Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಯಾಜಕಕಾಂಡ 24

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2“ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು.
3ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ನಿಮಗೆ ಮತ್ತು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರುವುದು.
4ದೀಪಗಳು ಚೊಕ್ಕ ಬಂಗಾರದ ದೀಪಸ್ತಂಭದ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
5“ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು.
6ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು.
7ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
8ಪ್ರತಿಯೊಂದು ಸಬ್ಬತ್ ದಿನದಲ್ಲಿಯೂ ಯೆಹೋವ ದೇವರ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮಪಡಿಸಬೇಕು. ಇದು ಇಸ್ರಾಯೇಲರ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
9ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.” ದೇವದೂಷಕನಿಗೆ ಮರಣಶಿಕ್ಷೆ
10ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ, ಈಜಿಪ್ಟಿನವನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲರ ಪಾಳ್ಯಕ್ಕೆ ಬಂದನು. ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಜಗಳವಾಡಿದರು.
11ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.
12ಯೆಹೋವ ದೇವರ ಮನಸ್ಸನ್ನು ತಿಳಿಯುವಂತೆ ಅವನನ್ನು ಕಾವಲಲ್ಲಿ ಬಿಟ್ಟರು.
13ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
14“ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
15ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ಶಪಿಸುವವನು, ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
16ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು.
17“ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
18ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು.
19ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು.
20ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವರು ಒಬ್ಬರಿಗೆ ಊನ ಮಾಡಿದ ಹಾಗೆಯೇ ಅವರಿಗೂ ಮಾಡಬೇಕು.
21ಪಶುವನ್ನು ಕೊಲ್ಲುವವರು ಅದಕ್ಕೆ ಬದಲುಕೊಡಬೇಕು. ಮನುಷ್ಯರನ್ನು ಕೊಲ್ಲುವವರನ್ನು ಮರಣಕ್ಕೆ ಒಳಪಡಿಸಬೇಕು.
22ನಿಮಗೆ ಒಂದೇ ವಿಧವಾದ ನಿಯಮವಿರಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”
23ಶಪಿಸಿದವನನ್ನು ಪಾಳೆಯದ ಹೊರಗೆ ತಂದು, ಅವನನ್ನು ಕಲ್ಲುಗಳಿಂದ ಹೊಡೆಯುವಂತೆ ಮೋಶೆಯು ಇಸ್ರಾಯೇಲರೊಂದಿಗೆ ಮಾತನಾಡಿದನು. ಆಗ ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.