Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಜ್ಞಾನೋಕ್ತಿಗಳು 22

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.
2ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.
3ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.
4ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ, ಐಶ್ವರ್ಯವೂ ಮಾನವೂ ಜೀವವೂ ಆಗಿದೆ.
5ದುಷ್ಟರ ದಾರಿಯಲ್ಲಿ ಮುಳ್ಳುಗಳೂ, ಉರುಲುಗಳೂ ಇವೆ; ತನ್ನ ಜೀವವನ್ನು ಕಾಪಾಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
6ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.
7ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.
8ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.
9ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
10ಪರಿಹಾಸ್ಯ ಮಾಡುವವನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವುದು; ವಿವಾದವೂ ನಿಂದೆಯೂ ನಿಂತುಹೋಗುವುವು.
11ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ ಅರಸನು ಸ್ನೇಹಿತನಾಗಿರುವನು.
12ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ.
13ಸೋಮಾರಿಯು, “ಹೊರಗೆ ಸಿಂಹವಿದೆ! ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ.
14ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಯೆಹೋವ ದೇವರಿಗೆ ಸಿಟ್ಟನ್ನು ಎಬ್ಬಿಸುವವನು ಅದರಲ್ಲಿ ಬೀಳುವನು.
15ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು.
16ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು. ಜ್ಞಾನಿಯ ಮೂವತ್ತು ಹೇಳಿಕೆಗಳು ಮೊದಲನೆಯ ಹೇಳಿಕೆ
17ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ನಿನ್ನ ಹೃದಯವು ಅನ್ವಯಿಸಲಿ.
18ಏಕೆಂದರೆ ಅವುಗಳನ್ನು ನಿನ್ನ ಹೃದಯದಲ್ಲಿ ಇಟ್ಟು ಕಾಪಾಡು, ಅವು ನಿನ್ನ ತುಟಿಗಳ ಮೇಲೆ ಸಿದ್ಧವಿದ್ದರೆ ಮೆಚ್ಚುಗೆಯಾಗಿವೆ.
19ನಿನ್ನ ಭರವಸೆಯು ಯೆಹೋವ ದೇವರಲ್ಲಿ ಇರುವಂತೆ ಈ ದಿವಸ ನಿನಗೇ ತಿಳಿಯಪಡಿಸಿದ್ದೇನೆ.
20ನಾನು ನಿಮಗಾಗಿ ಮೂವತ್ತು ಹೇಳಿಕೆಗಳನ್ನು ಬರೆದಿಲ್ಲವೋ? ಸಲಹೆ ಮತ್ತು ಪರಿಜ್ಞಾನದ ಹೇಳಿಕೆಗಳು,
21ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು, ಆದ್ದರಿಂದ ನೀವು ಸೇವೆ ಸಲ್ಲಿಸುವವರಿಗೆ ಸತ್ಯವಾದ ವರದಿಗಳನ್ನು ಹಿಂತಿರುಗಿಸುವಂತೆ ನಾನು ನಿಮಗೆ ಬರೆದಿದ್ದೇನೆ. ಎರಡನೆಯ ಹೇಳಿಕೆ
22ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ.
23ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು. ಮೂರನೆಯ ಹೇಳಿಕೆ
24ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ;
25ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು, ನಿನ್ನನ್ನೇ ಉರುಲಿಗೆ ಸಿಕ್ಕಿಸಿಕೊಳ್ಳುವೆ. ನಾಲ್ಕನೆಯ ಹೇಳಿಕೆ
26ಬೇರೆಯವರ ಸಾಲವನ್ನು ಖಾತರಿಪಡಿಸಲೂ ಬೇರೊಬ್ಬರಿಗೆ ಭದ್ರತೆಯನ್ನು ನೀಡಲು ಒಪ್ಪಬೇಡ.
27ಸಾಲ ತೀರಿಸಲು ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದುಕೊಂಡು ಹೋಗುವನಲ್ಲವೇ? ಐದನೆಯ ಹೇಳಿಕೆ
28ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ. ಆರನೆಯ ಹೇಳಿಕೆ
29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.