Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಕೀರ್ತನೆಗಳು 135

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಯೆಹೋವ ದೇವರ ಆಲಯದಲ್ಲಿಯೂ,
2ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವ ಯೆಹೋವ ದೇವರ ಸೇವಕರೇ, ಸ್ತುತಿಸಿರಿ.
3ಯೆಹೋವ ದೇವರನ್ನು ಸ್ತುತಿಸಿರಿ, ಯೆಹೋವ ದೇವರು ಒಳ್ಳೆಯವರು; ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ, ಏಕೆಂದರೆ ಅದು ರಮ್ಯವಾದದ್ದು.
4ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ.
5ಯೆಹೋವ ದೇವರು ದೊಡ್ಡವರು; ನಮ್ಮ ಯೆಹೋವ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರೆಂದು ನಾನು ತಿಳಿದಿದ್ದೇನೆ.
6ಯೆಹೋವ ದೇವರು ಆಕಾಶದಲ್ಲಿಯೂ, ಭೂಮಿಯಲ್ಲಿಯೂ, ಸಮುದ್ರದಲ್ಲಿಯೂ, ಎಲ್ಲಾ ಅಗಾಧಗಳಲ್ಲಿಯೂ ತಾವು ಅಪೇಕ್ಷಿಸುವುದನ್ನೆಲ್ಲಾ ಮಾಡುತ್ತಾರೆ.
7ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ.
8ದೇವರು ಈಜಿಪ್ಟ್ ಜನರನ್ನು ಮೊದಲುಗೊಂಡು ಪಶುಗಳವರೆಗೂ ಚೊಚ್ಚಲುಗಳನ್ನೆಲ್ಲಾ ದಂಡಿಸಿದರು.
9ಈಜಿಪ್ಟೇ, ನಿಮ್ಮ ಮಧ್ಯದಲ್ಲಿ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ದೇವರು ಫರೋಹನಿಗೂ, ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.
10ದೇವರು ದೊಡ್ಡ ಜನಾಂಗಗಳನ್ನೂ, ಬಲವಾದ ಅರಸರನ್ನೂ ದಂಡಿಸಿದರು.
11ಅಮೋರಿಯರ ಅರಸನಾದ ಸೀಹೋನನನ್ನು, ಬಾಷಾನಿನ ಅರಸನಾದ ಓಗನನ್ನೂ, ಕಾನಾನಿನ ಎಲ್ಲಾ ಅರಸರನ್ನೂ ದಂಡಿಸಿದರು.
12ದೇವರು ದೇಶವನ್ನು ಸೊತ್ತಾಗಿ ತಮ್ಮ ಪ್ರಜೆಯಾದ ಇಸ್ರಾಯೇಲಿಗೆ ಕೊಟ್ಟರು.
13ಯೆಹೋವ ದೇವರೇ, ನಿಮ್ಮ ನಾಮವೂ, ನಿಮ್ಮ ಪ್ರಭಾವವೂ ತಲತಲಾಂತರಕ್ಕೂ ಸ್ಮರಣೆಯಾಗಿರುವುದು.
14ಯೆಹೋವ ದೇವರು ತಮ್ಮ ಜನರಿಗೆ ನ್ಯಾಯವನ್ನು ಸ್ಥಾಪಿಸುವರು, ತಮ್ಮ ಸೇವಕರ ಮೇಲೆ ಅನುಕಂಪವನ್ನೂ ತೋರಿಸುವರು.
15ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.
16ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ; ಕಣ್ಣುಗಳಿವೆ, ಕಾಣುವುದಿಲ್ಲ.
17ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಅವುಗಳ ಬಾಯಲ್ಲಿ ಶ್ವಾಸ ಇಲ್ಲ.
18ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.
19ಇಸ್ರಾಯೇಲ್ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; ಆರೋನನ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ.
20ಲೇವಿಯ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; ದೇವರಲ್ಲಿ ಭಯಭಕ್ತಿಯುಳ್ಳವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ.
21ಯೆರೂಸಲೇಮಿನಲ್ಲಿ ವಾಸಿಸುವವ ಯೆಹೋವ ದೇವರನ್ನು ಕೊಂಡಾಡಿ ಸ್ತುತಿಸಿರಿ; ಅವರ ಕೀರ್ತಿಯು ಚೀಯೋನಿನಿಂದ ಹೊರಗೂ ಹಬ್ಬಲಿ. ಯೆಹೋವ ದೇವರಿಗೆ ಸ್ತೋತ್ರ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.