Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 11

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ?
2“ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ; ಬಾಣವನ್ನು ಬಿಲ್ಲಿಗೆ ಹೂಡಿ, ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ.
3ಅಸ್ತಿವಾರಗಳೇ ಕೆಡವುತ್ತಿರಲು, ನೀತಿವಂತನು ಏನು ಮಾಡಲು ಸಾಧ್ಯ?”
4ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.
5ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.
6ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.
7ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.