Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಅರಣ್ಯಕಾಂಡ 30

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಮೋಶೆಯು ಇಸ್ರಾಯೇಲರ ಗೋತ್ರಗಳ ನಾಯಕರ ಸಂಗಡ ಮಾತನಾಡಿ, “ಯೆಹೋವ ದೇವರು ಆಜ್ಞಾಪಿಸಿದ್ದೇನೆಂದರೆ:
2ಯಾವನಾದರೂ ಯೆಹೋವ ದೇವರಿಗೆ ಹರಕೆಯನ್ನು ಮಾಡಿದರೆ, ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ, ಅವನು ತನ್ನ ಮಾತನ್ನು ತಪ್ಪಿಸಬಾರದು. ಬಾಯಿಂದ ಹೊರಟ ಮಾತುಗಳ ಪ್ರಕಾರ ಎಲ್ಲವನ್ನೂ ಮಾಡಬೇಕು.
3“ಸ್ತ್ರೀಯು ಯೆಹೋವ ದೇವರಿಗೆ ಹರಕೆಮಾಡಿ, ತನ್ನ ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿ ದೇವರಿಗೆ ಹರಕೆಯನ್ನು ಮಾಡಿದಾಗ, ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆ ಮಾಡಿದಾಗ,
4ಅವಳ ತಂದೆಯು ಆ ವಿಷಯವನ್ನು ತಿಳಿದು ಮೌನವಾಗಿದ್ದರೆ, ಅವಳು ಆ ಹರಕೆ ಮತ್ತು ಪ್ರಮಾಣಗಳನ್ನು ನೆರವೇರಿಸಲೇಬೇಕು.
5ಆದರೆ ಅವಳ ತಂದೆ ಅದನ್ನು ಕೇಳಿ ಅವಳನ್ನು ತಡೆದರೆ, ಅವಳ ಎಲ್ಲಾ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುತ್ತವೆ. ಅವಳ ತಂದೆ ಅವಳನ್ನು ತಡೆದ ಕಾರಣ ಯೆಹೋವ ದೇವರು ಅವಳನ್ನು ಕ್ಷಮಿಸುವರು.
6“ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಹರಕೆಗಳು ಇಲ್ಲವೆ ಪ್ರಾಣವನ್ನು ಬಂಧಿಸುವ ಬಾಯಿಂದ ಬಂದ ಮಾತು ಇದ್ದರೆ,
7ಅವಳ ಗಂಡನು ಆ ವಿಷಯವನ್ನು ತಿಳಿದು ಸುಮ್ಮನಿದ್ದ ಪಕ್ಷದಲ್ಲಿ ಅವಳ ಹರಕೆಗಳೂ ಪ್ರತಿಜ್ಞೆಗಳೂ ನೆರವೇರಬೇಕು.
8ಆದರೆ ಅವಳ ಗಂಡನು ಅದನ್ನು ಕೇಳಿದಾಗ ಬೇಡವೆಂದು ತಡೆದು, ಅವಳ ಮೇಲೆ ಇರುವ ಅವಳ ಹರಕೆಯನ್ನೂ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆಯನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಯೆಹೋವ ದೇವರು ಅವಳಿಗೆ ಕ್ಷಮಿಸುವರು.
9“ಇದಲ್ಲದೆ ವಿಧವೆಯಾದರೂ ವಿವಾಹ ವಿಚ್ಛೇದಿತ ಮಹಿಳೆಯಾದರೂ ಇಂತಹ ಹರಕೆ ಇಲ್ಲವೆ ಪ್ರಮಾಣ ಮಾಡಿಕೊಂಡರೆ ಅವಳು ಅದನ್ನು ನೆರವೇರಿಸಬೇಕು.
10“ಅವಳು ತನ್ನ ಗಂಡನ ಮನೆಯಲ್ಲಿ ಅಂತಹ ಹರಕೆ ಇಲ್ಲವೆ ಪ್ರತಿಜ್ಞೆಯನ್ನು ಮಾಡಿದಾಗ,
11ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು, ಅವಳನ್ನು ತಡೆಯದ ಪಕ್ಷದಲ್ಲಿ, ಅವಳ ಸಮಸ್ತ ಹರಕೆಗಳೂ ಪ್ರತಿಜ್ಞೆಗಳೂ ನಿಲ್ಲುವುವು.
12ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕ ಮಾಡಿದ ಪಕ್ಷದಲ್ಲಿ ಅವಳ ಹರಕೆಗಳಿಗೋಸ್ಕರವೂ ಅವಳು ಕೈಗೊಂಡ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವುದಾಗಲಿ ನಿಲ್ಲದು. ಅವಳ ಗಂಡನು ಅವುಗಳನ್ನು ನಿರರ್ಥಕ ಮಾಡಿದ್ದಾನೆ. ಯೆಹೋವ ದೇವರು ಅವಳಿಗೆ ಕ್ಷಮಿಸುವರು.
13ಸಮಸ್ತ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಸಮಸ್ತ ಹರಕೆಗಳನ್ನೂ, ಅವಳ ಗಂಡನು ಅದನ್ನು ಸ್ಥಾಪಿಸಬಹುದು ಅಥವಾ ಅದನ್ನು ರದ್ದುಗೊಳಿಸಬಹುದು.
14ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ, ಅವನು ಅವಳ ಸಮಸ್ತ ಹರಕೆಗಳನ್ನೂ ಅವಳ ಮೇಲಿರುವ ಸಮಸ್ತ ಪ್ರತಿಜ್ಞೆಗಳನ್ನೂ ಅನುಮೋದಿಸಿದಂತಾಗುವುದು. ಅವನು ಕೇಳಿದ ದಿನದಲ್ಲಿ ಅದಕ್ಕೆ ಸುಮ್ಮನಿರುವುದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.
15ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ, ಅವನೇ ಅವಳ ಅಕ್ರಮವನ್ನು ಹೊರಬೇಕು.”
16ಗಂಡ ಹೆಂಡತಿಯರ ವಿಷಯದಲ್ಲಿಯೂ ತಂದೆಯ ಮನೆಯಲ್ಲಿ ಕನ್ಯಾವಸ್ಥೆಯಲ್ಲಿರುವ ಮಗಳ ವಿಷಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.