Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಜ್ಞಾನೋಕ್ತಿಗಳು 18

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.
2ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.
3ದುಷ್ಟತ್ವವು ಬಂದಾಗ ತಾತ್ಸಾರವೂ, ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
4ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ, ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
5ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ.
6ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
7ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.
8ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.
9ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು, ಕೆಡುಕನಿಗೆ ಸಹೋದರನಾಗಿದ್ದಾನೆ.
10ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.
11ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.
12ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.
13ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.
14ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?
15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.
16ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.
17ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ.
18ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.
19ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ.
20ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು.
21ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
22ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.
23ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.
24ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.