Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಜ್ಞಾನೋಕ್ತಿಗಳು 31

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವಿಕ ಬುದ್ಧಿಮಾತುಗಳು:
2ನನ್ನ ಮಗನೇ ಕೇಳು, ನನ್ನ ಗರ್ಭಪುತ್ರನೇ ಕೇಳು! ನನ್ನ ಪ್ರಾರ್ಥನೆಗೆ ಉತ್ತರವಾದ ನನ್ನ ಮಗನೇ ಕೇಳು!
3ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸದಿರು. ರಾಜರನ್ನೇ ಹಾಳುಮಾಡಬಲ್ಲ ಸ್ತ್ರೀಯರಿಗೆ ನಿನ್ನ ಹಣ ಸಮಯವನ್ನು ವ್ಯಯಮಾಡದಿರು.
4ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ;
5ಕುಡಿದರೆ ಅವರು ನಿಯಮವನ್ನು ಮರೆತು, ಬಾಧಿತರಿಗೆ ನ್ಯಾಯವನ್ನು ನೀಡುವುದಿಲ್ಲ.
6ನಾಶವಾಗುವವರಿಗೆ ಮದ್ಯಪಾನವಿರಲಿ. ಮನೋವ್ಯಥೆಪಡುವವರಿಗೆ ಮದ್ಯವಿರಲಿ.
7ಅವರು ಕುಡಿದು ಬಡತನವನ್ನು ಮರೆಯಲಿ. ತಮ್ಮ ಯಾತನೆಯನ್ನು ಜ್ಞಾಪಕಕ್ಕೆ ತಾರದಿರಲಿ.
8ತಮಗಾಗಿ ಮಾತನಾಡಲು ಸಾಧ್ಯವಾಗದವರಿಗಾಗಿ ಮಾತನಾಡು, ಅನಾಥರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಟ್ಟು ಮಾತನಾಡು.
9ಅವರ ಪರವಾಗಿ ಮಾತನಾಡಿ, ನೀತಿನ್ಯಾಯವನ್ನು ಸ್ಥಾಪಿಸು. ಬಡವರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ಹಕ್ಕುಬಾಧ್ಯತೆಯನ್ನು ಕಾಪಾಡು. ಉಪಸಂಹಾರ: ಗುಣವತಿಯಾದ ಹೆಂಡತಿ
10ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.
11ಅವಳ ಪತಿಯ ಹೃದಯವು ಅವಳಲ್ಲಿ ಭರವಸೆ ಇಡುತ್ತದೆ, ಅವನಿಗೆ ಯಾವ ಆದಾಯದ ಕೊರತೆಯೂ ಇರುವುದಿಲ್ಲ.
12ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೆಯದನ್ನೇ ಮಾಡುವಳು.
13ಆಕೆಯು ಉಣ್ಣೆಯನ್ನೂ ಸೆಣಬನ್ನೂ ತಂದು, ತನ್ನ ಚಟುವಟಿಕೆಯ ಕೈಗಳಿಂದ ಕೆಲಸ ಮಾಡುವಳು.
14ಆಕೆಯು ವರ್ತಕರ ಹಡಗುಗಳಂತೆ ಇರುವಳು; ದೂರದಿಂದ ಆಹಾರವನ್ನು ಆಕೆಯು ತರುವಳು.
15ಇನ್ನೂ ಕತ್ತಲಿರುವಾಗಲೇ ಆಕೆಯು ಏಳುವಳು; ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು, ತನ್ನ ದಾಸಿಯರಿಗೆ ದಿನದ ಕೆಲಸವನ್ನು ಹಂಚುವಳು.
16ಆಕೆಯು ಹೊಲವನ್ನು ನೋಡಿ, ಅದನ್ನು ಕೊಂಡುಕೊಳ್ಳುತ್ತಾಳೆ. ತನ್ನ ಕೈಕೆಲಸದ ಆದಾಯದಿಂದ ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
17ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ. ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ.
18ತನ್ನ ವ್ಯಾಪಾರವು ಲಾಭದಾಯಕವೆಂದು ಅವಳು ನೋಡುತ್ತಾಳೆ. ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
19ಅವಳು ರಾಟೆಯ ಮೇಲೆ ಕೈಹಾಕಿ, ಕದಿರನ್ನು ಹಿಡಿಯುತ್ತಾಳೆ.
20ಆಕೆಯು ಬಡವರಿಗಾಗಿ ಕೈ ಬಿಚ್ಚಿ ಕೊಡುತ್ತಾಳೆ. ಹೌದು, ದಿಕ್ಕಿಲ್ಲದವರಿಗೆ ದಾನ ಮಾಡುತ್ತಾಳೆ.
21ಚಳಿಗಾಲದಲ್ಲಿ ತನ್ನ ಮನೆಯವರ ಬಗ್ಗೆ ಆಕೆಯು ಚಿಂತಿಸಬೇಕಾಗಿಲ್ಲ. ಏಕೆಂದರೆ ಆಕೆಯ ಮನೆಯವರೆಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.
22ಆಕೆಯು ತಾನೇ ಕಂಬಳಿಗಳನ್ನು ನೇಯುತ್ತಾಳೆ. ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.
23ಆಕೆಯ ಪತಿಯು ಪಟ್ಟಣದಲ್ಲಿ ಸನ್ಮಾನಿತ. ದೇಶದ ಹಿರಿಯರ ಮಧ್ಯದಲ್ಲಿ ಪ್ರಸಿದ್ಧನಾಗಿ ಕುಳಿತಿರುವನು.
24ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ. ಆಕೆಯು ನಡುಕಟ್ಟುಗಳನ್ನು ತಯಾರಿಸಿ ವರ್ತಕರಿಗೆ ಒದಗಿಸುತ್ತಾಳೆ.
25ಆಕೆಯ ಉಡುಪು ಬಲವೂ ಘನತೆಯೂ ಆಗಿವೆ. ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು.
26ಆಕೆಯು ಜ್ಞಾನದಿಂದ ಮಾತನಾಡುತ್ತಾಳೆ. ಆಕೆಯ ನಾಲಿಗೆಯ ಮೇಲೆ ನಂಬಿಗಸ್ತ ಶಿಕ್ಷಣ ಇದೆ.
27ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ. ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ.
28ಆಕೆಯ ಮಕ್ಕಳು ಎದ್ದು, ಆಕೆಯನ್ನು ಧನ್ಯಳೆಂದು ಕರೆಯುವರು. ಆಕೆಯ ಪತಿಯು ಸಹ ಆಕೆಯನ್ನು,
29“ಬಹುಮಂದಿ ಸ್ತ್ರೀಯರು ಗುಣವತಿಯರಾಗಿದ್ದಾರೆ. ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು,” ಎಂದು ಹೊಗಳುವನು.
30ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.
31ಆಕೆಯ ಕೈಕೆಲಸಕ್ಕೆ ತಕ್ಕ ಪ್ರತಿಫಲವನ್ನು ಸಲ್ಲಿಸಿ ಗೌರವಿಸಿರಿ. ಪಟ್ಟಣದ ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.