Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯಾಜಕಕಾಂಡ 21

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ, ಅವರಿಗೆ ಹೀಗೆ ಹೇಳು: ಸತ್ತವರ ದೇಹವನ್ನು ಮುಟ್ಟುವುದರಿಂದ ಯಾವ ಯಾಜಕನೂ ಅಪವಿತ್ರನಾಗಬಾರದು.
2ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿಯಾಗಿ, ತಂದೆಯಾಗಿ, ಅವನ ಮಗನಿಗಾಗಿ, ಅವನ ಮಗಳಿಗಾಗಿ, ಅವನ ಸಹೋದರನಿಗಾಗಿ,
3ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಹೊರತು,
4ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿರುವುದರಿಂದ ತನ್ನನ್ನು ತಾನು ಅಪವಿತ್ರವಾಗಬಾರದು.
5“ ‘ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿಕೊಳ್ಳಬಾರದು. ದೇಹವನ್ನು ಗಾಯಮಾಡಿಕೊಳ್ಳಬಾರದು.
6ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.
7“ ‘ಯಾಜಕರು ತಮ್ಮ ದೇವರಿಗೆ ಪರಿಶುದ್ಧರಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಠ ಸ್ತ್ರೀಯನ್ನಾಗಲಿ, ಗಂಡನಿಂದ ವಿಚ್ಛೇದನ ಪಡೆದವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
8ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.
9“ ‘ಯಾವುದೇ ಯಾಜಕನ ಮಗಳು ವ್ಯಭಿಚಾರ ಕೃತ್ಯದಿಂದ ತನ್ನನ್ನು ಅಪವಿತ್ರ ಮಾಡಿಕೊಂಡರೆ, ಅವಳು ತನ್ನ ತಂದೆಯನ್ನು ಅಗೌರವಿಸಿದ್ದಾಳೆ. ಅವಳನ್ನು ಬೆಂಕಿಯಿಂದ ಸುಡಬೇಕು.
10“ ‘ತನ್ನ ಸಹೋದರರೊಳಗೆ ಮಹಾಯಾಜಕನಾಗಿದ್ದು, ಯಾವನು ತೈಲಾಭಿಷೇಕ ಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ, ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು, ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು.
11ಯಾವ ಮೃತ ಶರೀರದ ಬಳಿಗೂ ಹೋಗಬಾರದು, ಅವನು ತನ್ನ ತಂದೆತಾಯಿಗಳ ಮರಣದ ನಿಮಿತ್ತ, ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.
12ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ಮತ್ತು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನೇ ಯೆಹೋವ ದೇವರು.
13“ ‘ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು
14ವಿಧವೆಯನ್ನಾಗಲಿ, ಗಂಡ ಬಿಟ್ಟ ಸ್ತ್ರೀಯನ್ನಾಗಲಿ, ಇಲ್ಲವೆ ಅಪವಿತ್ರಳನ್ನಾಗಲಿ, ವೇಶ್ಯೆಯನ್ನಾಗಲಿ, ಇಂಥವರನ್ನು ಅವನು ಮದುವೆಯಾಗಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು.
15ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಏಕೆಂದರೆ ಯೆಹೋವ ದೇವರಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.’ ”
16ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
17“ಆರೋನನೊಂದಿಗೆ ಮಾತನಾಡಿ ಹೀಗೆ ಹೇಳು: ‘ನಿನ್ನ ಸಂತತಿಯ ವಂಶಾವಳಿಗಳಲ್ಲಿ ಯಾವನಿಗೆ ನ್ಯೂನತೆವಿರುತ್ತದೋ, ಅವನು ದೇವರ ರೊಟ್ಟಿಯನ್ನು ಸಮರ್ಪಿಸುವುದಕ್ಕಾಗಿ ಬರಬಾರದು.
18ಊನಗೊಂಡ ಮನುಷ್ಯನು ಸಮೀಪಕ್ಕೆ ಬರಬಾರದು. ಎಂದರೆ, ಕಣ್ಣಿಲ್ಲದವನು, ಕುಂಟನು, ಕುರೂಪವುಳ್ಳವನು, ಅಂಗವಿಕಲನು,
19ಮುರಿದ ಪಾದವುಳ್ಳವನು, ಮುರಿದ ಕೈಯುಳ್ಳವನು,
20ಗೂನು ಬೆನ್ನುಳ್ಳವನು, ಗಿಡ್ಡನು, ಕಣ್ಣುಗಳಲ್ಲಿ ನ್ಯೂನತೆವುಳ್ಳವನು, ಕಜ್ಜಿತುರಿಗಳುಳ್ಳವನು, ತನ್ನನ್ನು ನಪುಂಸಕನನ್ನಾಗಿ ಮಾಡಿಕೊಂಡವನು,
21ಯಾಜಕನಾದ ಆರೋನನ ಸಂತತಿಯಲ್ಲಿ ನ್ಯೂನತೆವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಬರಬಾರದು. ನ್ಯೂನತೆವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವುದಕ್ಕಾಗಿ ಸಮೀಪ ಬರಬಾರದು.
22ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು.
23ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”
24ಮೋಶೆಯು ಅದನ್ನು ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರಿಗೂ ಹೇಳಿದನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.