Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಅರಣ್ಯಕಾಂಡ 33

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಮೋಶೆ ಆರೋನರ ನಾಯಕತ್ವದಲ್ಲಿ ಈಜಿಪ್ಟ್ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲರ ಪ್ರಯಾಣದ ಹಂತಗಳ ವಿವರ ಇಲ್ಲಿವೆ.
2ಮೋಶೆಯು ಯೆಹೋವ ದೇವರ ಆಜ್ಞೆಯ ಪ್ರಕಾರ ಅವರ ಪ್ರಯಾಣದಲ್ಲಿ ತಂಗಿದ್ದ ಸ್ಥಳಗಳ ವಿವರಗಳನ್ನು ಬರೆದನು.
3ಅವರ ಪ್ರಯಾಣಗಳ ವಿವರಗಳು ಯಾವುವೆಂದರೆ: ಅವರು ಮೊದಲನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪಸ್ಕಹಬ್ಬದ ಮರುದಿನ ಇಸ್ರಾಯೇಲರು ಸಮಸ್ತ ಈಜಿಪ್ಟನವರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟು ಹೋದರು.
4ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.
5ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು.
6ಸುಕ್ಕೋತಿನಿಂದ ಹೊರಟು ಮರುಭೂಮಿಯ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.
7ಏತಾಮಿನಿಂದ ಹೊರಟು ಬಾಲ್ಜೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು, ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.
8ಪೀಹಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಮರುಭೂಮಿಗೆ ದಾಟಿದರು. ಆಗ ಅವರು ಮೂರು ದಿವಸದ ಪ್ರಯಾಣಮಾಡಿ ಏತಾಮೆಂಬ ಮರುಭೂಮಿಯಲ್ಲಿ ನಡೆದು ಮಾರಾದಲ್ಲಿ ಇಳಿದರು.
9ಮಾರಾದಿಂದ ಹೊರಟು ಏಲೀಮಿಗೆ ಬಂದರು. ಎಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.
10ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದುಕೊಂಡರು.
11ಕೆಂಪು ಸಮುದ್ರದಿಂದ ಹೊರಟು ಸೀನೆಂಬ ಮರುಭೂಮಿಯಲ್ಲಿ ಇಳಿದುಕೊಂಡು,
12ಸೀನೆಂಬ ಮರುಭೂಮಿಯಿಂದ ಹೊರಟು ದೊಫ್ಕದಲ್ಲಿ ಇಳಿದುಕೊಂಡರು.
13ದೊಫ್ಕದಿಂದ ಹೊರಟು ಆಲೂಷದಲ್ಲಿ ಇಳಿದುಕೊಂಡರು.
14ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.
15ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.
16ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.
17ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.
18ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
19ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.
20ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
21ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
22ರಿಸ್ಸದಿಂದ ಹೊರಟು ಕೆಹೇಲಾತಾನಲ್ಲಿ ಇಳಿದುಕೊಂಡರು.
23ಕೆಹೇಲಾತಾನಿಂದ ಹೊರಟು ಶೆಫೆರ್ ಪರ್ವತದಲ್ಲಿ ಇಳಿದುಕೊಂಡರು.
24ಶೆಫೆರ್ ಪರ್ವತದಿಂದ ಹೊರಟು ಹರಾದಾದಲ್ಲಿ ಇಳಿದುಕೊಂಡರು.
25ಹರಾದಾದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.
26ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.
27ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.
28ತೆರಹದಿಂದ ಹೊರಟು ಮಿತ್ಕಾದಲ್ಲಿ ಇಳಿದುಕೊಂಡರು.
29ಮಿತ್ಕಾದಿಂದ ಹೊರಟು ಹಷ್ಮೋನಾದಲ್ಲಿ ಇಳಿದುಕೊಂಡರು.
30ಹಷ್ಮೋನಾದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.
31ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.
32ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.
33ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
34ಯೊಟ್ಬಾತದಿಂದ ಹೊರಟು ಅಬ್ರೋನಾದಲ್ಲಿ ಇಳಿದುಕೊಂಡರು.
35ಅಬ್ರೋನಾದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.
36ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.
37ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂತ್ಯದಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.
38ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು.
39ಆರೋನನು ಹೋರ್ ಗುಡ್ಡದಲ್ಲಿ ಮರಣಹೊಂದಿದಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.
40ಆಗ ಕಾನಾನ್ ದೇಶದ ನೆಗೆವನಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಇಸ್ರಾಯೇಲರು ಬರುವುದನ್ನು ಕೇಳಿದನು.
41ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
42ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.
43ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
44ಓಬೋತಿನಿಂದ ಹೊರಟು ಮೋವಾಬಿನ ಮೇರೆಯಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
45ಇಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.
46ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.
47ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೆಬೋವಿನ ಪೂರ್ವದಲ್ಲಿರುವ ಅಬಾರೀಮ್ ಬೆಟ್ಟಗಳಲ್ಲಿ ಇಳಿದುಕೊಂಡರು.
48ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋವಿಗೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಇಳಿದುಕೊಂಡರು.
49ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ ಯೆಷೀಮೋತಿನಿಂದ ಮೋವಾಬಿನ ಬಯಲುಗಳಲ್ಲಿರುವ ಆಬೇಲ್ ಶಿಟ್ಟೀಮಿನ ಪರ್ಯಂತರದವರೆಗೂ ಇಳಿದುಕೊಂಡರು.
50ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,
51“ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,
52ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.
53ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
55“ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.
56ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.’ ”
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.