Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 115

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ನಮಗಲ್ಲ ಯೆಹೋವ ದೇವರೇ, ನಮಗಲ್ಲ, ನಿಮ್ಮ ಹೆಸರಿಗೆ ಮಾತ್ರ ಮಹಿಮೆ, ನಿಮ್ಮ ಪ್ರೀತಿ ಮತ್ತು ಸತ್ಯತೆಯ ನಿಮಿತ್ತ ನಿಮಗೆ ಮಹಿಮೆಯಾಗಲಿ.
2“ಅವರ ದೇವರು ಎಲ್ಲಿ?” ಎಂದು ಜನಾಂಗಗಳು ಏಕೆ ಹೇಳಬೇಕು?
3ನಮ್ಮ ದೇವರು ಪರಲೋಕದಲ್ಲಿದ್ದಾರೆ; ಅವರು ಇಚ್ಛಿಸುವುದನ್ನೆಲ್ಲಾ ಮಾಡುತ್ತಾರೆ.
4ಜನರ ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.
5ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ; ಕಣ್ಣುಗಳಿವೆ, ಕಾಣುವುದಿಲ್ಲ.
6ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಮೂಗು ಉಂಟು, ಮೂಸುವದಿಲ್ಲ.
7ಕೈಗಳುಂಟು, ಮುಟ್ಟುವುದಿಲ್ಲ; ಕಾಲುಗಳುಂಟು, ನಡೆಯುವುದಿಲ್ಲ; ಅವರ ಗಂಟಲಿನಿಂದ ಧ್ವನಿ ಉಚ್ಚರಿಸಲು ಸಾಧ್ಯವಿಲ್ಲ.
8ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.
9ಇಸ್ರಾಯೇಲರ ಮನೆಯವರೇ, ಯೆಹೋವ ದೇವರಲ್ಲಿ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ, ಗುರಾಣಿಯೂ ಆಗಿದ್ದಾರೆ.
10ಆರೋನನ ಮನೆಯವರೇ, ಯೆಹೋವ ದೇವರಲ್ಲಿ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ, ಗುರಾಣಿಯೂ ಆಗಿದ್ದಾರೆ.
11ಯೆಹೋವ ದೇವರಿಗೆ ಭಯಪಡುವವರೇ, ನೀವು ಯೆಹೋವ ದೇವರಲ್ಲಿಯೇ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ ಗುರಾಣಿಯೂ ಆಗಿದ್ದಾರೆ.
12ಯೆಹೋವ ದೇವರು ನಮ್ಮನ್ನು ಜ್ಞಾಪಕ ಮಾಡಿಕೊಂಡಿದ್ದಾರೆ, ಅವರು ನಮ್ಮನ್ನು ಆಶೀರ್ವದಿಸುವರು; ಇಸ್ರಾಯೇಲರ ಮನೆಯನ್ನು ಆಶೀರ್ವದಿಸುವರು; ಆರೋನನ ಮನೆಯನ್ನು ಆಶೀರ್ವದಿಸುವರು.
13ಯೆಹೋವ ದೇವರಿಗೆ ಭಯ ಪಡುವವರಾದ ಹಿರಿಯರನ್ನೂ ಕಿರಿಯರನ್ನೂ ಬೇಧವಿಲ್ಲದೇ ಆಶೀರ್ವದಿಸುವರು.
14ಯೆಹೋವ ದೇವರು ನಿಮ್ಮನ್ನು ಅಭಿವೃದ್ಧಿಪಡಿಸುವರು ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವರು.
15ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದ ನೀವು ಆಶೀರ್ವಾದ ಹೊಂದಿದವರು.
16ಉನ್ನತ ಆಕಾಶಗಳು ಯೆಹೋವ ದೇವರದೇ, ಆದರೆ ಅವರು ಭೂಮಿಯನ್ನು ಮಾನವರಿಗೆ ಕೊಟ್ಟಿದ್ದಾರೆ.
17ಸತ್ತವರೂ ಮೌನಲೋಕವನ್ನು ಇಳಿದವರೆಲ್ಲರೂ ಯೆಹೋವ ದೇವರನ್ನು ಸ್ತುತಿಸುವುದಿಲ್ಲ.
18ಆದರೆ ನಾವು ಈಗಲೂ ಯುಗಯುಗಕ್ಕೂ ಯೆಹೋವ ದೇವರನ್ನು ಸ್ತುತಿಸುವೆವು. ಯೆಹೋವ ದೇವರನ್ನು ಸ್ತುತಿಸಿರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.