯೆಹೋಶುವ 20

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರು ಯೆಹೋಶುವನಿಗೆ,
2“ನಾನು ಮೋಶೆಯ ಮುಖಾಂತರ ನಿನಗೆ ಹೇಳಿದ ಆಶ್ರಯದ ಪಟ್ಟಣಗಳನ್ನು ಗೊತ್ತುಮಾಡಿಕೊಳ್ಳುವಂತೆ ನೀನು ಇಸ್ರಾಯೇಲರಿಗೆ ಹೇಳು.
3ಯಾವನಾದರು ಅರಿಯದೆ ಅಕಸ್ಮಾತ್ತಾಗಿ ಕೈತಪ್ಪಿ ಕೊಂದುಹಾಕಿದರೆ, ಅಂಥವನು ಅಲ್ಲಿಗೆ ಓಡಿಹೋಗಲಿ. ಅವನಿಗೆ ರಕ್ತದ ಸೇಡು ತೀರಿಸುವವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರಲಿ.
4ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು, ಪಟ್ಟಣದ ಬಾಗಿಲ ದ್ವಾರದಲ್ಲಿ ನಿಂತುಕೊಂಡು, ಆ ಪಟ್ಟಣದ ಹಿರಿಯರ ಮುಂದೆ ತನ್ನ ವ್ಯಾಜ್ಯವನ್ನು ತಿಳಿಸಬೇಕು. ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಳ್ಳಲಿ. ಅವರು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಲಿ.
5ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ, ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು. ಏಕೆಂದರೆ ಅವನು ತನ್ನ ನೆರೆಯವನನ್ನು ಅಕಸ್ಮಾತ್ತಾಗಿ ಕೊಂದನು ಮತ್ತು ಪೂರ್ವದಲ್ಲಿ ಅವನ ಬಗ್ಗೆ ದ್ವೇಷ ಇರಲಿಲ್ಲ.
6ಇದಲ್ಲದೆ ಅವನು ನ್ಯಾಯ ವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆ ದಿವಸಗಳಲ್ಲಿ ಇರುವ ಮಹಾಯಾಜಕನು ಮರಣ ಹೊಂದುವವರೆಗೂ ಆ ಪಟ್ಟಣದಲ್ಲೇ ವಾಸವಾಗಿರಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿ ಹೋದ ತನ್ನ ಪಟ್ಟಣಕ್ಕೂ, ತನ್ನ ಮನೆಗೂ ತಿರುಗಿಬರಬಹುದು,” ಎಂದು ಹೇಳಿದರು.
7ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.
8ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.
9ಕೈತಪ್ಪಿ ಅರಿಯದೆ ಅಕಸ್ಮಾತ್ತಾಗಿ ಕೊಂದವನು ಯಾವನಾದರೂ ನ್ಯಾಯಸಭೆಯ ಮುಂದೆ ಬಂದು ನಿಲ್ಲುವ ತನಕ, ಸೇಡು ತೀರಿಸಿಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿಹೋಗುವುದಕ್ಕೆ ಇಸ್ರಾಯೇಲರೆಲ್ಲರಿಗೂ, ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲಾದ ಪಟ್ಟಣಗಳು ಇವೇ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.