Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಅರಣ್ಯಕಾಂಡ 28

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
2“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’
3ನೀನು ಅವರಿಗೆ ಹೇಳಬೇಕಾದದ್ದು: ‘ನೀವು ಯೆಹೋವ ದೇವರಿಗೆ ಅರ್ಪಿಸಬೇಕಾದ ಅರ್ಪಣೆ ಏನೆಂದರೆ, ನಿಯಮಿತವಾಗಿ ಪ್ರತಿದಿನ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನು ದಹನಬಲಿಯಾಗಿ ಅರ್ಪಿಸಬೇಕು.
4ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.
5ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು.
6ಇದು ಸೀನಾಯಿ ಪರ್ವತದಲ್ಲಿ ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
7ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು.
8ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಸಬ್ಬತ್ ದಿನದ ಸಮರ್ಪಣೆಗಳು
9“ ‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.
10ನಿತ್ಯ ದಹನಬಲಿಯ ಹೊರತು, ಪ್ರತಿ ಸಬ್ಬತ್ ದಿನಕ್ಕೆ ತಕ್ಕ ದಹನಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ತಿಂಗಳಿನ ಸಮರ್ಪಣೆಗಳು
11“ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,
12ಒಂದೊಂದು ಹೋರಿಗೆ ಧಾನ್ಯ ಅರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಮೂರು ಭಾಗ ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಹಿಟ್ಟನ್ನೂ,
13ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಒಂದು ಭಾಗ ಹಿಟ್ಟನ್ನೂ, ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.
14ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್ ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್ ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್ ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ದಹನಬಲಿಯನ್ನು ಅರ್ಪಿಸಬೇಕು.
15ಇದಲ್ಲದೆ ನಿತ್ಯ ದಹನಬಲಿಯ ಹೊರತು, ಯೆಹೋವ ದೇವರಿಗೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು. ಪಸ್ಕಹಬ್ಬವು
16“ ‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು.
17ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
18ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.
19ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು.
20ಅವುಗಳ ಧಾನ್ಯ ಸಮರ್ಪಣೆಯನ್ನೂ, ಎಣ್ಣೆ ಕಲಸಿದ ಐದು ಕಿಲೋಗ್ರಾಂ ಹಿಟ್ಟನ್ನು ಒಂದೊಂದು ಹೋರಿಗೆ, ಹತ್ತನೇ ಎರಡು ಭಾಗ ಟಗರಿಗೂ ಅರ್ಪಿಸಬೇಕು.
21ಮತ್ತು ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಸುಮಾರು ಒಂದುವರೆ ಕಿಲೋಗ್ರಾಂ ಅರ್ಪಿಸಬೇಕು.
22ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.
23ನಿತ್ಯ ದಹನಬಲಿಯಾಗಿರುವ ಮುಂಜಾನೆಯ ದಹನಬಲಿಯ ಹೊರತಾಗಿ ಇವುಗಳನ್ನು ನೀವು ಅರ್ಪಿಸಬೇಕು.
24ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೆ ಪ್ರತಿದಿನವೂ ಯೆಹೋವ ದೇವರಿಗೆ ಸುವಾಸನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು. ಅದನ್ನೂ ಅದಕ್ಕೆ ತಕ್ಕ ಪಾನಾರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.
25ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ. ವಾರಗಳ ಹಬ್ಬ
26“ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.
27ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,
28ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಸುಮಾರು ಐದು ಕಿಲೋಗ್ರಾಂ ಹಿಟ್ಟನ್ನು ಪ್ರತಿಯೊಂದು ಹೋರಿಗೆ, ಸುಮಾರು ಮೂರುವರೆ ಕಿಲೋಗ್ರಾಂ ಟಗರಿಗೂ
29ಏಳು ಕುರಿಮರಿಗಳಲ್ಲಿ ಸುಮಾರು ಒಂದುವರೆ ಕಿಲೋಗ್ರಾಂ,
30ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಒಂದು ಹೋತವನ್ನು ಸಮರ್ಪಿಸಬೇಕು.
31ನಿತ್ಯವಾದ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಹೊರತಾಗಿ ಇವುಗಳ ಜೊತೆಗೆ ನೀವು ದೋಷವಿಲ್ಲದ ಪ್ರಾಣಿಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.